Homeಕರ್ನಾಟಕಸಿಎಂ ಕುರಿತು ಸುಳ್ಳು ಸುದ್ದಿ ಪ್ರಸಾರ; ಏಳು ಜನರ ವಿರುದ್ಧ ಎಫ್‌ಐಆರ್‌ ದಾಖಲು

ಸಿಎಂ ಕುರಿತು ಸುಳ್ಳು ಸುದ್ದಿ ಪ್ರಸಾರ; ಏಳು ಜನರ ವಿರುದ್ಧ ಎಫ್‌ಐಆರ್‌ ದಾಖಲು

- Advertisement -
- Advertisement -

ದಿನ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂಬಂತೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಪತ್ರಿಕಾ ತುಣುಕು ಹಂಚಿಕೊಂಡು, ಕೋಮುಸಾಮರಸ್ಯಕ್ಕೆ ಧಕ್ಕೆ ತಂದ ಏಳು ಜನ ಕಿಡಿಗೇಡಿಗಳ ವಿರುದ್ಧ ಬೆಂಗಳೂರು ದಕ್ಷಿಣ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು ನಿವಾಸಿ ಹರೀಶ್ ನಾಗರಾಜು ಎಂಬ ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ನೀಡಿದ್ದು, ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್ ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಾಮಾಜಿಕ ಜಾಲತಾಣ ವೇದಿಕೆಗಳಾದ ವಾಟ್ಸಾಪ್, ಫೇಸ್‌ಬುಕ್ ಮತ್ತು ಎಕ್ಸ್‌ ಖಾತೆಗಳಲ್ಲಿ ಸಿದ್ದರಾಮಯ್ಯ ಕುರಿತ ಸುಳ್ಳು ಸುದ್ದಿ ಪತ್ರಿಕಾ ತುಣುಕು ಹಂಚಿಕೊಂಡಿರುವವರ ವಿರುದ್ಧ ದೂರು ದಾಖಲಿಸಲಾಗಿದೆ.

ಈ ಕುರಿತು ಸ್ವತಃ ಸಿದ್ಧರಾಮಯ್ಯ ತಮ್ಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದು, ‘ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು’ ಎಂದು ಹೇಳಿದ್ದಾರೆ.

‘ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು’ ಎಂದು ಅವರ ಕಿಡಿಕಾರಿದ್ದಾರೆ.

ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿಸಬೇಕು ಎಂದು ಮನಿ ಮಾಡಿಕೊಂಡಿರುವ ಅವರು, ‘ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ’ ಎಂದು ತಿಳಿಸಿದ್ದಾರೆ.

ದೂರು ದಾಖಲಾದ ನಂತರ ತಮ್ಮ ಎಕ್ಸ್‌ ಖಾತೆಯಲ್ಲಿ ಮತ್ತೊಂದು ಪೋಸ್ಟ್‌ ಮಾಡಿರುವ ಸಿದ್ದರಾಮಯ್ಯ, ‘ವಾರ್ತಾಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ’ ಎಂದು ಹೇಳಿದ್ದಾರೆ.

‘ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ. ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ; ಸಿದ್ದರಾಮಯ್ಯ ಕುರಿತು ನಕಲಿ ಪತ್ರಿಕಾ ತುಣುಕು ಹರಿಬಿಟ್ಟ ಕಿಡಿಗೇಡಿಗಳು; ಸ್ಪಷ್ಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ ಪರ, ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಹಾಕಿದ ಪ್ರಾಂಶುಪಾಲೆಗೆ ರಾಜೀನಾಮೆ ನೀಡುವಂತೆ ಸೂಚನೆ

0
ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪ್ಯಾಲೆಸ್ತೀನ್‌ ಪರ ಮತ್ತು ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಮಾಡಿದ ಕಾರಣಕ್ಕೆ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್ ಶೇಖ್ ಅವರಲ್ಲಿ ಶಾಲಾ ಆಡಳಿತ ಮಂಡಳಿ ರಾಜೀನಾಮೆ...