Homeಕ್ರೀಡೆಕ್ರಿಕೆಟ್ಭಾರತದ ವಿರುದ್ಧ ಹೀನಾಯ ಸೋಲು: ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ ಶ್ರೀಲಂಕಾ

ಭಾರತದ ವಿರುದ್ಧ ಹೀನಾಯ ಸೋಲು: ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ ಶ್ರೀಲಂಕಾ

- Advertisement -
- Advertisement -

ಐಸಿಸಿ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಶ್ರೀಲಂಕಾ ತಂಡ ಹೀನಾಯ ಸೋಲಿನ ನಂತರ ಶ್ರೀಲಂಕಾ ತನ್ನ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಲಾಗಿದೆ.

ಶ್ರೀಲಂಕಾದ ಕ್ರೀಡಾ ಸಚಿವ ರೋಷನ್‌ ರಣಸಿಂಘೆ ಅವರು ಶಮ್ಮಿ ಸಿಲ್ವಾ ನೇತೃತ್ವದ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.

ಐಸಿಸಿ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಹೀನಾಯ ಸೋಲಿನ ನಂತರ ಸಿಲ್ವಾ ನೇತೃತ್ವದ ಮಂಡಳಿಯ ರಾಜೀನಾಮೆಗೆ ಒತ್ತಾಯಿಸಿ ಎಸ್‌ಎಲ್‌ಸಿ ಆವರಣದ ಎದುರು ಪ್ರತಿಭಟನೆ ನಡೆಸಲಾಗಿತ್ತು.

ಇದೀಗ 1996ರ ಏಕದಿನ ವಿಶ್ವಕಪ್‌ ವಿಜೇತ ತಂಡದ ನಾಯಕ ಅರ್ಜುನ ರಣತುಂಗ ಅವರನ್ನು ಮಂಡಳಿಯ ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

1973ರ ಕ್ರೀಡಾ ಕಾನೂನು ಅಡಿಯಲ್ಲಿ ರಣಸಿಂಗ್ ಅವರನ್ನು ಸಮಿತಿಯ ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕ್ರೀಡಾ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಸಮಿತಿಯಲ್ಲಿ ಮೂವರು ನಿವೃತ್ತ ನ್ಯಾಯಾಧೀಶರು ಇದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯರು ಮತ್ತು ಶ್ರೀಲಂಕಾ ಕ್ರಿಕೆಟ್‌ ಮಂಡಳಿಯ ಮಾಜಿ ಅಧ್ಯಕ್ಷ ಉಪಾಲಿ ಧರ್ಮದಾಸ ಅವರು ಇದ್ದಾರೆ.

ನ. 2ರಂದು ಮುಂಬೈನಲ್ಲಿ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ 358 ರನ್‌ಗಳ ಗುರಿ ಪಡೆದಿದ್ದ ಶ್ರೀಲಂಕಾ ತಂಡವು ಕೇವಲ 55 ರನ್‌ಗಳಿಗೆ ಆಲೌಟ್‌ ಆಗಿ 302ರನ್‌ಗಳ ಹೀನಾಯ ಸೋಲು ಅನುಭವಿಸಿತ್ತು.

ಈ ಸೋಲಿನಿಂದ ಆಕ್ರೋಶಗೊಂಡ ಶ್ರೀಲಂಕಾದ ಕ್ರೀಡಾ ಸಚಿವ ರಣಸಿಂಘೆ ಅವರು ಕ್ರಿಕೆಟ್​ ಮಂಡಳಿಯ ಪದಾಧಿಕಾರಿಗಳ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಇದಲ್ಲದೆ ಚಾಲ್ತಿಯಲ್ಲಿದ್ದ ಮಂಡಳಿಗೆ ಅಧಿಕಾರದಲ್ಲಿ ಉಳಿಯಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಹೇಳಿದ್ದರು. ಅಲ್ಲದೆ ತಮ್ಮ ಹುದ್ದೆಗೆ ತಕ್ಷಣ ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಇದೀಗ ಮಂಡಳಿಯನ್ನು ಅವರು ವಜಾಗೊಳಿಸಿದ್ದಾರೆ.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read