Homeಮುಖಪುಟಗಣೇಶ ಚತುರ್ಥಿ ದಿನದಿಂದ ಸಂಸತ್ತಿನ ಹೊಸ ಕಟ್ಟಡದಲ್ಲಿ ವಿಶೇಷ ಅಧಿವೇಶನ  

ಗಣೇಶ ಚತುರ್ಥಿ ದಿನದಿಂದ ಸಂಸತ್ತಿನ ಹೊಸ ಕಟ್ಟಡದಲ್ಲಿ ವಿಶೇಷ ಅಧಿವೇಶನ  

- Advertisement -
- Advertisement -

ಸಂಸತ್ತಿನ ವಿಶೇಷ ಅಧಿವೇಶನ ಸೆಪ್ಟಂಬರ್‌ 18ರಂದು ಆರಂಭವಾಗಲಿದ್ದು, ಮೊದಲ ದಿನದ ಅಧಿವೇಶನ ಹಳೆಯ ಸಂಸತ್ತಿನ ಕಟ್ಟಡದಲ್ಲಿ ಆರಂಭವಾಗಲಿದ್ದು, ಸೆ.19ರಂದು ಗಣೇಶ ಚತುರ್ಥಿ ದಿನ ಅಧಿವೇಶನ ಸಂಸತ್ತಿನ ಹೊಸ ಕಟ್ಟಡಕ್ಕೆ ಸ್ಥಳಾಂತರವಾಗಲಿದೆ ಎಂದು ಎಎನ್‌ಐ ತಿಳಿಸಿದೆ.

ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನ ಸೆ.18ರಿಂದ 22ರವರೆಗೆ ನಡೆಯಲಿದೆ. ಅಧಿವೇಶನದಲ್ಲಿ ‘ಇಂಡಿಯಾ’ವನ್ನು ‘ಭಾರತ’ ಎಂದು ಬದಲಾಯಿಸಲು ಸಂಸತ್ತಿನಲ್ಲಿ ನಿರ್ಣಯ ತರುವ ಸಾಧ್ಯತೆ ಇದೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ.

ಸಂಸತ್ತಿನ ವಿಶೇಷ ಅಧಿವೇಶನವನ್ನು ಸರಕಾರ ಕರೆದ ಬಗ್ಗೆ ಪ್ರತಿಕ್ರಿಯಿಸಿದ ಪ್ರತಿಪಕ್ಷಗಳು, ಸರಕಾರ ನೈಜ ಸಮಸ್ಯೆಗಳಿಂದ ಜನರ ದಿಕ್ಕನ್ನು ಬೇರೆಡೆ ಸೆಳೆಯಲು ನಡೆಸುವ ಪ್ರಯತ್ನದ ಭಾಗವಾಗಿದೆ ಎಂದು ಹೇಳಿದೆ. ಇದಲ್ಲದೆ ವಿಶೇಷ ಅಧಿವೇಶನ ಪ್ರಾರಂಭಿಸುವ ಬಗ್ಗೆ ವಿರೋಧ ಪಕ್ಷಗಳ ಜೊತೆ ಮಾತುಕತೆ ನಡೆಸಿಲ್ಲ. ಇದು  ಪ್ರಜಾಪ್ರಭುತ್ವ ವ್ಯವಸ್ಥೆಯ ರೀತಿಯಲ್ಲ ಎಂದು ಪ್ರತಿಪಕ್ಷಗಳು ಹೇಳಿದೆ.

ಪ್ರತಿಪಕ್ಷಗಳ ಜೊತೆ ಚರ್ಚಿಸದೆ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿದ್ದರೂ,  INDIA ಒಕ್ಕೂಟ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಭಾಗವಹಿಸಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಹೇಳಿದ್ದಾರೆ. ಅಧಿವೇಶನದಲ್ಲಿ ವಿರೋಧ ಪಕ್ಷಗಳಿಗೆ ಜನರ ಸಮಸ್ಯೆ ಬಗ್ಗೆ ಧ್ವನಿ ಎತ್ತಲು ಅವಕಾಶ ಸಿಗುತ್ತದೆ ಎಂಬ ಭಾವನೆಯೊಂದಿಗೆ ನಾವು ಅಧಿವೇಶನದಲ್ಲಿ ಭಾಗವಹಿಸುತ್ತೇವೆ ಎಂದು ಹೇಳಿದ್ದಾರೆ.

ಇದಲ್ಲದೆ ಸಂಸತ್ತಿನ ವಿಶೇಷ ಅಧಿವೇಶನದ ಕುರಿತು ಪ್ರಧಾನಿಗೆ ಪತ್ರ ಬರೆದಿರುವ ಸೋನಿಯಾ ಗಾಂಧಿ ಅಧಿವೇಶನದ ಅಜೆಂಡಾದ ಬಗ್ಗೆ ವಿವರವನ್ನು ನೀಡುವಂತೆ ಕೇಂದ್ರ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಇದನ್ನು ಓದಿ: ಗಾಂಧೀಜಿಯವರನ್ನು ಕೊಂದ ಮನಸ್ಥಿತಿಯವರೇ ಗೌರಿ ಲಂಕೇಶ್‌ರನ್ನು ಹತ್ಯೆ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...