ನಾರ್ವೆ, ಇರಾಕ್ ಮತ್ತು ಆಸ್ಟ್ರೇಲಿಯಾದಲ್ಲಿರುವ ಮೂರು ವಿದೇಶಿ ರಾಯಭಾರ ಕಚೇರಿಗಳನ್ನು ಶ್ರೀಲಂಕಾ ತಾತ್ಕಾಲಿಕವಾಗಿ ಮುಚ್ಚಿದೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದಲ್ಲಿ ಬೆಳೆಯುತ್ತಿರುವ ಅಶಾಂತಿಯ ನಡುವೆ ಕನಿಷ್ಠ 41 ಸಂಸದರು ಮೈತ್ರಿ ಸರ್ಕಾರದಿಂದ ಸೋಮವಾರದಂದು ಹೊರನಡೆದಿದ್ದು, ದೇಶದ ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಆಡಳಿತ ಒಕ್ಕೂಟವು ಮಂಗಳವಾರ ಸಂಸತ್ತಿನಲ್ಲಿ ಬಹುಮತವನ್ನು ಕಳೆದುಕೊಂಡಿದೆ.
ಶ್ರೀಲಂಕಾದ ವಿರೋಧ ಪಕ್ಷವು ಅಧ್ಯಕ್ಷ ರಾಜಪಕ್ಸೆ ಅವರ ಮೈತ್ರಿ ಸರ್ಕಾರಕ್ಕೆ ಸೇರುವಂತೆ ನೀಡಿದ್ದ ಆಹ್ವಾನವನ್ನು “ಅಸಂಬದ್ಧ” ಎಂದು ತಳ್ಳಿಹಾಕಿದೆ. ಬದಲಿಗೆ ದೇಶದಲ್ಲಿ ಆಹಾರ, ಇಂಧನ ಮತ್ತು ಔಷಧಿಗಳ ಕೊರತೆಯಿಂದಾಗಿ ಹದಗೆಟ್ಟ ಪರಿಸ್ಥಿತಿಯ ಹೊಣೆಹೊತ್ತು ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಮತ್ತು ಅವರ ಹಿರಿಯ ಸಹೋದರ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ಹೊರತುಪಡಿಸಿ ಸಂಪುಟದಲ್ಲಿರುವ ಎಲ್ಲಾ 26 ಸಚಿವರು ತಡರಾತ್ರಿ ನಡೆದ ಸಭೆಯಲ್ಲಿ ರಾಜೀನಾಮೆ ಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಶಿಕ್ಷಣ ಸಚಿವ ದಿನೇಶ್ ಗುಣವರ್ದನಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಶ್ರೀಲಂಕಾದಾದ್ಯಂತ ಕರ್ಫ್ಯೂಗಳನ್ನು ಹೇರಿರುವುದರ ಹೊರತಾಗಿಯೂ ಸರ್ಕಾರಿ ವಿರೋಧಿ ಪ್ರತಿಭಟನೆಗಳು ಉಲ್ಬಣಗೊಂಡಿದೆ.
ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!
ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು ಕಾರ್ಯಕಾರಿ ಅಧ್ಯಕ್ಷೀಯ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಕರೆ ನೀಡಿದ್ದಾರೆ. “ಸುಮಾರು 20 ವರ್ಷಗಳ ಕಾಲ ಪ್ರತಿಯೊಬ್ಬ ನಾಯಕರೂ ಕಾರ್ಯಕಾರಿ ಅಧ್ಯಕ್ಷ ಸ್ಥಾನವನ್ನು ರದ್ದುಪಡಿಸುವುದಾಗಿ ಭರವಸೆ ನೀಡಿದ್ದಾರೆ, ಆದರೆ ಅದನ್ನು ಬಲಪಡಿಸಲಾಗಿದೆ” ಎಂದು ಪ್ರೇಮದಾಸ ಮಂಗಳವಾರ ಸಂಸತ್ತಿನಲ್ಲಿ ಹೇಳಿದ್ದಾರೆ.
ಸಂಸತ್ತಿನಲ್ಲಿ ಅವರು ಮಾಡಿದ ಭಾಷಣದಲ್ಲಿ ದೇಶಕ್ಕೆ ಹೊಸ ಚುನಾವಣಾ ವ್ಯವಸ್ಥೆಯನ್ನು ಪರಿಚಯಿಸುವ ಅಗತ್ಯತೆಯ ಬಗ್ಗೆ ಸಂಸದರಿಗೆ ನೆನಪಿಸಿದ್ದಾರೆ. ಇದರ ಮಧ್ಯೆ ಶ್ರೀಲಂಕಾದ ಹಣಕಾಸು ಸಚಿವ ಅಲಿ ಸಬ್ರಿ ಅವರು ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದಲ್ಲೆ ಇಂದು ರಾಜೀನಾಮೆ ನೀಡಿದ್ದಾರೆ.
ಅಧ್ಯಕ್ಷ ಗೋಟಬಯ ರಾಜಪಕ್ಸೆ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಶ್ರೀಲಂಕಾ ಸರ್ಕಾರ ಶನಿವಾರ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಯೂಟ್ಯೂಬ್ ಸೇರಿದಂತೆ ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ನಿರ್ಬಂಧಿಸಿದೆ. ಭಾನುವಾರ ಮಧ್ಯಾಹ್ನ ಪ್ರಧಾನಿಯ ಪುತ್ರ ನಮಲ್ ರಾಜಪಕ್ಸೆ ವಿರುದ್ಧವಾಗಿ ಮಾತನಾಡಿದ ನಂತರ ನಿಷೇಧವನ್ನು ಹಿಂತೆಗೆದುಕೊಳ್ಳಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಇದನ್ನೂ ಓದಿ: ಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್


