Homeಕರ್ನಾಟಕಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿರುವುದು ಅಪಾಯಕಾರಿ; ಸತ್ಯ ಬರೆಯೋಕೆ ಪ್ರಯತ್ನಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿರುವುದು ಅಪಾಯಕಾರಿ; ಸತ್ಯ ಬರೆಯೋಕೆ ಪ್ರಯತ್ನಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

‘ಎಲ್ಲ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ; ತಿದ್ದಿಕೊಳ್ಳುತ್ತೇನೆ. ಆದರೆ, ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್’ ಎಂದು ನಿಷ್ಠುರವಾಗಿ ಮಾತನಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರಿಗೆ ಕಿವಿಮಾತು ಹೇಳಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ, ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

“ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಬೇರೆ ಹೆಸರಲ್ಲಿ ಅವರು ಘೋಷಿಸಿದ್ದಾರೆ. ಆದರೂ ಮಹಾರಾಷ್ಟ್ರ ಚುನಾವಣೆ ವೇಳೆ ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ ಎಂದು ಸುಳ್ಳು ಜಾಹಿರಾತು ನೀಡಿದರು” ಎಂದು ಸಿಎಂ ವ್ಯಂಗ್ಯವಾಡಿದರು.

“ಇವತ್ತು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ; ಇದು ಅಪಾಯಕಾರಿ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ, ನೀವು ಜನರ ಧ್ವನಿಯಾಗಿ ಕೆಲಸ ಮಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಪ್ರಯತ್ನಿಸಿ ನೋಡೋಣ” ಎಂದರು.

“ಮನಸಾಕ್ಷಿಗೆ ತಕ್ಕಂತೆ ಮಾಧ್ಯಮಗಳು ವರದಿ ಮಾಡಿದರೆ ಸಮಾಜಕ್ಕೆ ಅದಕ್ಕಿಂತ ದೊಡ್ಡ ಸೇವೆ ಇಲ್ಲ. ಸುದ್ದಿಗಳನ್ನು ವೈಭವೀಕರಿಸುವುದು, ಮೂಡ ನಂಬಿಕೆಗಳನ್ನು ಬೆಂಬಲಿಸೋಕೆ ಹೋಗಬೇಡಿ. ನನ್ನ ಕಾರು ಮೇಲೆ ಕಾಗೆ ಕುಳಿತಿದ್ದಕ್ಕೆ ಜ್ಯೋತಿಷಿಗಳನ್ನು ಚಾನಲ್ ಗಳಿಗೆ ಕರೆಸಿ ಏನೆಲ್ಲಾ ಹೇಳಿಸಿದಿರಿ. ನಾನು 5 ವರ್ಷ ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸಲ್ಲ ಎಂದು ತೋರಿಸಿದಿರಿ. ಆದರೆ, ನಾನು ಐದು ವರ್ಷ ಪೂರೈಸಿ ಎರಡನೇ ಬಾರಿ ಸಿಎಂ ಆದೆ. ಈಗ ಹೇಳಿ ಕಾಗೆ ಸುದ್ದಿಯಿಂದ ಮಾಧ್ಯಮಗಳ ವಿಶ್ವಾಸಾರ್ಹತೆ ಕಡಿಮೆ ಆಯ್ತೋ ಇಲ್ವೋ” ಎಂದು ಪ್ರಶ್ನಿಸಿದರು.

“ನಾವು ಜನಪರ ಕೆಲಸ ಮಾಡದಿದ್ದಾಗ, ಕೊಟ್ಟ ಮಾತು ಈಡೇರಿಸದಿದ್ದಾಗ ಅದನ್ನು ಬರೆದು ಜನರ ಕಣ್ಣು ತೆರೆಸುವ ಹಕ್ಕು ಜವಾಬ್ದಾರಿ ಮಾಧ್ಯಮದವರ ಮೇಲಿದೆ. ಅದನ್ನು ನಿಭಾಯಿಸಿ” ಎಂದು ಸಲಹೆ ನೀಡಿದರು.

“ನಾವು ಊಟಕ್ಕೆ ಸೇರಿ ಏನೋ ಮಾತಾಡಿರ್ತೀವಿ. ಆದರೆ ಮಾಧ್ಯಮಗಳೇ ಡೈಲಾಗ್ ಬರೆದು ಬಿಡ್ತಾರೆ. ನಮಗೆ ಗೊತ್ತೇ ಇರದ ವಿಷಯವನ್ನು ಅವರೇ ಡೈಲಾಗ್ ಬರೆದು ತೋರಿಸಿದ್ದಾರೆ” ಎಂದು ಟೀಕಿಸಿದರು.

“ಬುದ್ದ, ಬಸವ, ಅಂಬೇಡ್ಕರ್ ಹೇಳಿದ ಸಮ ಸಮಾಜದ ಆಶಯ ಈಡೇರಿಸುವ ದಿಕ್ಕಿನಲ್ಲಿ ವೃತ್ತಿಪರತೆ ನಿರ್ವಹಿಸಿದರೆ ಅದು ಸಮಾಜಕ್ಕೆ ಉಪಯೋಗವಾಗುತ್ತದೆ. ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಜನಮುಖಿಯಾಗಿ ಕರ್ತವ್ಯ ನಿರ್ವಹಿಸಿ” ಎಂದು ಹೇಳಿದರು.

ಇದನ್ನೂ ಓದಿ; ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಮಂಡನೆ – ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...