Homeಮುಖಪುಟಉತ್ತರ ಪ್ರದೇಶ: ವಿಶೇಷ ಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

ಉತ್ತರ ಪ್ರದೇಶ: ವಿಶೇಷ ಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ವಿಶೇಷ ಚೇತನ (ಮಾನಸಿಕ ಅಸ್ವಸ್ಥೆ, ಕಿವುಡು ಹಾಗೂ ಮೂಗಿ) ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ನಡೆದಿದೆ.

ಅತ್ಯಾಚಾರಕ್ಕೂ ಮುನ್ನ ನಿರ್ಜನ ಪ್ರದೇಶದ ರಸ್ತೆಯಲ್ಲಿ ದುಷ್ಕರ್ಮಿಗಳು ಯುವತಿಯನ್ನು ಬೈಕ್‌ನಲ್ಲಿ ಬೆನ್ನಟ್ಟಿಕೊಂಡು ಹೋದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯ ಇಬ್ಬರು ಶಂಕಿತ ಆರೋಪಿಗಳನ್ನು ಸೆರೆ ಹಿಡಿಯಲು ಸಹಾಯ ಮಾಡಿತು ಎಂದು ಪೊಲೀಸರು ಬುಧವಾರ (ಆ.13) ತಿಳಿಸಿದ್ದಾರೆ.

ಪೊಲೀಸರು ಫೈರಿಂಗ್ ನಡೆಸಿ ಇಬ್ಬರು ಆರೋಪಿಗಳಾದ ಅಂಕೂರ್ ವರ್ಮಾ ಮತ್ತು ಹರ್ಷಿತ್ ಪಾಂಡೆ ಎಂಬವರನ್ನು ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಗಳು ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಕಾಸ್ ಕುಮಾರ್ ಹೇಳಿದ್ದಾರೆ.

ಎರಡು ದಿನಗಳ ಹಿಂದೆ ಸಂತ್ರಸ್ತೆಯ ಸಹೋದರ ಕೊತ್ವಾಲಿ ದೇಹತ್‌ ಪೊಲೀಸ್ ಠಾಣೆಗೆ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂತು. ದೂರು ಆಧರಿಸಿ ಸೋಮವಾರ (ಆ.11) ಎಫ್‌ಐಆರ್ ದಾಖಲಿಸಲಾಗಿತ್ತು. ತಕ್ಷಣ ತನಿಖೆ ಆರಂಭಿಸಲಾಗಿತ್ತು ಎಂದು ಎಸ್‌ಪಿ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆ ಮಾವನ ಮನೆಯಿಂದ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ದಾರಿ ಮಧ್ಯೆ ಆಕೆಯನ್ನು ಬಲವಂತವಾಗಿ ಬೈಕ್‌ನಲ್ಲಿ ಕರೆದೊಯ್ದ ಅಪರಿಚಿತರ ಗುಂಪು, ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದೆ ಎಂದು ಸಹೋದರ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ದೌರ್ಜನ್ಯ ನಡೆದ ಸ್ಥಳವನ್ನು ಪರಿಶೀಲನೆ ನಡೆಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ತನಿಖೆಯನ್ನು ತ್ವರಿತಗೊಳಿಸಲು ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸಿ ಸಿಸಿಟಿವಿ ದೃಶ್ಯಾವಳಿಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದ್ದಾರೆ ಎಂದು ಹೆಚ್ಚುವರಿ ಎಸ್ಪಿ ವಿಶಾಲ್ ಪಾಂಡೆ ತಿಳಿಸಿದ್ದಾರೆ.

ಸಂತ್ರಸ್ತೆ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ ಎಂದು ವಿಶಾಲ್ ಪಾಂಡೆ ಹೇಳಿದ್ದಾರೆ.

ಗೋಮಾಂಸ ವ್ಯಾಪಾರಿಗಳ ಮುಷ್ಕರ: ಗೋ ರಕ್ಷಕರಿಂದ ಅತಂತ್ರಗೊಂಡ ಮಹಾರಾಷ್ಟ್ರದ ಜಾನುವಾರು ವ್ಯಾಪಾರ, ಕ್ರಮಕ್ಕೆ ಮುಂದಾದ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...