Homeಕರ್ನಾಟಕಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ಮಣಿಕಂಠ ಎಂಬಾತ ಶೃಂಗೇರಿ ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯನಾಗಿದ್ದಾನೆ. ಸಂಪತ್ ಎಂಬಾತ ಸನಾತನ ಸಂಸ್ಥೆಯ ಸದಸ್ಯ ಎನ್ನಲಾಗುತ್ತಿದ್ದು, ಸಂಘಪರಿವಾರದೊಂದಿಗೆ ಗುರುತಿಸಿಕೊಂಡಿರುವ ಪೊಟೊಗಳು ವೈರಲ್ ಆಗುತ್ತಿವೆ.

- Advertisement -
- Advertisement -

ಶೃಂಗೇರಿಯ ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಹೊರಬಂದಿದ್ದು, ಇಡೀ ರಾಜ್ಯವೇ ಈ ವಿಚಾರದಲ್ಲಿ ತಲೆತಗ್ಗಿಸುವಂತಾಗಿದೆ. ಅತ್ಯಾಚಾರ ಆರೋಪದ ಮೇಲೆ ಶೃಂಗೇರಿಯ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಸುಮಾರು 30 ಜನರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದರಲ್ಲಿರುವ ಬಹುಪಾಲು ಆರೋಪಿಗಳು ಭಜರಂಗದಳ, ಸಂಘಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದ 15 ವರ್ಷ ಬಾಲಕಿ ತನ್ನ ತಾಯಿ ನಿಧನರಾದ ನಂತರ ತನ್ನ ಚಿಕ್ಕಮ್ಮನೊಂದಿಗೆ ಇತ್ತೀಚೆಗೆ ಶೃಂಗೇರಿ ತಾಲೂಕಿನ ಕುಂಚೇಬೈಲು ಸಮೀಪದಲ್ಲಿರುವ ಗೋಚುವಳ್ಳಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಅಲ್ಲಿನ ಕೆಲಸಗಾರನೊಬ್ಬ ಬಾಲಕಿಯನ್ನು ಪುಸಲಾಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಆತನ ಸ್ನೇಹಿತರೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯದ ವಿಷಯವನ್ನು ಬಾಯಿ ಬಿಟ್ಟರೆ ಸಾಮಾಜಿಕ ಜಾಲತಾಣಗಳಲ್ಲಿ ಪೊಟೊಗಳನ್ನು ವೈರಲ್ ಮಾಡುವುದಾಗಿ ಬಾಲಕಿಯನ್ನು ಹೆದರಿಸಿದ್ದಾರೆ. ನಂತರ ಈ ಬಾಲಕಿಯ ಮೇಲೆ ಕಳೆದ 1 ವರ್ಷದಿಂದ ನಿರಂತರವಾಗಿ ಅತ್ಯಾಚಾರ ನಡೆಯುತ್ತಲೇ ಬಂದಿದೆ. ಇದನ್ನು ಬಾಲಕಿಯ ಚಿಕ್ಕಮ್ಮ ಗೀತಾ ಎಂಬುವವರು ದಂಧೆಯನ್ನಾಗಿ ಮಾಡಿಕೊಂಡು ಹಣ ಸಂಪಾದಿಸುತ್ತಿದ್ದರು ಎಂದೂ ಸಹ ಹೇಳಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದ ಸ್ಮಾಲ್ ಅಭಿ, ಆನೆಗುಂದ ಗ್ರಾಮದ ರಾಜೇಶ್, ಅಮಿತ್, ಗಿರೀಶ್, ಹೊಳೆಕೊಪ್ಪ ಗ್ರಾಮದ ಮಣಿಕಂಠ, ವಿಕಾಸ್, ನೆಮ್ಮಾರ್ ಸಂಪತ್, ಶೃಂಗೇರಿಯ ನಾರಾಯಣ್ ಗೌಡ, ಅಶ್ವತ್‍ಗೌಡ, ಅಭಿಗೌಡ, ಕುರುಬಗೆರೆ ಸಂತೋಷ್, ಹೆಗ್ಗದ್ದೆಯ ಧೀಕ್ಷಿತ್, ಹೇರೂರಿನ ಸಂತೋಷ್, ಕಿಗ್ಗಾದ ನಿರಂಜನ್, ಬಸ್ ಚಾಲಕ ಖಾಂಡ್ಯ ಯೋಗೀಶ್ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಬಾಲಕಿಯ ಚಿಕ್ಕಮ್ಮ ಗೀತಾಳನ್ನು 16ನೇ ಆರೋಪಿಯನ್ನಾಗಿಸಲಾಗಿದೆ. ಅಲ್ಲದೇ ಬಾಲ ಕಾರ್ಮಿಕರನ್ನು ಕ್ರಷರ್ ನಲ್ಲಿ ಕೆಲಸಕ್ಕೆ ನೇಮಿಸಿಕೊಂಡ ಆರೋಪದಡಿಯಲ್ಲಿ ಕ್ರಷರ್ ಮಾಲಕನ್ನು 17ನೇ ಆರೋಪಿಯನ್ನಾಗಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಬಾಲಕಿಗೆ ಲೈಂಗಿಕ ದೌರ್ಜನ್ಯದ ಕಿರುಕುಳ ನೀಡಿರುವ ಆರೋಪಿಗಳ ಪೈಕಿ ಬಹುತೇಕ ಮಂದಿ ಸಂಘಪರಿವಾರದಲ್ಲಿ ಗುರುತಿಸಿಕೊಂಡವರಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಸ್ಮಾಲ್ (ಸ್ಮಾಲ್ ಸಿಗರೇಟ್ ಸೇದುತ್ತಿದ್ದ) ಅಭಿ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದಾನೆ. ಮಣಿಕಂಠ ಎಂಬಾತ ಶೃಂಗೇರಿ ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯನಾಗಿದ್ದಾನೆ. ಇನ್ನು ವಿಕಾಸ್ ಎಂಬಾತ ಬಿಜೆಪಿ ಪಕ್ಷದ ಜಿ.ಪಂ ಸದಸ್ಯರೊಬ್ಬರ ಹತ್ತಿರದ ಸಂಬಂಧಿ ಎನ್ನಲಾಗುತ್ತಿದೆ. ಸಂಪತ್ ಎಂಬಾತ ಸನಾತನ ಸಂಸ್ಥೆಯ ಸದಸ್ಯ ಎನ್ನಲಾಗುತ್ತಿದ್ದು, ಇವರು ಸಂಘಪರಿವಾರದೊಂದಿಗೆ ಗುರುತಿಸಿಕೊಂಡಿರುವ ಪೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಸಂಪತ್ ಗಿಣಿಕಲ್ (ಬಜರಂಗದಳ ಕಾರ್ಯಕರ್ತ)

