Homeಅಂತರಾಷ್ಟ್ರೀಯಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರ ಆಗಮನದ ವರದಿಯನ್ನು ನಿರಾಕರಿಸಿದ ಶ್ರೀಲಂಕಾ ಸೇನೆ

ಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರ ಆಗಮನದ ವರದಿಯನ್ನು ನಿರಾಕರಿಸಿದ ಶ್ರೀಲಂಕಾ ಸೇನೆ

- Advertisement -
- Advertisement -

ಆರ್ಥಿಕ ಬಿಕ್ಕಟ್ಟಿಗೆ ಸಿಲುಕುವುದರ ಜೊತೆಗೆ, ಶ್ರೀಲಂಕಾ ರಾಷ್ಟ್ರದಾದ್ಯಂತ ನಾಗರಿಕರ ಪ್ರತಿಭಟನೆಗಳು ಭುಗಿಲೆದ್ದಿವೆ. ಆಹಾರ ಮತ್ತು ಮೂಲಭೂತ ಅಗತ್ಯಗಳ ಕೊರತೆಯಿಂದಾಗಿ ಸರ್ಕಾರದ ವಿರುದ್ಧದ ಪ್ರತಿಭಟನೆಯನ್ನು ತಡೆಯಲು ಪೊಲೀಸರು ಹೆಣಗಾಡುತ್ತಿದ್ದಾರೆ. ಈ ಮಧ್ಯೆ ಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರು ಶ್ರೀಲಂಕಾ ಪ್ರವೇಶಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಊಹಾಪೋಹಗಳು ಹರಡಿದಾಡುತ್ತಿವೆ.

ಆದರೆ ಇದನ್ನು ನಿರಾಕರಿಸಿರುವ ಶ್ರೀಲಂಕಾ ಸೇನೆ ಮತ್ತು ಭಾರತೀಯ ಹೈಕಮಿಷನ್‌, “ಭಾರತದಿಂದ ಯಾವುದೇ ಮಿಲಿಟರಿ ಹಸ್ತಕ್ಷೇಪ ನಡೆದಿಲ್ಲ” ಎಂದು ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ರಕ್ಷಣಾ ಕಾರ್ಯದರ್ಶಿ ಕಮಲ್ ಗುಣರತ್ನೆ ಶನಿವಾರದಂದು ಭಾರತೀಯ ಸೈನಿಕರ ಆಗಮನದ ವರದಿಗಳನ್ನು ತಳ್ಳಿಹಾಕಿದ್ದಾರೆ. 2021ರಲ್ಲಿ ನಡೆದ ಭಾರತ-ಶ್ರೀಲಂಕಾ ಜಂಟಿ ಮಿಲಿಟರಿ ಸಮರಭ್ಯಾಸದ ಅಧಿಕೃತ ಚಿತ್ರಗಳನ್ನು ಹೊಂದಿರುವ ನಕಲಿ ಸುದ್ದಿಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭುಗಿಲೆದ್ದ ಆರ್ಥಿಕ ಬಿಕ್ಕಟ್ಟು; ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ

ಭದ್ರತೆಯನ್ನು ಖಾತ್ರಿಪಡಿಸುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಶ್ರೀಲಂಕಾದ ಪಡೆಗಳ ಸನ್ನದ್ಧವಾಗಿದೆ ಎಂದು ರಕ್ಷಣಾ ಕಾರ್ಯದರ್ಶಿ ವಿಶ್ವಾಸ ವ್ಯಕ್ತಪಡಿಸಿದ್ದು, ತಪ್ಪು ಮಾಹಿತಿಯಿಂದ ಎಚ್ಚರಿಕೆಯಿಂದ ಇರಲು ಜನರನ್ನು ಕೇಳಿದ್ದಾರೆ.

ಈ ಬಗ್ಗೆ ಭಾರತೀಯ ಹೈಕಮಿಷನ್‌ ನೀಡಿದ ಹೇಳಿಕೆಯಲ್ಲಿ, “ಶ್ರೀಲಂಕಾಕ್ಕೆ ಭಾರತೀಯ ಸೇನೆಯ ಆಗಮನದ ಬಗ್ಗೆಗಿನ ವರದಿಗಳು ನಿಸ್ಸಂಶಯವಾಗಿ ಸುಳ್ಳು ಮತ್ತು ಸಂಪೂರ್ಣವಾಗಿ ಆಧಾರರಹಿತ” ಎಂದು ತಿಳಿಸಿದೆ.

ಈ ಮಧ್ಯೆ, ಶ್ರೀಲಂಕಾದಲ್ಲಿ ಭಾನುವಾರದಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಆದರೆ ಅಲ್ಲಿ ಆಡಳಿತವು ಶನಿವಾರದಿಂದ 36 ಗಂಟೆಗಳ ಸುದೀರ್ಘ ಕರ್ಫ್ಯೂ ಅನ್ನು ವಿಧಿಸಿದೆ.

ನಿನ್ನೆ ಹೊರಡಿಸಲಾದ ಗೆಜೆಟ್‌ನಲ್ಲಿ, ಶನಿವಾರ ಸಂಜೆ 6 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಕರ್ಫ್ಯೂ ಇದ್ದು, ಈ ಸಮಯದಲ್ಲಿ ಸಾರ್ವಜನಿಕ ರಸ್ತೆ, ಉದ್ಯಾನವನ, ರೈಲ್ವೆ, ಸಮುದ್ರ ತೀರ ಅಥವಾ ಇತರ ಸಾರ್ವಜನಿಕ ಸ್ಥಳಗಳಿಗೆ ಜನರು ಬರುವುದನ್ನು ನಿಷೇಧಿಸಲಾಗಿದೆ.

ಈ ಕರ್ಫ್ಯೂ ವಿಧಿಸುವ ಕೆಲವೇ ಗಂಟೆಗಳ ಮೊದಲು, ರಾಷ್ಟ್ರದ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ರಾಜೀನಾಮೆ ನೀಡಬೇಕೆಂದು ಜನರು ಬೀದಿಗಿಳಿದಿದ್ದರು.

ಗುರುವಾರ ಸಂಜೆ ಅಧ್ಯಕ್ಷರ ಭವನದ ಬಳಿ ಸಾರ್ವಜನಿಕ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು ಮತ್ತು ಪೊಲೀಸರು ಜನರ ಮೇಲೆ ದಾಳಿ ಮಾಡಿದ್ದರು. ಇದರ ನಂತರ ಪ್ರತಿಭಟನಾಕಾರರಲ್ಲಿ 50 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...