Homeರಾಷ್ಟ್ರೀಯರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಸುಪ್ರೀಂಕೋರ್ಟ್‌ ಮೊರೆ ಹೋದ ಝೀ ನ್ಯೂಸ್ ನಿರೂಪಕ

ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಸುಪ್ರೀಂಕೋರ್ಟ್‌ ಮೊರೆ ಹೋದ ಝೀ ನ್ಯೂಸ್ ನಿರೂಪಕ

- Advertisement -
- Advertisement -

ಝೀ ನ್ಯೂಸ್‌ನ ನಿರೂಪಕ ರೋಹಿತ್ ರಂಜನ್ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿ ಅನೇಕ ಪೊಲೀಸ್ ಪ್ರಕರಣಗಳನ್ನು ದಾಖಲಿಸಿರುವ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಆದರೆ, ರಂಜನ್‌ ಅವರ ಅರ್ಜಿಯನ್ನು ನ್ಯಾಯಾಲಯದ ದಾಖಲೆಗಳಲ್ಲಿ ಪಟ್ಟಿ ಮಾಡದ ಕಾರಣ ಪ್ರೋಟೋಕಾಲ್ ಉಲ್ಲಂಘನೆಯಾಗಿದ್ದಕ್ಕೆ ನ್ಯಾಯಾಲಯದಲ್ಲಿ ಅವರ ಪರವಾಗಿ ಹಾಜರಾಗಿರುವ ಹಿರಿಯ ವಕೀಲ ಸಿದ್ಧಾರ್ಥ್‌ ಲೂತ್ರಾ ಕ್ಷಮೆಯಾಚಿಸಿದ್ದಾರೆ.

“ಇದು ದಾಖಲೆಯಲ್ಲಿಯೂ ಇಲ್ಲ ಮತ್ತು ಇನ್ನೂ ಅರ್ಜಿ ಸಲ್ಲಿಸಲಾಗಿಲ್ಲ. ಪ್ರಕರಣದ ಅರ್ಜಿ ಸಲ್ಲಿಸಲಾಗಿಲ್ಲ ಎಂದು ನಮಗೆ ಹೇಳಬೇಕಾಗಿತ್ತು. ಇದು ಸರಿಯಾದ ರೀತಿಯಲ್ಲ” ಎಂದು ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ರಂಜಿತ್ ರಂಜನ್ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣವನ್ನು ನಾಳೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತಾದರೂ, ಅದರ ನಂತರ ಅಧಿಕೃತವಾಗಿ ನ್ಯಾಯಾಲಯದ ಮುಂದೆ ಅರ್ಜಿ ಪತ್ರಗಳನ್ನು ಸಲ್ಲಿಸಲಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿದುಬಂದಿದೆ. ನಿಯಮದಂತೆ ದಾಖಲೆಗಳ ಮೂಲಕ ಅರ್ಜಿಯನ್ನು ದಾಖಲಿಸಿದ ನಂತರವೇ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವನ್ನು ಉಲ್ಲೇಖಿಸಬಹುದು.

“ರಂಜನ್‌ ಅವರನ್ನು ನಿನ್ನೆ ನೋಯ್ಡಾ ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು. ಅವರು ತಮ್ಮ ಕಾರ್ಯಕ್ರಮವೊಂದರಲ್ಲಿ ತಪ್ಪು ಮಾಡಿದ್ದಾರೆ. ಈಗ ಛತ್ತೀಸ್‌ಗಢ ಪೊಲೀಸರು ಅವರನ್ನು ಬಂಧಿಸಲು ಬಯಸಿದ್ದಾರೆ. ದಯವಿಟ್ಟು ಅರ್ಜಿಯನ್ನು ತುರ್ತಾಗಿ ಪಟ್ಟಿ ಮಾಡಿ, ಇಲ್ಲದಿದ್ದರೆ ಅವರು ಪುನರಾವರ್ತಿತ ಬಂಧನದಲ್ಲಿ ಇರಬೇಕಾಗುತ್ತದೆ” ಎಂದು ರಂಜನ್ ಪರ ವಕೀಲರು ತಿಳಿಸಿದ್ದಾರೆ.