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯನ್ನು ರಕ್ಷಿಸಿರುವ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಎಂಬವವರು ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದು, “ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಬಾಲಕಿಯ ಚಿಕ್ಕಮ್ಮ ಮತ್ತು ಕ್ರಷರ್‌ನ ಮಾಲಿಕ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಬಂಧಿಸಲು ತನಿಖೆ ನಡೆಸುತ್ತಿದ್ದೇವೆ ಎಂದು ಶೃಂಗೇರಿ ಪೊಲೀಸ್ ಠಾಣೆಯ ಎಸ್‌ಐ ಪ್ರಮೋದ್ ಕುಮಾರ್ ನಾನುಗೌರಿ.ಕಾಂ ಗೆ ತಿಳಿಸಿದರು.

ಸ್ಮಾಲ್ ಅಭಿ

ಇದನ್ನೂ ಓದಿ: ರೈತ ಹೋರಾಟಕ್ಕೆ ಅಮೆರಿಕದ ಚುನಾಯಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಬೆಂಬಲಿಸಿದ್ದು ನಿಜವೆ?

ಕ್ರಷರ್ ನಲ್ಲಿ ಬಾಲ ಕಾರ್ಮಿಕರಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ಬಗ್ಗೆ ಬಂದ ದೂರಿನ ಮೇರೆಗೆ ಪರಿಶೀಲನೆ ನಡೆಸಿದಾಗ ದೌರ್ಜನ್ಯಕ್ಕೊಳಗಾದ ಬಾಲಕಿಯನ್ನು ಗೋಚವಳ್ಳಿಯ ಕ್ರಷರ್ ನಿಂದ ರಕ್ಷಣೆ ಮಾಡಲಾಗಿದೆ. ನಂತರ ಕೌನ್ಸಲಿಂಗ್ ವೇಳೆ ತನ್ನ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ಹೇಳಿಕೆ ನೀಡಿದ್ದಾಳೆ. ದೌರ್ಜನ್ಯ ಎಸಗಿದ ಸ್ಥಳೀಯ 15 ಮಂದಿಯ ಹೆಸರನ್ನು ಬಾಲಕಿ ಹೇಳಿಕೆಯಲ್ಲಿ ತಿಳಿಸಿದ್ದು, ಕಿಡಿಗೇಡಿಗಳ ಕೃತ್ಯಕ್ಕೆ ತನ್ನ ಚಿಕ್ಕಮ್ಮ ಗೀತಾ ಎಂಬಾಕೆಯೂ ಸಹಕಾರ ನೀಡಿದ್ದಾಳೆಂದು ಬಾಲಕಿ ಹೇಳಿಕೆ ನೀಡಿದ್ದಾಳೆ.

