Homeಅಂತರಾಷ್ಟ್ರೀಯಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ತುಲಸೇಂದ್ರಪುರಂ ದೇವಾಲಯದ ಫಲಕದಲ್ಲಿ ಇತರ ದಾನಿಗಳ ಜೊತೆಯಲ್ಲಿ, 2014 ರಲ್ಲಿ 5,000 ರೂಪಾಯಿ ದಾನ ನೀಡಿದ್ದ ಕಮಲಾ ಹ್ಯಾರಿಸ್ ಅವರ ಹೆಸರನ್ನು ಕೆತ್ತಲಾಗಿದೆ. 

- Advertisement -
- Advertisement -

ಅಮೆರಿಕ ಚುನಾವಣೆ ಆರಂಭವಾಗುತ್ತಿದ್ದಂತೆ ಡೆಮಾಕ್ರಟಿಕ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಾಗಿ ಅವರ ಪೂರ್ವಜರಿದ್ದ ಹಳ್ಳಿಯಲ್ಲಿ ವಿಶೇಷ ಪೂಜೆ-ಪ್ರಾರ್ಥನೆಗಳು ನಡೆದಿವೆ. ಅವರ ಗೆಲುವಿಗಾಗಿ ಹಾರೈಸಿ ಹಳ್ಳಿಯ ರಸ್ತೆಗಳಲ್ಲಿ ಈ ಹಿಂದೆ ಬ್ಯಾನರ್‌ಗಳನ್ನು ಹಾಕಲಾಗಿತ್ತು. ಇಂದು ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆದಿದೆ.

ದಕ್ಷಿಣ ಭಾರತದ ತಮಿಳುನಾಡಿನ ತುಲಸೇಂದ್ರಪುರಂ ಗ್ರಾಮಸ್ಥರು ಕಮಲ ಹ್ಯಾರಿಸ್ ಅವರ ಬ್ಯಾನರ್‌ಗಳನ್ನು ಹಾಕಿ, ದೇವಾಲಯಗಳಲ್ಲಿ ಸಾಲುಗಟ್ಟಿ ನಿಂತು ಪೂಜೆ ಮಾಡಿಸಿ ಆಕೆಯ ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ.

ಚೆನ್ನೈಯಿಂದ ಸುಮಾರು 320 ಕಿ.ಮೀ ದೂರದಲ್ಲಿರುವ ತುಲಸೇಂದ್ರಪುರಂ, ಕಮಲಾ ಹ್ಯಾರಿಸ್ ಅಜ್ಜ ಪಿ.ವಿ. ಗೋಪಾಲನ್ ಶತಮಾನಕ್ಕೂ ಹಿಂದೆ ಜನಿಸಿದ ಊರು. ದಕ್ಷಿಣ ಏಷ್ಯಾದ ಮೊದಲ ಯುಎಸ್ ಸೆನೆಟರ್ ಎನಿಸಿಕೊಂಡಿರುವ ಕಮಲಾ ಹ್ಯಾರಿಸ್‌ ಅವರ ಸಾಧನೆ ಬಗ್ಗೆ ತುಲಸೇಂದ್ರಪುರಂ ನಿವಾಸಿಗಳು ಹೆಮ್ಮೆಯಿಂದ ಮಾತನಾಡುತ್ತಾರೆ. ಚುನಾವಣಾ ಫಲಿತಾಂಶಕ್ಕಾಗಿ ಅಮೆರಿಕನ್ನರಂತೆ ಇಲ್ಲಿನ ಜನರು ಕಾಯುತ್ತಿದ್ದಾರೆ.

ಕಮಲಾ

ತಮ್ಮ ಕುಟುಂಬದೊಂದಿಗೆ ಹಳ್ಳಿಯ ಸಂಬಂಧವನ್ನು ವಿವರಿಸಿದ ಎಂ.ಎಸ್. ಹ್ಯಾರಿಸ್ ಅವರ ಚಿಕ್ಕಮ್ಮ ಡಾ.ಸರಳಾ ಗೋಪಾಲನ್ “ತುಲಸೇಂದ್ರಪುರಂ ಗ್ರಾಮ ದೇವರು ನನ್ನ ತಂದೆಯ ಕುಟುಂಬ ದೇವತೆ. ಕುಟುಂಬದಲ್ಲಿ ಮದುವೆ ಅಥವಾ ವಿಶೇಷ ಸಂದರ್ಭ ಬಂದಾಗಲೆಲ್ಲಾ ನಾವು ದೇವಸ್ಥಾನಕ್ಕೆ ಭೇಟಿ ನೀಡುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: ಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಇಂದು ಗ್ರಾಮದಲ್ಲಿ ನಡೆಯುತ್ತಿರುವ ವಿಶೇಷ ಪೂಜೆ ಪ್ರಾರ್ಥನೆಗಳ ಬಗ್ಗೆ ನನಗೆ ತಿಳಿದಿದೆ ಎಂದು ಡಾ.ಸರಳಾ ಹೇಳಿದರು. “ನಾನು ಪ್ರತಿವರ್ಷ ದೇವಸ್ಥಾನಕ್ಕೆ ಹೋಗಿ ನಮ್ಮ ಕುಟುಂಬದ ಪ್ರತಿಯೊಬ್ಬರಿಗಾಗಿ ಪ್ರಾರ್ಥಿಸುತ್ತೇನೆ. ಈ ವರ್ಷ, ಕೊರೊನಾದಿಂದಾಗಿ ನಾನು ಹೋಗಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದರು.

