Homeಮುಖಪುಟಶ್ರೀಲಂಕಾ ಬಿಕ್ಕಟ್ಟು: ಪ್ರಧಾನಿ ಮನೆಗೆ ಬೆಂಕಿ, ಬುಧವಾರ ಅಧ್ಯಕ್ಷ ರಾಜೀನಾಮೆ

ಶ್ರೀಲಂಕಾ ಬಿಕ್ಕಟ್ಟು: ಪ್ರಧಾನಿ ಮನೆಗೆ ಬೆಂಕಿ, ಬುಧವಾರ ಅಧ್ಯಕ್ಷ ರಾಜೀನಾಮೆ

- Advertisement -
- Advertisement -

ತೀವ್ರ ಆರ್ಥಿಕ ಬಿಕ್ಕಟ್ಟಿನ ಕಾರಣ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ವಿರುದ್ಧ ಪ್ರತಿಭಟನೆ ತೀವ್ರವಾಗಿದ್ದು, ಮುಂದಿನ ಬುಧವಾರ ಅಧ್ಯಕ್ಷ ರಾಜೀನಾಮೆ ನೀಡಲಿದ್ದಾರೆ. ಸಂಸತ್ತು ನೂತನ ನಾಯಕನನ್ನು ಆಯ್ಕೆ ಮಾಡಿಕೊಳ್ಳುವವರೆಗೆ, ಅಂದರೆ 30 ದಿನಗಳವರೆಗೆ ಸ್ಪೀಕರ್‌‌ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಕೊಲಂಬೊದಲ್ಲಿರುವ ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ಪ್ರತಿಭಟನಾಕಾರರು ಇಂದು ಬೆಂಕಿ ಹಚ್ಚಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ‘ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ನುಗ್ಗಿ ಬೆಂಕಿ ಹಚ್ಚಿದ್ದಾರೆ’ ಎಂದು ಲಂಕಾ ಪ್ರಧಾನಿ ಕಚೇರಿ ಹೇಳಿಕೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರೂ, ಅವರು ಪ್ರಧಾನಿ ಗೃಹ ಪ್ರವೇಶಿಸಿದ್ದಾರೆ. ಪ್ರತಿಭಟನಾಕಾರರು ಪ್ರಧಾನಿಯವರ ವಾಹನಗಳಿಗೆ ಹಾನಿ ಮಾಡುತ್ತಿರುವುದು ಕಂಡುಬಂದಿದೆ.

ಮೇ ತಿಂಗಳಲ್ಲಿ ಪ್ರಧಾನ ಮಂತ್ರಿಯಾಗಿ ನೇಮಕಗೊಂಡ ವಿಕ್ರಮಸಿಂಘೆ, “ಸರ್ಕಾರದ ಮುಂದುವರಿಕೆ ಮತ್ತು ಎಲ್ಲಾ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ” ಎಂದು ಘೋಷಿಸಿದ್ದಾರೆ.

“ಎಲ್ಲಾ ನಾಗರಿಕರ ಸುರಕ್ಷತೆ ಸೇರಿದಂತೆ ಸರ್ಕಾರದ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ನಾನು ಇಂದು ಪಕ್ಷದ ನಾಯಕರ ಅತ್ಯುತ್ತಮ ಶಿಫಾರಸನ್ನು ಸ್ವೀಕರಿಸುತ್ತೇನೆ. ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತೇನೆ. ಇದಕ್ಕೆ ಅನುಕೂಲವಾಗುವಂತೆ ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ಮಾಜಿ ಕ್ರಿಕೆಟಿಗರಾದ ಸನತ್ ಜಯಸೂರ್ಯ ಮತ್ತು ಮಹೇಲಾ ಜಯವರ್ಧನಾ ಅವರು ಹಿಂಸಾಚಾರವನ್ನು ಖಂಡಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮನವಿ ಮಾಡಿದ್ದಾರೆ.

ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಮೊದಲು ರಾಜಪಕ್ಷೆ ಪಲಾಯನ ಮಾಡಿದ್ದರು. ಇದರ ನಡುವೆ ಶ್ರೀಲಂಕಾ ನೌಕಾಪಡೆಯ ಹಡಗಿನಲ್ಲಿ ಸೂಟ್‌ಕೇಸ್‌ಗಳನ್ನು ಲೋಡ್ ಮಾಡುತ್ತಿರುವ ವೀಡಿಯೊಗಳು ಹೊರಹೊಮ್ಮಿದವು. ಸೂಟ್‌ಕೇಸ್‌ಗಳು ಅಧ್ಯಕ್ಷ ರಾಜಪಕ್ಸೆ ಅವರದ್ದು ಎಂದು ಸ್ಥಳೀಯ ಮಾಧ್ಯಮಗಳು ಹೇಳಿಕೊಂಡಿವೆ.

ಅಧ್ಯಕ್ಷೀಯ ಭವನದ ಗೇಟ್‌ ಮುರಿದು ಒಳ ನಡೆದ ಪ್ರತಿಭಟನಾಕಾರರು, ಈಜುಕೊಳದಲ್ಲಿ ಈಜಾಡಿದ್ದರು. ಕಿಚನ್‌ನಲ್ಲಿರುವ ಊಟವನ್ನು ಸವಿದಿದ್ದರು.

ಇದನ್ನೂ ಓದಿರಿ: ಇದು ನಮ್ಮ ಭವಿಷ್ಯಕ್ಕಾಗಿ: ಜನಾಂದೋಲನಕ್ಕೆ ಲಂಕಾ ಮಾಜಿ ಕ್ರಿಕೆಟಿಗರ ಬೆಂಬಲ

22 ಮಿಲಿಯನ್ ಜನರಿರುವ ದ್ವೀಪ ರಾಷ್ಟ್ರವು ತೀವ್ರವಾದ ವಿದೇಶಿ ವಿನಿಮಯದ ಕೊರತೆಯಿಂದ ಬಿಕ್ಕಟ್ಟು ಎದುರಿಸುತ್ತಿದೆ. ಇಂಧನ, ಆಹಾರ ಮತ್ತು ಔಷಧಿಗಳ ಅಗತ್ಯ ಆಮದನ್ನಷ್ಟೇ ಮಾಡಿಕೊಳ್ಳುತ್ತಿದೆ. ಏಳು ದಶಕಗಳಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಪ್ರಕ್ಷುಬ್ಧತೆಯಲ್ಲಿ ಶ್ರೀಲಂಕಾ ಮುಳುಗಿದೆ.

ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರೇ ದೇಶದ ಅವನತಿಗೆ ಕಾರಣ ಎಂದು ಹಲವರು ದೂರುತ್ತಿದ್ದಾರೆ. ಮಾರ್ಚ್‌ನಲ್ಲಿ ಆರಂಭವಾದ ಶಾಂತಿಯುತ ಪ್ರತಿಭಟನೆಗಳು ಈಗ ತೀವ್ರ ಸ್ವರೂಪ ಪಡೆದಿವೆ.

ನಗದು ಕೊರತೆಯಿಂದಾಗಿ ಇಂಧನ ಸಾಗಣೆಯನ್ನು ಪಡೆಯುವುದನ್ನು ನಿಲ್ಲಿಸಿದ್ದರಿಂದ ಇತ್ತೀಚಿನ ವಾರಗಳಲ್ಲಿ ಅಸಮಾಧಾನವು ತೀವ್ರವಾಗಿದೆ. ಅಗತ್ಯ ಸೇವೆಗಳಿಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಪಡಿತರಗೊಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈಗಿನ ಸರ್ಕಾರಕ್ಕೆ ಒಂದು ವಿನಂತಿ ದಯವಿಟ್ಟು ಭಾರತೀಯರಿಗೂ ಇಂತಹ ಅವಕಾಶ ಮಾಡಿಕೊಡಬೇಡಿ ಹಾಗೇನಾದ್ರೂ ಆದರೆ ನಿಮಗೆ ಗಂಡಾಂತರ ಎಚ್ಚರಿಕೆ ಅಂತನೂ ಪರಿಗಣಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...