ಝೀ ಟಿವಿಯು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಬಗ್ಗೆ ತಪ್ಪು ಸುದ್ದಿಯನ್ನು ಪ್ರಸಾರ ಮಾಡಿದ ಕೆಲವು ದಿನಗಳ ನಂತರ ಅದರ ನಿರೂಪಕ ರಂಜನ್ ಅವರನ್ನು ಬಂಧಿಸಲಾಗಿದ್ದು, ತಪ್ಪಿನ ಬಗ್ಗೆ ಚಾನೆಲ್ ಕ್ಷಮೆಯಾಚಿಸಿತ್ತು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ ವಶಕ್ಕೆ ಪಡೆದ ಯುಪಿ ಪೊಲೀಸರು

ರಂಜನ್ ಅವರು ತಮ್ಮ ಶೋನಲ್ಲಿ, ಕೇರಳದ ವಯನಾಡ್‌ನಲ್ಲಿರುವ ತಮ್ಮ ಕಚೇರಿಯ ಮೇಲೆ ನಡೆದ ದಾಳಿಯ ಕುರಿತ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು, ರಾಜಸ್ಥಾನದಲ್ಲಿ ಕೊಲೆಯಾದ ಟೈಲರ್‌ ಹಂತಕರ ಕುರಿತ ಹೇಳಿಕೆ ಎಂಬಂತೆ ನಿರೂಪಿಸಿದ್ದರು. ಇದರ ನಂತರ ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಈ ಬಗ್ಗೆ ನಿನ್ನೆ ನೋಯ್ಡಾದಲ್ಲಿ ರಂಜನ್ ಅವರನ್ನು ಬಂಧಿಸಲು ಛತ್ತೀಸ್‌ಗಢ ಪೊಲೀಸರು ಆಗಮಿಸಿದಾಗ, ಅವರು ಉತ್ತರ ಪ್ರದೇಶ ಪೊಲೀಸರ ಸಹಾಯವನ್ನು ಕೇಳಲು ಟ್ವೀಟ್ ಮಾಡಿದ್ದರು. “ಛತ್ತೀಸ್‌ಗಢ ಪೊಲೀಸರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿಲ್ಲ” ಎಂದು ಅವರು ಹೇಳಿಕೊಂಡಿದ್ದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ತಮ್ಮ ಟ್ವೀಟ್‌ನಲ್ಲಿ ಟ್ಯಾಗ್ ಮಾಡಿದ್ದರು.

“ಮಾಹಿತಿ ನೀಡಬೇಕು ಎಂಬ ಯಾವುದೇ ನಿಯಮವಿಲ್ಲ. ಆದರೂ, ಈಗ ಅವರಿಗೆ ತಿಳಿಸಲಾಗಿದೆ. ಪೊಲೀಸ್ ತಂಡವು ನಿಮಗೆ ನ್ಯಾಯಾಲಯದ ಬಂಧನದ ವಾರಂಟ್ ಅನ್ನು ತೋರಿಸಿದೆ. ವಾಸ್ತವವಾಗಿ ನೀವೇ ಸಹಕರಿಸಿ, ತನಿಖೆಯಲ್ಲಿ ಭಾಗವಹಿಸಬೇಕು. ನ್ಯಾಯಾಲಯದಲ್ಲಿ ನಿಮ್ಮ ಪ್ರತಿವಾದವನ್ನು ಮಂಡಿಸಬೇಕು” ಎಂದು ಛತ್ತೀಸ್‌ಗಢ ಪೊಲೀಸರು ಅದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ ನ್ಯೂಸ್’

ಇದರ ನಂತರ ಎರಡು ರಾಜ್ಯಗಳ ಪೊಲೀಸರು ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ವಾಗ್ವಾದ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹೊರಹೊಮ್ಮಿತ್ತು. ಅಂತಿಮವಾಗಿ ಯುಪಿ ಪೊಲೀಸರು ಅವರನ್ನು ಕರೆದುಕೊಂಡು ಹೋಗುವುದರೊಂದಿಗೆ ನಾಟಕೀಯ ದೃಶ್ಯ ಕೊನೆಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...