ಗಿರೀಶ್

ಕ್ರಷರ್‌ನಿಂದ ಬಾಲಕಿಯನ್ನು ರಕ್ಷಣೆ ಮಾಡಿರುವ ಮಕ್ಕಳ ಕಲ್ಯಾಣ ಸಮಿತಿ ಆಕೆಯನ್ನು ಸದ್ಯ ಸ್ವಾಧಾರ್ ಕೇಂದ್ರದಲ್ಲಿ ಇರಿಸಿದ್ದು, ಆಕೆಯ ಹೇಳಿಕೆ ಮೇರೆಗೆ ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳು ತಮ್ಮ ಪ್ರಭಾವ ಬಳಸಿ ಪಾರಾಗುವ ಸಾಧ್ಯತೆ ಇದ್ದು, ಪೊಲೀಸರು ಈ ಸಂಬಂಧ ಅಗತ್ಯ ಕ್ರಮವಹಿಸಬೇಕೆಂದು ಅಲ್ಲಿನ ಸ್ಥಳೀಯರೊಬ್ಬರು ಮಾಹಿತಿ ನೀಡಿದರು.

ಬಾಲಕಿಯ ಹಿನ್ನೆಲೆ:

ಬಾಲಕಿ 7ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದು, ಆಗಲೇ ಈಕೆಯ ತಾಯಿ ನಿಧನರಾಗಿದ್ದರು. ನಂತರ ಬಾಲಕಿಯ ತಂದೆ ಮತ್ತೊಂದು ಮದುವೆಯಾಗಿ ಹಾವೇರಿಯಲ್ಲಿ ವಾಸವಿದ್ದಾನೆ. ಬಾಲಕಿ ತನ್ನ ತಾಯಿಯ ತಮ್ಮನ ಮನೆಯಲ್ಲಿ ಓದುತ್ತಿದ್ದಳು. ಲಾಕ್‍ಡೌನ್ ಸಂದರ್ಭದಲ್ಲಿ ಶೃಂಗೇರಿಯ ಚಿಕ್ಕಮ್ಮನ ಮನೆಗೆ ಬಂದಿದ್ದು, ಬಾಲಕಿ ಚಿಕ್ಕಮ್ಮ ಮನೆಯ ಸಮೀಪದಲ್ಲೇ ಇದ್ದ ಕ್ರಷರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಚಿಕ್ಕಮ್ಮನಿಗೆ ಆರೋಗ್ಯ ಸರಿಯಿಲ್ಲದ ಸಂದರ್ಭದಲ್ಲಿ ಬಾಲಕಿ ಕ್ರಷರ್‌ನಲ್ಲಿ ಕೆಲಸಕ್ಕೆ ಹೋಗಿದ್ದಾಳೆ. ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಆಕೆಯನ್ನು ಮರುಳು ಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ನಂತರ ತನ್ನ ಸ್ನೇಹಿತರೊಂದಿಗೂ ಲೈಂಗಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ್ದಾನೆ.

ಮಣಿಕಂಠ ಹೊಳೆಕೊಪ್ಪ (ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷ)

ಆರೋಪಿ ಗೀತಾಳ ಹಿನ್ನೆಲೆ:

ಈಕೆ ಬ್ರಾಹ್ಮಣ ಕುಟುಂಬಕ್ಕೆ ಸೇರಿದವಳಾಗಿದ್ದು, ಮೂಲತಃ ಹಾವೇರಿ ಜಿಲ್ಲೆಯವಳು. ಶೃಂಗೇರಿಯಲ್ಲಿ ಬ್ರಾಹ್ಮಣ ಯುವಕರಿಗೆ ಹೆಣ್ಣು ಸಿಗದ ