Homeಮುಖಪುಟ5 ದಿನಗಳ ಸಂಸತ್ತಿನ ವಿಶೇಷ ಅಧಿವೇಶನ ಕರೆದ ಕೇಂದ್ರ ಸರಕಾರ

5 ದಿನಗಳ ಸಂಸತ್ತಿನ ವಿಶೇಷ ಅಧಿವೇಶನ ಕರೆದ ಕೇಂದ್ರ ಸರಕಾರ

- Advertisement -
- Advertisement -

ಸೆಪ್ಟೆಂಬರ್ 18 ರಿಂದ 5 ದಿನಗಳ ಕಾಲ ಸಂಸತ್ತಿನ ವಿಶೇಷ 5 ದಿನಗಳ ಅಧಿವೇಶನವನ್ನು ಕೇಂದ್ರ ಸರ್ಕಾರ ಕರೆದಿದೆ.

ಈ ಕುರಿತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದು, ಸರ್ಕಾರ ಸೆಪ್ಟೆಂಬರ್ 18 ರಿಂದ ಸೆಪ್ಟೆಂಬರ್ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದೆ ಎಂದು ಹೇಳಿದ್ದಾರೆ.

ಸಂಸತ್ತಿನ ವಿಶೇಷ ಅಧಿವೇಶನವನ್ನು (17ನೇ ಲೋಕಸಭೆಯ 13ನೇ ಅಧಿವೇಶನ ಮತ್ತು ರಾಜ್ಯಸಭೆಯ 261ನೇ ಅಧಿವೇಶನ) ಸೆಪ್ಟೆಂಬರ್ 18ರಿಂದ 22ರವರೆಗೆ ಐದು ದಿನಗಳ ಕಾಲ ಅಧಿವೇಶನಗಳನ್ನು ನಡೆಸಲಾಗುತ್ತಿದೆ. ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಮುನ್ನೋಡುತ್ತಿದ್ದೇವೆ. ಎಂದು ಜೋಶಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನ ಜು.20ರಿಂದ ಪ್ರಾರಂಭವಾಗಿ ಆ.11ರವರೆಗೆ ನಡೆದಿತ್ತು. ಬಿಜೆಪಿಯ ಎನ್‌ಡಿಎ ಒಕ್ಕೂಟ  ಮತ್ತು ವಿರೋಧ ಪಕ್ಷ I.N.D.I.A  ಬಣದ ನಡುವೆ ಸದನದಲ್ಲಿ ಭಾರೀ ವಾಕ್ಸಮರಗಳು ನಡೆದಿತ್ತು. ಮಣಿಪುರ ಜನಾಂಗೀಯ ಹಿಂಸಾಚಾರದ ಬಗ್ಗೆ ಪ್ರಧಾನಿ ಪ್ರತಿಕ್ರಿಯಿಸುವಂತೆ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಪಟ್ಟು ಹಿಡಿದಿತ್ತು. ಇದೇ ವಿಚಾರಕ್ಕೆ I.N.D.I.A  ಒಕ್ಕೂಟ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಿತ್ತು.

ನವದೆಹಲಿಯಲ್ಲಿ ನಡೆಯಲಿರುವ G20 ಸಮ್ಮೇಳನದ ಬಳಿಕ ಅಧಿವೇಶನ ನಡೆಯಲಿದ್ದು, ಯಾವ ವಿಚಾರದ ಬಗ್ಗೆ ವಿಶೇಷ ಅಧಿವೇಶನ ನಡೆಯಲಿದೆ ಎಂಬ ಬಗ್ಗೆ ಸ್ಪಷ್ಟವಾಗಿ ಮಾಹಿತಿ ಬಹಿರಂಗಪಡಿಸಿಲ್ಲ.

ಇದನ್ನು ಓದಿ: ನಾಗುಪುರ ವಿವಿ MA ಪಠ್ಯಪುಸ್ತಕದಲ್ಲಿ ಬಿಜೆಪಿ ಇತಿಹಾಸ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಔಷಧ ತಯಾರಕರ ಪರವಾಗಿ ಇಡೀ ವ್ಯವಸ್ಥೆ ಕೆಲಸ ಮಾಡುತ್ತಿರುವುದೇಕೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮತ್ತು ಚಿಲ್ಲರೆ ವ್ಯಾಪಾರಿಗಳು ಅವುಗಳನ್ನು ಖರೀದಿಸುವ ಬೆಲೆಯ ನಡುವಿನ ಭಾರಿ ವ್ಯತ್ಯಾಸದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಔಷಧ ತಯಾರಕರಿಗೆ...

ಚುನಾವಣಾ ಆಯೋಗದ ಅಫಿಡವಿಟ್ ಕುರಿತ ‘ಲೈವ್ ಲಾ’ ರೀಲ್ ತೆಗೆದುಹಾಕಿದ ಇನ್‌ಸ್ಟಾಗ್ರಾಮ್

ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ (ಅ.26) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಕುರಿತು ವಿವರಿಸುವ ತನ್ನ ರೀಲ್ ಅನ್ನು ಇನ್‌ಸ್ಟಾಗ್ರಾಂ ತೆಗೆದುಹಾಕಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ (Livelaw.in)...

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ (Declaration not a part of...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...