Homeಮುಖಪುಟಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

ಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

- Advertisement -
- Advertisement -

ಲಂಚ, ವಂಚನೆ ಪ್ರಕರಣದಲ್ಲಿ ಗೌತಮ್ ಅದಾನಿ ವಿರುದ್ದ ಅಮೆರಿಕ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದ ಬೆನ್ನಲ್ಲೇ, ತನ್ನ ನೆಲದಲ್ಲಿ ಅದಾನಿ ಸಂಸ್ಥೆ ಹೂಡಿಕೆ ಮಾಡಿರುವ ಯೋಜನೆಗಳ ಕುರಿತು ಶ್ರೀಲಂಕಾ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ವರದಿಯಾಗಿದೆ.

ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರ ಹೊಸ ಸರ್ಕಾರದ ಮೊದಲ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರ್ಕಾರದ ವಕ್ತಾರ ನಳಿಂದಾ ಜಯತಿಸ್ಸಾ, “ಭಾರತ ಮೂಲದ ಅದಾನಿ ನಿರ್ಮಾಣ ಸಂಸ್ಥೆಯು ಶ್ರೀಲಂಕಾದಲ್ಲಿ ಹೂಡಿಕೆ ಮಾಡಿರುವ ಯೋಜನೆಗಳ ಕುರಿತು ಹಣಕಾಸು ಹಾಗೂ ವಿದೇಶಾಂಗ ಸಚಿವರು ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಯಿತು” ಎಂದಿದ್ದಾರೆ.

“ಅದಾನಿ ಹೂಡಿಕೆ ಕುರಿತು ಎರಡು ತನಿಖೆಗಳು ನಡೆಯಲಿವೆ. ಇವುಗಳು ನೀಡುವ ವರದಿಯನ್ನು ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ” ಎಂದು ಜಯತಿಸ್ಸಾ ಹೇಳಿದ್ದಾಗಿ ವರದಿಯಾಗಿದೆ.

ದಿಸ್ಸನಾಯಕೆ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ನಂತರ, ದೇಶದಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿ, ಶ್ರೀಲಂಕಾದಿಂದ ದೋಚಿ ವಿದೇಶದಲ್ಲಿ ಬಚ್ಚಿಟ್ಟಿರುವ ದೇಶದ ಆಸ್ತಿಗಳನ್ನು ಮರಳಿ ತರಲಾಗುವುದು ಎಂದು ಭರವಸೆ ನೀಡಿದ್ದರು.

ಪವನ ವಿದ್ಯುತ್ ಯೋಜನೆಗಾಗಿ ಅದಾನಿ ಸಮೂಹವು ದ್ವೀಪರಾಷ್ಟ್ರವಾದ ಶ್ರೀಲಂಕಾದಲ್ಲಿ 44.2 ಕೋಟಿ ಅಮೆರಿಕನ್ ಡಾಲರ್‌ನಷ್ಟು ಹೂಡಿಕೆ ಮಾಡಿದೆ. ಆದರೆ, ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಯೋಜನೆ ಕೈಗೊಳ್ಳದಂತೆ ನ್ಯಾಯಾಲಯ ತಡೆ ನೀಡಿದೆ.

ಮತ್ತೊಂದೆಡೆ ಕೊಲೊಂಬೊದಲ್ಲಿ ಸಮುದ್ರದಾಳದ ಬಂದರು ಟರ್ಮಿನಲ್ ನಿರ್ಮಾಣಕ್ಕಾಗಿ ಅದಾನಿ ಕಂಪನಿಗೆ ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಹಣಕಾಸು ನಿಗಮವು 55.3 ಕೋಟಿ ಅಮೆರಿಕನ್ ಡಾಲರ್‌ ಆರ್ಥಿಕ ನೆರವು ನೀಡಿತ್ತು.

ದಿಸ್ಸನಾಯಕೆ ಅವರ ನ್ಯಾಷನಲ್ ಪೀಪಲ್ಸ್ ಆಡಳಿತವು ತಮ್ಮ ಅನುಮೋದನೆಯಲ್ಲಿ ಭ್ರಷ್ಟಾಚಾರವನ್ನು ಒಳಗೊಂಡಿರುವ ಯಾವುದೇ ವಿದೇಶಿ ಹೂಡಿಕೆ ಯೋಜನೆಗಳಿದ್ದರೆ ರದ್ದುಗೊಳಿಸುವುದಾಗಿ ಹೇಳಿದೆ.

ಅಮೆರಿಕದಲ್ಲಿ ಅದಾನಿ ಸಮೂಹದ ವಿರುದ್ಧ ನಡೆಯುತ್ತಿರುವ ವಿಚಾರಣೆ ನಂತರ, ನೈರೋಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಒಳಗೊಂಡಂತೆ ಕೀನ್ಯಾದಲ್ಲಿ ಅದಾನಿ ಸಮೂಹ ಕೈಗೊಂಡಿರುವ 2.5 ಶತಕೋಟಿ ಅಮೆರಿಕನ್ ಡಾಲರ್‌ ಹೂಡಿಕೆಯನ್ನು ಅಲ್ಲಿನ ಸರ್ಕಾರ ರದ್ದುಪಡಿಸಿದೆ.

ಪ್ರೆಂಚ್ ಮೂಲದ ಟೋಟಲ್ ಎನರ್ಜಿ ಅದಾನಿ ಸಮೂಹದ ಹೂಡಿಕೆಗಳನ್ನು ತಾತ್ಕಾಲಿಕ ಸ್ಥಗಿತ ಮಾಡಿದೆ ಎಂದು ವರದಿಯಾಗಿದೆ. ಭಾರತದಲ್ಲಿ ಆಂಧ್ರ ಸರ್ಕಾರ ಕೂಡ ಅದಾನಿ ಜೊತೆಗಿನ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ಯೋಚಿಸುತ್ತಿದೆ.

ಇದನ್ನೂ ಓದಿ : ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...