Homeಅಂತರಾಷ್ಟ್ರೀಯಶ್ರೀಲಂಕಾ ಸಂಸದೀಯ ಚುನಾವಣೆ: ರಾಜಪಕ್ಸೆ ನೇತೃತ್ವದ ಶ್ರೀಲಂಕಾ ಪೀಪಲ್ಸ್ ಫ್ರಂಟ್ ಪಾರ್ಟಿ ಗೆಲುವು

ಶ್ರೀಲಂಕಾ ಸಂಸದೀಯ ಚುನಾವಣೆ: ರಾಜಪಕ್ಸೆ ನೇತೃತ್ವದ ಶ್ರೀಲಂಕಾ ಪೀಪಲ್ಸ್ ಫ್ರಂಟ್ ಪಾರ್ಟಿ ಗೆಲುವು

ಮಾಜಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ನೇತೃತ್ವದ ಯುನೈಟೆಡ್ ನ್ಯಾಷನಲ್ ಪಾರ್ಟಿ ಈ ಬಾರಿ ಅಭೂತಪೂರ್ವ ಸೋಲನ್ನು ಅನುಭವಿಸಿತು. ಅದು ಕೇವಲ ಒಂದು ಸ್ಥಾನವನ್ನು ಗೆದ್ದಿದೆ.

- Advertisement -
- Advertisement -

ಮಹಿಂದಾ ರಾಜಪಕ್ಸೆ ನೇತೃತ್ವದ ಶ್ರೀಲಂಕಾ ಪೀಪಲ್ಸ್ ಅಲೈಯನ್ಸ್ (ಎಸ್‌ಎಲ್‌ಪಿಎ) ಶ್ರೀಲಂಕಾದ 9 ನೇ ಸಂಸತ್ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದೆ. 6,853,690 ಮತಗಳೊಂದಿಗೆ ಶ್ರೀಲಂಕಾ ಪೀಪಲ್ಸ್ ಅಲೈಯನ್ಸ್ ಗೆಲುವು ಸಾಧಿಸಿದೆ.

225 ಸ್ಥಾನಗಳಲ್ಲಿ ಮೂರನೇ ಎರಡರಷ್ಟು ಬಹುಮತದ ಗುರಿ ಹೊಂದಿರುವ ಶ್ರೀಲಂಕಾ ಪೀಪಲ್ಸ್ ಅಲೈಯನ್ಸ್ (ಎಸ್‌ಪಿಎ) 150 ಸ್ಥಾನಗಳಲ್ಲಿ 145 ಸ್ಥಾನಗಳನ್ನು ಗೆದ್ದುಕೊಂಡಿತು, ಇದು ಮೂರನೇ ಎರಡು ಬಹುಮತವಾಗಿದೆ.

ಪ್ರತಿಪಕ್ಷ ನಾಯಕ ಸಾಜಿದ್ ಪ್ರೇಮದಾಸ ನೇತೃತ್ವದ ಯುನೈಟೆಡ್ ಪೀಪಲ್ಸ್ ಪವರ್ 2,771,980 ಮತಗಳನ್ನು ಗಳಿಸಿ ಎರಡನೇ ಸ್ಥಾನದಲ್ಲಿದೆ.

ಅದರಂತೆ ಯುನೈಟೆಡ್ ಪೀಪಲ್ಸ್ ಪವರ್ 54 ಸ್ಥಾನಗಳನ್ನು ಗೆದ್ದುಕೊಂಡಿತು. ನ್ಯಾಷನಲ್ ಪೀಪಲ್ ಪವರ್‌ಗೆ 445,958 ಮತಗಳು ದೊರೆತು ಪಕ್ಷಕ್ಕೆ 3 ಸ್ಥಾನಗಳು ದೊರೆತಿವೆ.

ವಿಷೇಶವಾಗಿ ಶ್ರೀಲಂಕಾ ತಮಿಳು ರಾಷ್ಟ್ರೀಯ ಪಕ್ಷಕ್ಕೆ 327,168 ಮತಗಳು ಮತ್ತು ತಮಿಳು ರಾಷ್ಟ್ರೀಯ ಪಕ್ಷಕ್ಕೆ 10 ಸ್ಥಾನಗಳು ದೊರೆತಿವೆ.

ಮಾಜಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ನೇತೃತ್ವದ ಯುನೈಟೆಡ್ ನ್ಯಾಷನಲ್ ಪಾರ್ಟಿ ಈ ಬಾರಿ ಅಭೂತಪೂರ್ವ ಸೋಲನ್ನು ಅನುಭವಿಸಿತು. ಅದು 249,435 ಮತಗಳನ್ನು ಪಡೆದು ಕೇವಲ ಒಂದು ಸ್ಥಾನವನ್ನು ಗೆದ್ದಿದೆ.

ಪ್ರಧಾನಿ ನರೇಂದ್ರ ಮೋದಿ ಮಹಿಂದಾ ರಾಜಪಕ್ಸೆಗೆ ಅಭಿನಂದನೆ ಸಲ್ಲಿಸಿದ್ದಾರೆ

ಭಾರತದ ಪ್ರಧಾನಿ ನರೇಂದ್ರ ಮೋದಿ ಮಹಿಂದಾ ರಾಜಪಕ್ಸೆ ಅವರನ್ನು ದೂರವಾಣಿ ಮೂಲಕ ಅಭಿನಂದಿಸಿದ್ದಾರೆ. ಚುನಾವಣೆಯಲ್ಲಿ ಉತ್ಸಾಹದಿಂದ ಮತ ಚಲಾಯಿಸಿದ ದೇಶದ ಜನರನ್ನು ಅಭಿನಂದಿಸಿದ ಭಾರತದ ಪ್ರಧಾನಿ ಮೋದಿ, ಇದು ಉಭಯ ದೇಶಗಳ ನಡುವೆ ಪ್ರಜಾಪ್ರಭುತ್ವ ಮೌಲ್ಯಗಳ ಬಲವಾದ ಹಂಚಿಕೆಯ ಪ್ರತಿಬಿಂಬವಾಗಿದೆ ಎಂದು ಹೇಳಿದ್ದಾರೆಂದು ಅವರು ಹೇಳಿದ್ದಾರೆ.

ಈ ಮಾಹಿತಿಯನ್ನು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ, ಉಭಯ ದೇಶಗಳ ನಡುವಿನ ದೀರ್ಘಕಾಲೀನ ಸಹಕಾರವನ್ನು ಇನ್ನಷ್ಟು ಹೆಚ್ಚಿಸಲು ಶ್ರೀಲಂಕಾದ ಜನರ ಬಲವಾದ ಬೆಂಬಲದೊಂದಿಗೆ ಭಾರತದೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.


ಓದಿ:  ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿಯಿಂದ ಆತ್ಮಹತ್ಯೆ ಬೆದರಿಕೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...