Homeಮುಖಪುಟಶ್ರೀಲಂಕಾ: ಹಂಗಾಮಿ ಅಧ್ಯಕ್ಷರಾಗಿ ವಿಕ್ರಮಸಿಂಘೆ ಅಧಿಕಾರ ಸ್ವೀಕಾರ

ಶ್ರೀಲಂಕಾ: ಹಂಗಾಮಿ ಅಧ್ಯಕ್ಷರಾಗಿ ವಿಕ್ರಮಸಿಂಘೆ ಅಧಿಕಾರ ಸ್ವೀಕಾರ

- Advertisement -
- Advertisement -

ಶ್ರೀಲಂಕಾದ ಮಾಜಿ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಸಲ್ಲಿಸಿದ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ ಕೆಲವೇ ಗಂಟೆಗಳ ನಂತರ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಂಸತ್ತು ಶನಿವಾರ ಸಭೆ ಸೇರಲಿದ್ದು, ಸಂವಿಧಾನದ ನಿಬಂಧನೆಗಳ ಪ್ರಕಾರ ಏಳು ದಿನಗಳಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಹೇಳಿರುವುದಾಗಿ ‘ಡೈಲಿ ಮಿರರ್ ಲಂಕಾ’ ವರದಿ ಮಾಡಿದೆ.

ಹೊಸದಾಗಿ ಚುನಾಯಿತರಾದ ಅಧ್ಯಕ್ಷರು ಹೊಸ ಪ್ರಧಾನ ಮಂತ್ರಿಯನ್ನು ನೇಮಿಸುವ ಸಾಧ್ಯತೆಯಿದೆ. ನಂತರ ಅವರು ಸಂಸತ್ತಿನಲ್ಲಿ ಅನುಮೋದನೆ ಪಡೆಯಬೇಕಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ವಾರ ರಾಷ್ಟ್ರಪತಿ ನಿವಾಸ, ಪ್ರಧಾನಿ ಕಚೇರಿ ಸೇರಿದಂತೆ ಸರ್ಕಾರಿ ಕಟ್ಟಡಗಳಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಲು ಬಯಸುವುದಿಲ್ಲ ಎಂದು ಗುರುವಾರ ತೆರವು ಮಾಡಿದ್ದಾರೆ. ಇದರ ಬೆನ್ನಲ್ಲೇ ಶ್ರೀಲಂಕಾ ಸೇನಾ ಪಡೆಗಳು ಭದ್ರತೆಯತ್ತ ಗಮನ ಹರಿಸಿವೆ.

ಸುಮಾರು ಒಂದು ತಿಂಗಳಿಂದ ಶ್ರೀಲಂಕಾ ಪ್ರಜೆಗಳು ನಡೆಸುತ್ತಿರುವ ಹೋರಾಟಕ್ಕೆ ಮಣಿದಿರುವ ಗೋತಬಯ ರಾಜಪಕ್ಸೆ ಗುರುವಾರ ರಾತ್ರಿ ಇಮೇಲ್ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ಸಿಂಗಾಪುರದಲ್ಲಿರುವ ಗೋತಬಯ, ತಮ್ಮ ಪತ್ನಿಯೊಂದಿಗೆ ಶ್ರೀಲಂಕಾದಿಂದ ಪಲಾಯನ ಮಾಡಿದ್ದಾರೆ. ಸಿಂಗಾಪುರಕ್ಕೆ ಪ್ರಯಾಣಿಸುವ ಮೊದಲು ಮಾಲ್ಡೀವ್ಸ್‌ನಲ್ಲಿ ಒಂದು ದಿನ ತಂಗಿದ್ದರು.

ಶ್ರೀಲಂಕಾ ಪೊದುಜನ ಪೆರಮುನಾ (ಎಸ್‌ಎಲ್‌ಪಿಪಿ) ಪಕ್ಷದ ಸಂಸದ ಗೆವಿಂದು ಕುಮಾರತುಂಗ ಅವರು ಸುದ್ದಿ ಸಂಸ್ಥೆ ಎಎನ್‌ಐಗೆ ಪ್ರತಿಕ್ರಿಯೆ ನೀಡಿದ್ದು, “ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡಲು ಪ್ರತಿಪಕ್ಷಗಳು ವೇಳಾಪಟ್ಟಿಯನ್ನು ಸಿದ್ಧಪಡಿಸಿವೆ” ಎಂದಿದ್ದಾರೆ.

ಭಾರತ ನೆರವು

“ಬಿಕ್ಕಟ್ಟಿನ ಸಮಯದಲ್ಲಿ ನೆರೆಯ ಶ್ರೀಲಂಕಾಕ್ಕೆ ಸಾಧ್ಯವಾದಷ್ಟು ಸಹಾಯವನ್ನು ಭಾರತ ಮಾಡುತ್ತಿದೆ” ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೋಲ್ಕತ್ತಾದಲ್ಲಿ ಹೇಳಿದ್ದಾರೆ.

ತುರ್ತು ಪರಿಸ್ಥಿತಿ

ಗೊಟಾಬಯ ರಾಜಪಕ್ಸೆ ದೇಶದಿಂದ ಪಲಾಯನಗೈದು ಮಾಲ್ಡೀವ್ಸ್‌ನಲ್ಲಿ ಆಶ್ರಯ ಪಡೆದ ಕೂಡಲೇ ಜುಲೈ 13 ರಂದು ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು.

ಇದನ್ನೂ ಓದಿರಿ: ದೆಹಲಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್ ಜುಬೇರ್‌ಗೆ ಜಾಮೀನು

ಪ್ರಸ್ತುತ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಅನಿರ್ದಿಷ್ಟ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಯನ್ನು ಹೇರಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಅಧ್ಯಕ್ಷ ರಾಜಪಕ್ಸೆ ಪಲಾಯನ ಮಾಡುವ ಸುದ್ದಿ ಹೊರಬಿದ್ದ ಕೂಡಲೇ ರಾಜಧಾನಿ ಕೊಲಂಬೊದಲ್ಲಿ ಮತ್ತೆ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದವು, ಪ್ರತಿಭಟನಾಕಾರರು ಶ್ರೀಲಂಕಾದ ಪ್ರಧಾನಿ ಕಚೇರಿಯತ್ತ ಸಾಗಿದ್ದರು.

ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಕಚೇರಿ ಬಳಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿರುವ ದೃಶ್ಯಗಳು ಕಂಡುಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...