Homeಮುಖಪುಟಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ನೆಲಸಮ ಮಾಡಿದರೇ, ಬೇರೆಡೆ ಭೂಮಿ ನೀಡುತ್ತೇವೆ ಎಂದ ಹಿಂದೂ ಸಂಘಟನೆ

ಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ನೆಲಸಮ ಮಾಡಿದರೇ, ಬೇರೆಡೆ ಭೂಮಿ ನೀಡುತ್ತೇವೆ ಎಂದ ಹಿಂದೂ ಸಂಘಟನೆ

- Advertisement -
- Advertisement -

ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆ ಮಥುರಾದಲ್ಲಿನ ಈದ್ಗಾ ಮಸೀದಿ ತೆರವುಗೊಳಿಸಬೇಕು ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಮಸೀದಿಯ ನಿರ್ವಹಣಾ ಸಮಿತಿಯು ತಾವೇ ಈದ್ಗಾ ಮಸೀದಿಯನ್ನು ನೆಲಸಮ ಮಾಡಲು ಒಪ್ಪಿದರೇ ದೇವಾಲಯದ ಆವರಣದಲ್ಲಿರುವ ಭೂಮಿಗಿಂತ ಬೇರೆ ಕಡೆ ಹೆಚ್ಚಿನ ಭೂಮಿಯನ್ನು ನೀಡುತ್ತೇವೆ ಎಂದು ಹಿಂದೂ ಸಂಘಟನೆಯೊಂದು ಮಥುರಾ ನ್ಯಾಯಾಲಯಕ್ಕೆ ತಿಳಿಸಿದೆ.

ಮಥುರಾ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯಕ್ಕೆ ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ಆಂದೋಲನ ಸಮಿತಿ ಸಲ್ಲಿಸಿರುವ ಅರ್ಜಿಯಲ್ಲಿ ಮಸೀದಿಯನ್ನು ಕೆಡವಿದರೇ, ನೆಲಸಮ  ಮಾಡಿದರೇ, ಮಸೀದಿ ನಿರ್ವಹಣಾ ಸಮಿತಿಗೆ ದೇವಾಲಯ ಇರುವ ಪಟ್ಟಣ ಬಿಟ್ಟು, ಹೊರ ಭಾಗದಲ್ಲಿ ಮಸೀದಿ ನಿರ್ಮಿಸಲು ಹೆಚ್ಚಿನ ಭೂಮಿ ನೀಡುವುದಾಗಿ ತಿಳಿಸಿದೆ.

ಮಸೀದಿಯ ನಿರ್ವಹಣಾ ಸಮಿತಿಯು ಅಸ್ತಿತ್ವದಲ್ಲಿರುವ ಶಾಹಿ ಮಸೀದಿ ಈದ್ಗಾವನ್ನು ಸ್ವಯಂಪ್ರೇರಣೆಯಿಂದ ನೆಲಸಮಗೊಳಿಸಿ, ಭೂಮಿಯನ್ನು ಕೃಷ್ಣ ಜನ್ಮಭೂಮಿ ಮುಕ್ತಿ ಆಂದೋಲನ ಸಮಿತಿಗೆ ಒಪ್ಪಿಸಿದರೆ, ಮಸೀದಿ ಇರುವ ಜಾಗಕ್ಕಿಂತ ದೊಡ್ಡದಾದ ಭೂಮಿಯನ್ನು ನೀಡಲಾಗುವುದು ಎಂದು ಸಮಿತಿ ಅಧ್ಯಕ್ಷ ವಕೀಲ ಮಹೇಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಹಿರಿಯ ಸಿವಿಲ್ ನ್ಯಾಯಾಧೀಶರು ರಜೆಯಲ್ಲಿದ್ದ ಕಾರಣ ಅರ್ಜಿಯನ್ನು ಸಿವಿಲ್ ನ್ಯಾಯಾಧೀಶ II ಅನುಪಮ್ ಸಿಂಗ್ ಅವರಿಗೆ ಸಲ್ಲಿಸಲಾಗಿದೆ.

ದೇವಾಲಯದ ಸಮೀಪದಿಂದ ಮಸೀದಿಯನ್ನು ತೆರವುಗೊಳಿಸುವಂತೆ ನ್ಯಾಯಾಲಯವನ್ನು ಕೋರಿ ಹಿಂದೂ ಸಂಘಟನೆಯ ಪರ ವಕೀಲರು ಸಲ್ಲಿಸಿದ್ದ ಅರ್ಜಿ 2020 ರ ಡಿಸೆಂಬರ್‌ನಿಂದ ನ್ಯಾಯಾಲಯದಲ್ಲಿ ಬಾಕಿ ಇದೆ. ಈಗ ಸಮಿತಿಯು ಸಂಧಾನಕ್ಕೆ ಪ್ರಯತ್ನಿಸುತ್ತಿದೆ.

ಭಗವಾನ್ ಶ್ರೀ ಕೃಷ್ಣನ ಜನ್ಮಸ್ಥಳದ ಸಮೀಪವಿರುವ ಕತ್ರ ಕೇಶವ್ ದೇವ್ ದೇವಸ್ಥಾನದ 13.37 ಎಕರೆ ಆವರಣದಲ್ಲಿ 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ. ಮಸೀದಿಯನ್ನು ತೆರವುಗೊಳಿಸಬೇಕೆಂದು ಕೋರಿ ಮಥುರಾದಲ್ಲಿ ವಿವಿಧ ಸಿವಿಲ್ ನ್ಯಾಯಾಲಯಗಳಲ್ಲಿ ಹಲವಾರು ಅರ್ಜಿಗಳು ಮತ್ತು ಮನವಿಗಳು ಬಾಕಿ ಉಳಿದಿವೆ. ಮಥುರಾದ ಸಿವಿಲ್ ನ್ಯಾಯಾಲಯ ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991ರ ಅಡಿಯಲ್ಲಿ ಕೆಲವು ಅರ್ಜಿಗಳನ್ನು ವಜಾಗೊಳಿಸಿತ್ತು.


ಇದನ್ನೂ ಓದಿ: ಮಾನನಷ್ಟ ಪ್ರಕರಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ 2 ಕೋಟಿ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಸಾವು; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...