Homeಮುಖಪುಟ20 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

20 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

- Advertisement -
- Advertisement -

ಶ್ರೀಲಂಕಾದಲ್ಲಿ ಮೀನುಗಾರಿಕೆ ಮಾಡಿದ್ದಕ್ಕಾಗಿ ಎರಡು ದೋಣಿಗಳ ಸಹಿತ 20 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದಿದೆ ಎಂದು ರಾಮೇಶ್ವರಂನ ಮೀನುಗಾರಿಕಾ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ರಾಮೇಶ್ವರಂ ಮತ್ತು ತಂಗಚಿಮಡಂ ಮೂಲದ ಮೀನುಗಾರರನ್ನು ಬುಧವಾರ ರಾತ್ರಿ ಕಚ್ಚತೀವು ಬಳಿ ಲಂಕಾ ನೌಕಾಪಡೆಯು ಬಂಧಿಸಿದೆ ಎಂದು ಮೀನುಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ಹೆಚ್ಚಿನ ತನಿಖೆಗಾಗಿ ಅವರನ್ನು ಅಲ್ಲಿನ ಸ್ಥಳೀಯ ನೌಕಾ ಪಡೆಯ ಶಿಬಿರಕ್ಕೆ ಕರೆದೊಯ್ಯಲಾಗಿದೆ. ವಶಕ್ಕೆ ಪಡೆದ ಎರಡು ಮೀನುಗಾರಿಕಾ ದೋಣಿಗಳನ್ನು ಲಂಕಾ ಮೀನುಗಾರಿಕಾ ಅಧಿಕಾರಿಗಳಿಗೆ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡಿನ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯಿಂದ ಬಂಧಿಸಲಾಗಿದೆಯೆಂದು ಮೀನುಗಾರರ ಸಂಘದ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದೆ. ಅವರನ್ನು ಬಿಡುಗಡೆ ಮಾಡುವಂತೆ ಶ್ರೀಲಂಕಾ ಸರ್ಕಾರಕ್ಕೆ ಒತ್ತಡ ಹೇರುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಕುವೆಂಪು ಸಮಗ್ರ ಸಾಹಿತ್ಯ ಸಂಪುಟ 12’ ಮಾರಾಟಕ್ಕೆ ಹೈಕೋರ್ಟ್ ತಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂದೇಶ್‌ಖಾಲಿ ಘಟನೆಗಳ ಬಗ್ಗೆ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಟಿಎಂಸಿ

0
ಸ್ಥಳೀಯ ಬಿಜೆಪಿ ನಾಯಕಿಯೊಬ್ಬರು ಟಿಎಂಸಿ ನಾಯಕರ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಲು ಖಾಲಿ ಪೇಪರ್‌ಗಳ ಮೇಲೆ ಅನೇಕ ಮಹಿಳೆಯರ ಸಹಿ ಹಾಕಿಸಿಕೊಂಡಿದ್ದಾರೆ ಎಂದು ಹೊಸದಾಗಿ ಹೊರಬಂದ ಹಲವಾರು ವೀಡಿಯೊಗಳ ನಂತರ ತೃಣಮೂಲ...