ಕೇಂದ್ರದ ಬಿಜೆಪಿ ಸರ್ಕಾರ ಹೆಸರು ಬದಲಾವಣೆ ಮಾಡುವ ರಾಜಕೀಯ ಮುಂದುವರೆಸಿದ್ದು, ಅಂಡಮಾನ್ ನಿಕೋಬಾರ್ ದ್ವೀಪಗಳ ರಾಜಧಾನಿಯಾದ ಪೋರ್ಟ್ ಬ್ಲೇರ್ ಅನ್ನು ಶ್ರೀ ವಿಜಯ ಪುರಂ ಎಂದು ಮರುನಾಮಕರಣ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು “ರಾಷ್ಟ್ರವನ್ನು ವಸಾಹತುಶಾಹಿ ಸಂಕೇತಗಳಿಂದ ಮುಕ್ತಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯನ್ನು ಸಾಕಾರಗೊಳಿಸಲು ಇದನ್ನು ಮಾಡಲಾಗಿದೆ” ಎಂದು ಶುಕ್ರವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಈಸ್ಟ್ ಇಂಡಿಯಾ ಕಂಪನಿಯ ಬ್ರಿಟಿಷ್ ವಸಾಹತುಶಾಹಿ ನೌಕಾಪಡೆಯ ಅಧಿಕಾರಿ ಕ್ಯಾಪ್ಟನ್ ಆರ್ಚಿಬಾಲ್ಡ್ ಬ್ಲೇರ್ ಅವರ ಹೆಸರನ್ನು ಪೋರ್ಟ್ ಬ್ಲೇರ್‌ಗೆ ಇಡಲಾಗಿತ್ತು. ನಮ್ಮ ಸ್ವಾತಂತ್ರ್ಯ ಹೋರಾಟ ಮತ್ತು ಇತಿಹಾಸದಲ್ಲಿ ಶ್ರೀ ವಿಜಯ ಪುರಕ್ಕೆ ಅಪ್ರತಿಮ ಸ್ಥಾನವಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಈ ಹೆಸರು ಸ್ವಾತಂತ್ರ್ಯ ಹೋರಾಟದಲ್ಲಿ ಸಾಧಿಸಿದ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದ್ದಾರೆ.
“ಹಿಂದಿನ ಹೆಸರು ವಸಾಹತುಶಾಹಿ ಪರಂಪರೆಯನ್ನು ಹೊಂದಿದ್ದರೂ, ಶ್ರೀ ವಿಜಯ ಪುರಂ ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಸಾಧಿಸಿದ ವಿಜಯವನ್ನು ಮತ್ತು ಅಂಡಮಾನ್ ನಿಕೋಬಾರ್ ದ್ವೀಪಗಳ ವಿಶಿಷ್ಟ ಪಾತ್ರವನ್ನು ಸಂಕೇತಿಸುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
“ಇದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಂದ ನಮ್ಮ ತಿರಂಗ (ತ್ರಿವರ್ಣ)ವನ್ನು ಮೊದಲ ಬಾರಿಗೆ ಹಾರಿಸಿದ ಸ್ಥಳವಾಗಿದೆ ಮತ್ತು ವೀರ್ ಸಾವರ್ಕರ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರು ಸ್ವತಂತ್ರ ರಾಷ್ಟ್ರಕ್ಕಾಗಿ ಹೋರಾಡಿದ ಸೆಲ್ಯುಲಾರ್ ಜೈಲು ಇರುವ ಸ್ಥಳವಾಗಿದೆ” ಎಂದು ಅವರು ಹೇಳಿದ್ದಾರೆ.
ಇದನ್ನೂಓದಿ: ಇಡಿ ಪ್ರಕರಣದ ಜಾಮೀನು ವಿಫಲಗೊಳಿಸಲು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು: ನ್ಯಾ. ಭುಯಾನ್
“ನಮ್ಮ ಸ್ವಾತಂತ್ರ್ಯ ಹೋರಾಟ ಮತ್ತು ಇತಿಹಾಸದಲ್ಲಿ ಅಂಡಮಾನ್ ನಿಕೋಬಾರ್ ದ್ವೀಪಗಳು ಅಪ್ರತಿಮ ಸ್ಥಾನವನ್ನು ಹೊಂದಿವೆ. ಒಂದು ಕಾಲದಲ್ಲಿ ಚೋಳ ಸಾಮ್ರಾಜ್ಯದ ನೌಕಾ ನೆಲೆಯಾಗಿ ಕಾರ್ಯನಿರ್ವಹಿಸಿದ ದ್ವೀಪ ಪ್ರದೇಶವು ಇಂದು ನಮ್ಮ ಕಾರ್ಯತಂತ್ರ ಮತ್ತು ಅಭಿವೃದ್ಧಿಯ ಮಹತ್ವಾಕಾಂಕ್ಷೆಗಳಿಗೆ ನಿರ್ಣಾಯಕ ನೆಲೆಯಾಗಿದೆ” ಎಂದು ಅಮಿತ್ ಶಾ ಹೇಳಿದ್ದಾರೆ.
2018 ರಲ್ಲಿ, ಪ್ರಧಾನಿ ಮೋದಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವವಾಗಿ ಅಂಡಮಾನ್ ನಿಕೋಬಾರ್ ದ್ವೀಪಸಮೂಹದ ಮೂರು ದ್ವೀಪಗಳ ಮರುನಾಮಕರಣವನ್ನು ಘೋಷಿಸಿದ್ದರು. ಮೂರು ದ್ವೀಪಗಳಾದ ರಾಸ್ ಐಲ್ಯಾಂಡ್, ನೀಲ್ ಐಲ್ಯಾಂಡ್ ಮತ್ತು ಹ್ಯಾವ್ಲಾಕ್ ದ್ವೀಪಗಳನ್ನು ಕ್ರಮವಾಗಿ ನೇತಾಜಿ ಸುಭಾಸ್ ಚಂದ್ರ ಬೋಸ್ ದ್ವೀಪ, ಶಹೀದ್ ದ್ವೀಪ ಮತ್ತು ಸ್ವರಾಜ್ ದ್ವೀಪ ಎಂದು ಮರುನಾಮಕರಣ ಮಾಡಲಾಗಿತ್ತು.
2014 ರಲ್ಲಿ ಅಧಿಕಾರ ವಹಿಸಿಕೊಂಡ ನಂತರ, ನರೇಂದ್ರ ಮೋದಿ ನೇತೃತ್ವದ ಸರ್ಕಾರವು ವಸಾಹತುಶಾಹಿ ಪರಂಪರೆಯನ್ನು ತೊಡೆದುಹಾಕುತ್ತೇನೆ ಎಂದು ಐತಿಹಾಸಿಕ ಮಹತ್ವ ಹೊಂದಿರುವ ಸ್ಥಳಗಳನ್ನು ಮರುನಾಮಕರಣ ಮಾಡುತ್ತಿದೆ.
ವಿಡಿಯೊ ನೋಡಿ: ಕಪ್ಪು ನಮ್ಮ ಗುರುತು, ಕಾಯಕ ನಮ್ಮ ವಿಳಾಸ: ಹಂಸಲೇಖ


