Homeಮುಖಪುಟ'ಕುಸ್ತಿ ಚಾಂಪಿಯನ್‌ಶಿಪ್': WFI ಲೆಟರ್‌ಹೆಡ್‌ನಲ್ಲಿ ಸುತ್ತೋಲೆ ಹೊರಡಿಸಿದ ಸಂಜಯ್ ಸಿಂಗ್!

‘ಕುಸ್ತಿ ಚಾಂಪಿಯನ್‌ಶಿಪ್’: WFI ಲೆಟರ್‌ಹೆಡ್‌ನಲ್ಲಿ ಸುತ್ತೋಲೆ ಹೊರಡಿಸಿದ ಸಂಜಯ್ ಸಿಂಗ್!

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ನ ಅಮಾನತುಗೊಂಡಿರುವ ಸಮಿತಿಗೆ ‘ಸೀನಿಯರ್ ನ್ಯಾಷನಲ್ ಚಾಂಪಿಯನ್‌ಶಿಪ್’ ನಡೆಸಲು ಯಾವುದೇ ಅಧಿಕಾರವಿಲ್ಲ ಮತ್ತು ಸಂಸ್ಥೆಯು ನಡೆಸುವ ಯಾವುದೇ ಕಾರ್ಯಕ್ರಮವನ್ನು ‘ಅನುಮೋದಿತವಲ್ಲದ’ ಮತ್ತು ‘ಮಾನ್ಯತೆ ಪಡೆಯದ’ ಎಂದು ಪರಿಗಣಿಸಲಾಗುವುದು ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಕಳೆದ ತಿಂಗಳು WFI ಗೆ ಚುನಾವಣೆ ನಡೆದು ಸಂಜಯ್ ಸಿಂಗ್ ಅವರನ್ನು ಭಾರತೀಯ ಕುಸ್ತಿ ಫೆಡರೇಷನ್‌ನ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿತ್ತು. ಬ್ರಿಜ್‌ ಭೂಷಣ್‌ ಆಪ್ತ ಸಂಜಯ್ ಸಿಂಗ್ ಆಯ್ಕೆಗೆ ಕುಸ್ತಿಪಟುಗಳು ವಿರೋಧಿಸಿದ್ದರು. ಇದರ ಬೆನ್ನಲ್ಲೇ ಸಚಿವಾಲಯವು ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಭಾರತೀಯ ಕುಸ್ತಿ ಫೆಡರೇಷನ್‌ನ ಸಮಿತಿಯನ್ನು ಅಮಾನತುಗೊಳಿಸಿತ್ತು. ಬಳಿಕ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಮೂರು ಸದಸ್ಯರ ತಾತ್ಕಾಲಿಕ ಸಮಿತಿಯನ್ನು ರಚಿಸಿತ್ತು.

ಅಮಾನತುಗೊಂಡ ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ಅವರು ಶೀಘ್ರದಲ್ಲೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳನ್ನು ಆಯೋಜಿಸುವುದಾಗಿ ಹೇಳಿದ್ದರು. ಪುಣೆಯಲ್ಲಿ 2024ರ  ಜನವರಿ 29 ರಿಂದ31ರವರೆಗೆ ಸೀನಿಯರ್ ನ್ಯಾಶನಲ್ ವ್ರೆಸ್ಲಿಂಗ್ ಚಾಂಪಿಯನ್‌ಶಿಪ್ 2023ನ್ನು ಆಯೋಜಿಸುವ ಬಗ್ಗೆ ನೀವು 06.01.2024ರ ಲೆಟರ್‌ಹೆಡ್‌ನಲ್ಲಿ ಸುತ್ತೋಲೆಯನ್ನು ಹೊರಡಿಸಿದ್ದೀರಿ ಎಂದು ಸಚಿವಾಲಯದ ಗಮನಕ್ಕೆ ಬಂದಿದೆ. 24.12.2023ರ ಈ ಸಚಿವಾಲಯದ ಆದೇಶದ ಪ್ರಕಾರ, ಅಂತಹ ಸುತ್ತೋಲೆಯನ್ನು ನೀಡಲು ಅಥವಾ ರತದ ಕುಸ್ತಿ ಫೆಡರೇಶನ್‌ನ ಲೆಟರ್‌ಹೆಡ್‌ನ್ನು ಬಳಸಲು ನಿಮಗೆ ಯಾವುದೇ ಅಧಿಕಾರವಿಲ್ಲ ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಲೆಟರ್‌ಹೆಡ್‌ನ್ನು ಬಳಸುವುದನ್ನು ನಿಲ್ಲಿಸಬೇಕು ಮತ್ತು ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿಯ ನಿಬಂಧನೆಗಳನ್ನು ಉಲ್ಲಂಘಿಸಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಹೆಸರು, ಲೋಗೋಗಳು ಮತ್ತು ಚಿಹ್ನೆಗಳನ್ನು ಬಳಸುವುದನ್ನು ನಿಲ್ಲಿಸಬೇಕು ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಸಂಜಯ್ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ಸಚಿವಾಲಯವು, ನೀವು ಅಥವಾ ಡಬ್ಲ್ಯುಎಫ್‌ಐನ ಅಮಾನತುಗೊಳಿಸಿದ ಕಾರ್ಯಕಾರಿ ಸಮಿತಿ ಸದಸ್ಯರು ಆಯೋಜಿಸುವ ಯಾವುದೇ ಚಾಂಪಿಯನ್‌ಶಿಪ್‌ ಸ್ಪರ್ಧೆಗಳನ್ನು ಅನುಮೋದಿತ ಮತ್ತು ಮಾನ್ಯತೆ ಪಡೆದ ಸ್ಪರ್ಧೆಗಳೆಂದು ಪರಿಗಣಿಸಲಾಗುವುದಿಲ್ಲ. ಡಬ್ಲ್ಯುಎಫ್‌ಐನ ಅಮಾನತುಗೊಂಡ ಸಮಿತಿ ನಡೆಸುವ ಚಾಂಪಿಯನ್‌ಶಿಪ್‌ ಸ್ಪರ್ಧೇಗಳಲ್ಲಿ ನೀಡುವ ಪ್ರಮಾಣಪತ್ರಗಳು ಮತ್ತು ಪದಕಗಳು ಯಾವುದನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ಯಾವುದೇ ಯೋಜನೆಯಡಿ ಅರ್ಹತೆಗಾಗಿ ಅಥವಾ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿಗಾಗಿ, ಕ್ರೀಡಾ ಪ್ರಶಸ್ತಿಗಳಿಗೆ ಅಥವಾ ಶಾಲಾ ಮತ್ತು ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಪರಿಗಣಿಸಲಾಗುವುದಿಲ್ಲ ಎಂದು ಸಚಿವಾಲಯವು ಹೇಳಿದೆ.

