HomeUncategorizedಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ : ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆಗೆ ಆರಂಭಿಕ ಮುನ್ನಡೆ

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ : ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆಗೆ ಆರಂಭಿಕ ಮುನ್ನಡೆ

- Advertisement -
- Advertisement -

ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆರಂಭಿಕ ಮುನ್ನಡೆ ಗಳಿಸಿದ್ದಾರೆ.

ದಿಸ್ಸನಾಯಕೆ ಅವರು ನ್ಯಾ‍‍ಷನಲ್‌ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟದ ಅಭ್ಯರ್ಥಿಯಾಗಿ ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರೆಮುನಾ (ಜೆವಿಪಿ) ಪಕ್ಷದಿಂದ ಕಣಕ್ಕಿಳಿದಿದ್ದಾರೆ.

ಶ್ರೀಲಂಕಾದ ಚುನಾವಣಾ ಆಯೋಗದ ಪ್ರಕಾರ ಇದುವರೆಗೆ ಎಣಿಕೆಯಾದ ಮತಗಳಲ್ಲಿ ಶೇ. 53 ರಷ್ಟನ್ನು ದಿಸ್ಸನಾಯಕೆ ಪಡೆದುಕೊಂಡಿದ್ದು, ಮುನ್ನಡೆಯಲ್ಲಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಪ್ರತಿಪಕ್ಷದ ನಾಯಕ ಸಜಿತ್ ಪ್ರೇಮದಾಸ ಶೇ. 22ರಷ್ಟು ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದರೆ, ಹಾಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮೂರನೇ ಸ್ಥಾನದಲ್ಲಿದ್ದಾರೆ.

ಚುನಾವಣಾ ಆಯೋಗದ ಪ್ರಕಾರ, ಅರ್ಹ 17 ಮಿಲಿಯನ್ ಜನರಲ್ಲಿ ಸುಮಾರು 75 ಪ್ರತಿಶತದಷ್ಟು ಜನರು ಶನಿವಾರ ನಡೆದ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ.

55 ವರ್ಷದ ದಿಸ್ಸನಾಯಕೆ ಅವರ ಪಕ್ಷವು ಶ್ರೀಲಂಕಾ ಸಂಸತ್‌ನಲ್ಲಿ ಮೂರು ಸ್ಥಾನಗಳನ್ನು ಹೊಂದಿದೆ. ಭ್ರಷ್ಟಾಚಾರ ವಿರೋಧಿ ಕಠಿಣ ಕ್ರಮಗಳು ಮತ್ತು ಜನಸ್ನೇಹಿ ನೀತಿಗಳನ್ನು ರೂಪಿಸುವುದಾಗಿ ದಿಸ್ಸನಾಯಕೆ ಚುನಾವಣೆ ಪ್ರಚಾರದ ವೇಳೆ ಭರವಸೆ ನೀಡಿದ್ದಾರೆ.

ದಿಸ್ಸನಾಯಕೆ ಅವರ ಪಕ್ಷ ಸರ್ಕಾರದ ಜನರ ವಿರೋಧಿ ತೆರಿಗೆ ಮತ್ತು ಆರ್ಥಿಕ ನೀತಿಗಳ ವಿರುದ್ಧ ಹೋರಾಟ ನಡೆಸಿ ಶ್ರೀಲಂಕಾ ಜನತೆಯ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ.

2022ರಲ್ಲಿ ಶ್ರೀಲಂಕಾದಲ್ಲಿ ತೀವ್ರ ಅರ್ಥಿಕ ಬಿಕ್ಕಟ್ಟು ಉಂಟಾಗಿ ಹಣದುಬ್ಬರ ಗಗನಕ್ಕೇರಿತ್ತು. ಜನರಿಗೆ ಅಗತ್ಯ ವಸ್ತುಗಳ ಕೊರತೆ ಉಂಟಾಗಿ ಪರದಾಡುವಂತಾಗಿತ್ತು. ಆಗ ಸರ್ಕಾರದ ವಿರುದ್ದ ಹೋರಾಟ ರೂಪಿಸಿದ್ದರ ಹಿಂದೆ ದಿಸ್ಸನಾಯಕೆ ಅವರ ಪಾತ್ರ ದೊಡ್ಡದಿತ್ತು. ಅವರು ನೇರವಾಗಿ ದಂಗೆಯೇಳದಿದ್ದರೂ, ಜನರು ಹೋರಾಟ ಕೈಗೊಂಡಿದ್ದರ ಹಿಂದೆ ಅವರ ಪ್ರೇರೇಪಣೆಯಿತ್ತು ಎಂದು ವರದಿಗಳು ಹೇಳಿವೆ.

ರಾಜಪಕ್ಸೆ ಅವರ ರಾಜೀನಾಮೆಯ ನಂತರ ಉಂಟಾದ ನಾಯಕತ್ವದ ಕೊರತೆಯು ದಿಸ್ಸನಾಯಕೆಗೆ ಮತ್ತು ಅವರ ಪಕ್ಷಕ್ಕೆ ದೊಡ್ಡ ಅವಕಾಶ ಮಾಡಿ ಕೊಟ್ಟಿತು. ಭ್ರಮನಿರಸನಗೊಂಡ ನಾಗರಿಕರ ಜೊತೆ ನಿಂತ ದಿಸ್ಸನಾಯಕೆ,  ಸಾಮಾಜಿಕ ನ್ಯಾಯ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಟ ಕೈಗೊಂಡಿದ್ದರು. ಅವೆಲ್ಲವೂ, ಈ ಚುನಾವಣೆಯಲ್ಲಿ ಮತಗಳಾಗಿ ಪರಿವರ್ತನೆಗೊಂಡಿರುವ ಲಕ್ಷಣ ಕಾಣುತ್ತಿದೆ.

2022ರಲ್ಲಿ ಬೃಹತ್ ಪ್ರತಿಭಟನೆ ನಡೆದು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರನ್ನು ಪದಚ್ಯುತಗೊಳಿಸಿದ ನಂತರ, ಮೊದಲ ಬಾರಿಗೆ ದ್ವೀಪ ರಾಷ್ಟ್ರದಲ್ಲಿ ಚುನಾವಣೆ ನಡೆಯುತ್ತಿದೆ.

ಇದನ್ನೂ ಓದಿ : ಲೆಬನಾನ್ ಪೇಜರ್ ಸ್ಫೋಟಕ್ಕೆ ಸಂಬಂಧಿಸಿದಂತೆ ವಯನಾಡಿನ ಮಲಯಾಳಿ ಯುವಕನ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...