Homeಕರ್ನಾಟಕಶ್ರೀರಾಮಚಂದ್ರ ಯಾರೊಬ್ಬರ ಸ್ವತ್ತಲ್ಲ; ಬಿಜೆಪಿಯವರು ಭ್ರಮೆಯಲ್ಲಿದ್ದಾರೆ: ಕಾಂಗ್ರೆಸ್

ಶ್ರೀರಾಮಚಂದ್ರ ಯಾರೊಬ್ಬರ ಸ್ವತ್ತಲ್ಲ; ಬಿಜೆಪಿಯವರು ಭ್ರಮೆಯಲ್ಲಿದ್ದಾರೆ: ಕಾಂಗ್ರೆಸ್

- Advertisement -
- Advertisement -

ಇದೇ 22ಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಜ್ಜಾಗಿದೆ. ಶ್ರೀರಾಮಮಂದಿರ ಟ್ರಸ್ಟ್ ಹಾಗೂ ಬಿಜೆಪಿ ದೇಶದಾದ್ಯಂತ ಭರ್ಜರಿ ಪ್ರಚಾರ ನಡೆಸುತ್ತಿದೆ. ಮಸೀದಿ ಕೆಡವಿ, ಆ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಿದ್ದು, ಸಮಾರಂಭದಲ್ಲಿ ಭಾಗವಹಿಸುವ ಕುರಿತು ಕಾಂಗ್ರೆಸ್ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

‘ಶ್ರೀರಾಮಚಂದ್ರ ಯಾರೊಬ್ಬರ ಸ್ವತ್ತೂ ಅಲ್ಲ. ಆದರೆ ರಾಮನ ಹೆಸರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಬಿಜೆಪಿಯವರು ಶ್ರೀರಾಮ ತಮ್ಮೊಬ್ಬರ ಸ್ವತ್ತು ಎಂಬ ಭ್ರಮೆಯಲ್ಲಿದ್ದಾರೆ. ಈ ಬಗ್ಗೆ ನಮ್ಮ ಅನುಕಂಪವಿದೆ. ಬಿಜೆಪಿಯವರು ರಾಮ ಭಕ್ತರ ವೇಷದಲ್ಲಿರುವ ಸಮಾಜ ಕಂಟಕರು. ಜನವಿರೋಧಿ ಬಿಜೆಪಿಯು ಕಾಂಗ್ರೆಸ್ ಪಕ್ಷವನ್ನು ರಾಮವಿರೋಧಿ ಎಂದು ಬಿಂಬಿಸುವ ದುಷ್ಟ ಯತ್ನದಲ್ಲಿದೆ’ ಎಂದು ಟೀಕಿಸಿದೆ.

‘ಜನವರಿ 22ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಅದೇಶಿಸಿರುವುದು ರಾಜ್ಯ ಬಿಜೆಪಿಗೆ ಸಂತಸ ತರುವ ಬದಲು ಸಂಕಟ ತಂದಿರುವುದು ಅವರ ಧರ್ಮವಿಕೃತಿಗೆ ಸಾಕ್ಷಿ. ಅವರಿಗೆ ಭಕ್ತಿ, ಪೂಜೆ, ಪುನಸ್ಕಾರ, ಸಂಸ್ಕಾರ ಬೇಕಿಲ್ಲ. ಅವರಿಗೆ ಬೇಕಿರುವುದು ಅದರ ಹೆಸರಿನಲ್ಲಿ ರಾಜಕೀಯ. ಅವರದು ಧರ್ಮದ ದಾರಿ ತಪ್ಪಿಸುವ ಹುನ್ನಾರ’ ಎಂದು ಕಿಡಿಕಾರಿದೆ.

‘ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು. ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ. 1985-86 ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ. 1989ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್ ಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ. ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ’ ಎಂದು ಕಾಂಗ್ರೆಸ್ ನೆನಪಿಸಿದೆ.

‘ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ, ರಾಮನ ಹೆಸರೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ ರಾಜ್ಯ ಬಿಜೆಪಿಗೆ ‘ಸನ್ಮತಿ ದೇ ಭಗವಾನ್’ ಎಂದು ಹೇಳಬೇಕಾಗಿ ಬಂದಿರೋದು ದುರಂತ’ ಎಂದು ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ; ಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಿಜೆಪಿಗೆ ಮತ ಹಾಕುವಂತೆ...

0
ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಅಧೀರ್ ರಂಜನ್ ಚೌಧರಿ ಅವರಿ ಬಿಜೆಪಿ ಪರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ " ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷಕ್ಕೆ ಮತ...