Homeಮುಖಪುಟಭಾಷಣಗಳಲ್ಲಿ ಹಿಂಸಾಚಾರಕ್ಕೆ ಕರೆ ನೀಡಿಲ್ಲ - ದೆಹಲಿ ಹೈಕೋರ್ಟ್‌ಗೆ ತಿಳಿಸಿದ ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್

ಭಾಷಣಗಳಲ್ಲಿ ಹಿಂಸಾಚಾರಕ್ಕೆ ಕರೆ ನೀಡಿಲ್ಲ – ದೆಹಲಿ ಹೈಕೋರ್ಟ್‌ಗೆ ತಿಳಿಸಿದ ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್

- Advertisement -
- Advertisement -

2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ವೇಳೆ ತಾನು ಮಾಡಿದ ಯಾವುದೇ ಭಾಷಣಗಳಲ್ಲಿ ಹಿಂಸಾಚಾರಕ್ಕೆ ಕರೆ ನೀಡಿಲ್ಲ ಎಂದು ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್ ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಹಿಂಸಾಚಾರಕ್ಕೆ ಕರೆ ನೀಡಿಲ್ಲ

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಯಾಗಿರುವ ಶಾರ್ಜಿಲ್ ಇಮಾಮ್, ತನ್ನ ಮೇಲಿನ ಆರೋಪಕ್ಕೆ ವಿರುದ್ಧವಾಗಿ, ಪ್ರತಿಭಟನೆಯು ಅಹಿಂಸಾತ್ಮಕವಾಗಿರಬೇಕಾದ ಅಗತ್ಯವನ್ನು ತಾನು ಒತ್ತಿಹೇಳಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಹಿಂಸಾಚಾರಕ್ಕೆ ಕರೆ ನೀಡಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶಾರ್ಜಿಲ್ ಅವರು ಜಾಮೀನು ಕೋರಿ ಸಲ್ಲಿಸಿದ ಅರ್ಜಿಯಲ್ಲಿ, ಫೆಬ್ರವರಿ 2020ರ ವೇಳೆ ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ ಗಲಭೆಗಳನ್ನು ಹುಟ್ಟುಹಾಕಲು ಸಂಚು ರೂಪಿಸಿದ ಇತರ ಆರೋಪಿಗಳೊಂದಿಗೆ ತನಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ತನ್ನ ಮತ್ತು ಸಹ-ಆರೋಪಿಗಳ ನಡುವೆ ಅಂತಹ ಯಾವುದೇ ಚಾಟ್‌ಗಳಿಲ್ಲದಿದ್ದರೂ ಕೂಡಾ, ಪ್ರಾಸಿಕ್ಯೂಷನ್ ತನ್ನ ಪ್ರಕರಣವನ್ನು ವಾಟ್ಸಾಪ್ ಚಾಟ್‌ಗಳನ್ನು ಆಧರಿಸಿದೆ ದಾಖಲಿಸಿದೆ ಎಂದು ಅವರ ವಕೀಲರು ವಾದಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ಜನವರಿ 28, 2020 ರಂದು ಶಾರ್ಜಿಲ್ ಇಮಾಮ್ ಅವರನ್ನು ಬಂಧಿಸಲಾಯಿತು. ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಪ್ರಕರಣಗಳು ಸೇರಿದಂತೆ ದೇಶದ್ರೋಹ ಮತ್ತು ಕಾನೂನುಬಾಹಿರ ಸಭೆ ನಡೆಸಿದರುವ ಬಗ್ಗೆ ಪ್ರಕರಣ ದಾಖಲಿಸಲಾಯಿತು.

ನಂತರ ಫೆಬ್ರವರಿ 2020ರಲ್ಲಿ ಸಂಭವಿಸಿದ ದೆಹಲಿ ಗಲಭೆಯಲ್ಲಿ ಹಿಂಸಾಚಾರವನ್ನು ಪ್ರಚೋದಿಸುವ ದೊಡ್ಡ ಪಿತೂರಿಯಲ್ಲಿ ಶಾರ್ಜಿಲ್ ಇಮಾಮ್ ಕೂಡ ಇದ್ದಾರೆ ಎಂದು ಪೊಲೀಸರು ನಂತರ ಆರೋಪಿಸಿದ್ದರು. ರಾಜಕೀಯ ಪಕ್ಷಗಳು ಹಿಂಸಾಚಾರವನ್ನು ಪ್ರಚೋದಿಸುವ ಸಾಧ್ಯತೆಯ ಅತಂಕದಿಂದ ತಾನು ದೆಹಲಿಯ ಶಾಹೀನ್ ಬಾಗ್ ಪ್ರತಿಭಟನೆಯಿಂದ ದೂರ ಉಳಿದಿದ್ದೆ ಎಂದು ಅವರು ವಾದಿಸಿದ್ದಾರೆ. ಡಿಸೆಂಬರ್ 20 ರಂದು ಹೈಕೋರ್ಟ್ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ.

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ ಘರ್ಷಣೆಗಳು ನಡೆದಿದ್ದವು. ಹಿಂಸಾಚಾರದಲ್ಲಿ 53 ಮಂದಿ ಸಾವನ್ನಪ್ಪಿದ್ದರು ಮತ್ತು ನೂರಾರು ಮಂದಿ ಗಾಯಗೊಂಡಿದ್ದರು. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಇದನ್ನೂ ಓದಿ: ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ

ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...