ಮುಂದಿನ ಆದೇಶದವರೆಗೆ ತಾತ್ಕಾಲಿಕ ಸಮಿತಿಯ ಮೇಲ್ವಿಚಾರಣೆಯಲ್ಲಿ ಆಯೋಜಿಸಲಾದ ವಿವಿಧ ವಯೋಮಾನದ ವಿಭಾಗಗಳಿಗೆ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ಗಳನ್ನು ಮಾತ್ರ ಕ್ರೀಡಾ ಸಂಹಿತೆಯ ಅಡಿಯಲ್ಲಿ ಪರಿಗಣಿಸಲಾಗುವುದು ಎಂದು ಇಲಾಖೆಯು ತಿಳಿಸಿದೆ. ಫೆಬ್ರವರಿ 2-5 ರಿಂದ ಜೈಪುರದಲ್ಲಿ ಹಿರಿಯ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳನ್ನು ಆಯೋಜಿಸುವುದಾಗಿ ತಾತ್ಕಾಲಿಕ ಸಮಿತಿಯು ಘೋಷಿಸಿದೆ.

ಭಾರತೀಯ ಕುಸ್ತಿ ಫೆಡರೇಷನ್‌ ಕಳೆದ ಒಂದು ವರ್ಷದಿಂದ ಭಾರೀ ಚರ್ಚೆಯಲ್ಲಿದೆ. ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್‌ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ಬ್ರಿಜ್ ಭೂಷಣ್ ಸಿಂಗ್‌ ಸಿಂಗ್‌ ವಿರುದ್ಧ ಪೋಕ್ಸ್‌ ಸೇರಿ ಹಲವು ಸೆಕ್ಸನ್‌ಗಳಡಿಯಲ್ಲಿ ಕೇಸ್‌ ದಾಖಲಾಗಿದೆ. ಆ ಬಳಿಕ ಇತ್ತೀಚೆಗೆ ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥರನ್ನಾಗಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿಕಟವರ್ತಿ ಸಂಜಯ್ ಸಿಂಗ್‌ನ್ನು ನೇಮಿಸಲಾಗಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶವನ್ನು ಕುಸ್ತಿಪಟುಗಳು ವ್ಯಕ್ತಪಡಿಸಿದ್ದರು. ಸಾಕ್ಷಿ ಮಲಿಕ್‌ ಅವರು ಕುಸ್ತಿಯನ್ನು ತ್ಯಜಿಸುವುದಾಗಿ ಘೋಷಿಸಿದ್ದರು.  ಭಜರಂಗ್ ಪುನಿಯಾ ಅವರು ಪದ್ಮಶ್ರೀ ಮತ್ತು ವಿನೇಶ್ ಫೋಗಟ್ ಅವರು ಅರ್ಜುನ ಪ್ರಶಸ್ತಿ ಮತ್ತು ಖೇಲ್ ರತ್ನವನ್ನು ಹಿಂದಿರುಗಿಸಿದರು. ಆ ಬಳಿಕ ನೂತನ ಸಮಿತಿಯನ್ನು ಅಮಾನತುಗೊಳಿಸಿ ಕ್ರೀಡಾ ಸಚಿವಾಲಯ ಆದೇಶಿಸಿತ್ತು.

ಇದನ್ನು ಓದಿ: ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...