ತುಲಸೇಂದ್ರಪುರಂ ದೇವಾಲಯದ ಫಲಕದಲ್ಲಿ ಇತರ ದಾನಿಗಳ ಜೊತೆಯಲ್ಲಿ, 2014 ರಲ್ಲಿ 5,000 ರೂಪಾಯಿ ದಾನ ನೀಡಿದ್ದ ಕಮಲಾ ಹ್ಯಾರಿಸ್ ಅವರ ಹೆಸರನ್ನು ಕೆತ್ತಲಾಗಿದೆ.

“ಅವರ ಸಾಧನೆಗಳ ಬಗ್ಗೆ ನಮಗೆ ಸಂತೋಷ ಮತ್ತು ಹೆಮ್ಮೆ ಇದೆ. ನಮ್ಮ ಗ್ರಾಮದ ಮೂಲವನ್ನು ಹೊಂದಿರುವ ಕಮಲಾ ಅವರು ಅಮೆರಿಕ ಉಪಾಧ್ಯಕ್ಷರಾಗುವ ಸ್ಪರ್ಧೆಯಲ್ಲಿದ್ದಾರೆ. ಅವರ ಗೆಲುವಿಗಾಗಿ ಪೂಜೆ-ಪ್ರಾರ್ಥನೆ ನಡೆದಿದೆ” ಎಂದು ದೇವಾಲಯದ ಆಡಳಿತಾಧಿಕಾರಿ ರಮಣನ್ ತಿಳಿಸಿದ್ದಾರೆ.

Kamala Harris: Watch: US Vice presidential candidate Kamala Harris' posters pop up in Tamil Nadu - The Economic Times Video | ET Now

ಇತ್ತಿಚೆಗೆ ಕಮಲಾ ಹ್ಯಾರಿಸ್ ತನ್ನ ನೆಚ್ಚಿನ ಭಾರತೀಯ ತಿನಿಸುಗಳ ಬಗ್ಗೆ ಹೇಳುವಾಗ, ಇಡ್ಲಿ, ಒಳ್ಳೆಯ ಸಾಂಬಾರ್” ಮತ್ತು “ಯಾವುದೇ ರೀತಿಯ ಟಿಕ್ಕಾ” ಮೇಲಿನ ತನ್ನ ಪ್ರೀತಿಯನ್ನು ಹಂಚಿಕೊಂಡಿದ್ದರು. ಈ ಬಾರಿ ಜೋ ಬಿಡೆನ್ ಆಯ್ಕೆಯಾದರೆ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಲಿದ್ದಾರೆ.

ಕಮಲಾ ಹ್ಯಾರಿಸ್ ತಮ್ಮ 5ನೇ ವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದರು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು. ಗ್ರಾಮದಲ್ಲಿ ಗೋಪಾಲನ್ ಅವರ ಮನೆ ಪಾಳು ಬಿದ್ದು ಹೋಗಿದ್ದು, ಅಸ್ತಿತ್ವದಲ್ಲಿಲ್ಲ.

ಹ್ಯಾರಿಸ್ ಅವರ ಅಜ್ಜ ಪಿ.ವಿ. ಗೋಪಾಲನ್ ಮತ್ತು ಅವರ ಕುಟುಂಬ ಸುಮಾರು 90 ವರ್ಷಗಳ ಹಿಂದೆ ತುಲಸೇಂದ್ರಪುರಂನಿಂದ ಚೆನ್ನೈಗೆ ವಲಸೆ ಹೋಗಿದ್ದರು. ಕಮಲಾ ಹ್ಯಾರಿಸ್‌ ಅವರ ತಾಯಿ ತಮಿಳುನಾಡಿನವರಾದರೇ, ಅವರ ತಂದೆ, ಜಮೈಕಾದವರು. ಈ ಇಬ್ಬರೂ ಅಧ್ಯಯನಕ್ಕಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದರು.


ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...