2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ವೇಳೆ ತಾನು ಮಾಡಿದ ಯಾವುದೇ ಭಾಷಣಗಳಲ್ಲಿ ಹಿಂಸಾಚಾರಕ್ಕೆ ಕರೆ ನೀಡಿಲ್ಲ ಎಂದು ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್ ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಹಿಂಸಾಚಾರಕ್ಕೆ ಕರೆ ನೀಡಿಲ್ಲ
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಯಾಗಿರುವ ಶಾರ್ಜಿಲ್ ಇಮಾಮ್, ತನ್ನ ಮೇಲಿನ ಆರೋಪಕ್ಕೆ ವಿರುದ್ಧವಾಗಿ, ಪ್ರತಿಭಟನೆಯು ಅಹಿಂಸಾತ್ಮಕವಾಗಿರಬೇಕಾದ ಅಗತ್ಯವನ್ನು ತಾನು ಒತ್ತಿಹೇಳಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಹಿಂಸಾಚಾರಕ್ಕೆ ಕರೆ ನೀಡಿಲ್ಲ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಶಾರ್ಜಿಲ್ ಅವರು ಜಾಮೀನು ಕೋರಿ ಸಲ್ಲಿಸಿದ ಅರ್ಜಿಯಲ್ಲಿ, ಫೆಬ್ರವರಿ 2020ರ ವೇಳೆ ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ ಗಲಭೆಗಳನ್ನು ಹುಟ್ಟುಹಾಕಲು ಸಂಚು ರೂಪಿಸಿದ ಇತರ ಆರೋಪಿಗಳೊಂದಿಗೆ ತನಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ತನ್ನ ಮತ್ತು ಸಹ-ಆರೋಪಿಗಳ ನಡುವೆ ಅಂತಹ ಯಾವುದೇ ಚಾಟ್‌ಗಳಿಲ್ಲದಿದ್ದರೂ ಕೂಡಾ, ಪ್ರಾಸಿಕ್ಯೂಷನ್ ತನ್ನ ಪ್ರಕರಣವನ್ನು ವಾಟ್ಸಾಪ್ ಚಾಟ್‌ಗಳನ್ನು ಆಧರಿಸಿದೆ ದಾಖಲಿಸಿದೆ ಎಂದು ಅವರ ವಕೀಲರು ವಾದಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ಜನವರಿ 28, 2020 ರಂದು ಶಾರ್ಜಿಲ್ ಇಮಾಮ್ ಅವರನ್ನು ಬಂಧಿಸಲಾಯಿತು. ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಪ್ರಕರಣಗಳು ಸೇರಿದಂತೆ ದೇಶದ್ರೋಹ ಮತ್ತು ಕಾನೂನುಬಾಹಿರ ಸಭೆ ನಡೆಸಿದರುವ ಬಗ್ಗೆ ಪ್ರಕರಣ ದಾಖಲಿಸಲಾಯಿತು.
ನಂತರ ಫೆಬ್ರವರಿ 2020ರಲ್ಲಿ ಸಂಭವಿಸಿದ ದೆಹಲಿ ಗಲಭೆಯಲ್ಲಿ ಹಿಂಸಾಚಾರವನ್ನು ಪ್ರಚೋದಿಸುವ ದೊಡ್ಡ ಪಿತೂರಿಯಲ್ಲಿ ಶಾರ್ಜಿಲ್ ಇಮಾಮ್ ಕೂಡ ಇದ್ದಾರೆ ಎಂದು ಪೊಲೀಸರು ನಂತರ ಆರೋಪಿಸಿದ್ದರು. ರಾಜಕೀಯ ಪಕ್ಷಗಳು ಹಿಂಸಾಚಾರವನ್ನು ಪ್ರಚೋದಿಸುವ ಸಾಧ್ಯತೆಯ ಅತಂಕದಿಂದ ತಾನು ದೆಹಲಿಯ ಶಾಹೀನ್ ಬಾಗ್ ಪ್ರತಿಭಟನೆಯಿಂದ ದೂರ ಉಳಿದಿದ್ದೆ ಎಂದು ಅವರು ವಾದಿಸಿದ್ದಾರೆ. ಡಿಸೆಂಬರ್ 20 ರಂದು ಹೈಕೋರ್ಟ್ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ.
ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ ಘರ್ಷಣೆಗಳು ನಡೆದಿದ್ದವು. ಹಿಂಸಾಚಾರದಲ್ಲಿ 53 ಮಂದಿ ಸಾವನ್ನಪ್ಪಿದ್ದರು ಮತ್ತು ನೂರಾರು ಮಂದಿ ಗಾಯಗೊಂಡಿದ್ದರು. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.
ಇದನ್ನೂ ಓದಿ: ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ
ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ


