Homeಮುಖಪುಟತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

- Advertisement -
- Advertisement -

ರಾಷ್ಟ್ರವ್ಯಾಪಿ ಪ್ರತಿಭಟನೆಯು ತೀವ್ರಗೊಳ್ಳುತ್ತಿದ್ದಂತೆ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಆರ್ಥಿಕ ಬಿಕ್ಕಟ್ಟಿನ ನಡುವೆ ಹೊಸ ಕ್ಯಾಬಿನೆಟ್‌ಗೆ ದಾರಿ ಮಾಡಿಕೊಡುವ ಸಾಧ್ಯತೆಯಿದೆ.

ಶುಕ್ರವಾರ ನಡೆದ ವಿಶೇಷ ಸಭೆಯಲ್ಲಿ ಅಧ್ಯಕ್ಷ ಗೊಟ್ಬಯಾ ರಾಜಪಕ್ಸೆ ಅವರು, “ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೆ ಪರಿಹಾರವಾಗಿ ಅಧಿಕಾರದಿಂದ ಕೆಳಗಿಳಿಯಬೇಕು” ಎಂದು ಪ್ರಧಾನಿಗೆ ಮನವಿ ಮಾಡಿದ ಕೆಲವು ದಿನಗಳ ನಂತರ ಈ ನಿರ್ಧಾರ ಹೊರಬಂದಿದೆ ಎಂದು ಶ್ರೀಲಂಕಾದ ಡೈಲಿ ಮಿರರ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೀಗ ಪ್ರಧಾನಿ ರಾಜೀನಾಮೆ ನೀಡಿದ್ದು, ಅಧ್ಯಕ್ಷ ರಾಜಪಕ್ಸೆ ಅವರು ಸಂಸತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳನ್ನು ಸರ್ವಪಕ್ಷಗಳ ಸಂಪುಟ ರಚನೆಗೆ ಆಹ್ವಾನಿಸುವ ನಿರೀಕ್ಷೆಯಿದೆ.

“ಮಧ್ಯಂತರ ಸರ್ಕಾರದಲ್ಲಿ ಪ್ರಧಾನಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ” ಎಂದು ವಿರೋಧ ಪಕ್ಷವಾದ ‘ಸಮಗಿ ಜನ ಬಲವೇಗಯ (ಎಸ್‌ಜೆಬಿ)’ ನಾಯಕ ಸಜಿತ್ ಪ್ರೇಮದಾಸ ಅವರು ಈ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಬೆಳಿಗ್ಗೆ ಪ್ರತಿಭಟನಾಕಾರರು ಪ್ರಧಾನಿಯವರ ಅಧಿಕೃತ ನಿವಾಸವಾದ ಟೆಂಪಲ್ ಟ್ರೀಸ್ ಎದುರು ಪ್ರತಿಭಟನೆ ನಡೆಸಿ, ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡದಂತೆ ಒತ್ತಾಯಿಸಿದರು.

ಪ್ರಧಾನಿಯವರೊಂದಿಗಿನ ಭೇಟಿಯ ನಂತರ ಅವರು ಟೆಂಪಲ್ ಟ್ರೀಸ್ ಬಳಿ ಸರ್ಕಾರಿ ವಿರೋಧಿ ಪ್ರತಿಭಟನಾಕಾರರೊಂದಿಗೆ ಘರ್ಷಣೆ ನಡೆಸಿದರು. ಗಾಯಗೊಂಡಿರುವ ಕನಿಷ್ಠ 16 ಜನರನ್ನು ಕೊಲಂಬೊ ನ್ಯಾಷನಲ್‌ ಪೊಲೀಸ್ ಠಾಣೆಗೆ ದಾಖಲಿಸಲಾಗಿದೆ.

ಸಾರ್ವಜನಿಕರು ಸಂಯಮದಿಂದ ವರ್ತಿಸುವಂತೆ ಒತ್ತಾಯಿಸಿ ಟ್ವೀಟ್ ಮಾಡಿದ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿರಿ: ಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

“ಶ್ರೀಲಂಕಾದಲ್ಲಿ ಭಾವನಾತ್ಮಕತೆ ಹೆಚ್ಚುತ್ತಿದೆ. ನಮ್ಮ ಸಾಮಾನ್ಯ ಜನರು ಸಂಯಮದಿಂದ ವರ್ತಿಸುವಂತೆ ನಾನು ಒತ್ತಾಯಿಸುತ್ತೇನೆ. ಹಿಂಸಾಚಾರವು ಹಿಂಸೆಯನ್ನು ಮಾತ್ರ ಹುಟ್ಟುಹಾಕುತ್ತದೆ ಎಂಬುದನ್ನು ನೆನಪಿನಲ್ಲಿಡಿ. ನಾವು ಹೊಂದಿರುವ ಆರ್ಥಿಕ ಬಿಕ್ಕಟ್ಟಿಗೆ ಆರ್ಥಿಕ ಪರಿಹಾರದ ಅಗತ್ಯವಿದೆ, ಈ ಆಡಳಿತವು ಪರಿಹರಿಸಲು ಬದ್ಧವಾಗಿದೆ” ಎಂದು ಮಹಿಂದಾ ತಿಳಿಸಿದ್ದಾರೆ.

ಮಹಿಂದಾ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ, “ಶಾಂತಿಯುತ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಲಾಗಿದೆ. ನಿಮ್ಮ ಕಚೇರಿಗೆ ಮೊದಲು ಭೇಟಿ ನೀಡಿದ ಗೂಂಡಾಗಳು, ಪುಂಡರು ಮತ್ತು ನಿಮ್ಮ ಬೆಂಬಲಿಗರಿಂದ ಮಾತ್ರ ಹಿಂಸಾಚಾರ ನಡೆದಿದೆ” ಎಂದು ಆರೋಪಿಸಿದ್ದಾರೆ.

ವಿದೇಶಿ ವಿನಿಮಯ ಕೊರತೆಯಿಂದ ಉದ್ಭವಿಸಿರುವ ಆರ್ಥಿಕ ಬಿಕ್ಕಟ್ಟಿಗೆ ಶ್ರೀಲಂಕಾ ತತ್ತರಿಸಿದೆ. ಇದು ಇಂಧನ, ಆಹಾರ ಮತ್ತು ಔಷಧಿಗಳಂತಹ ಅಗತ್ಯ ಸರಬರಾಜುಗಳ ಕೊರತೆಗೆ ಕಾರಣವಾಗಿದೆ. ಸರಕಾರ ತುರ್ತು ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿ ಹಲವು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...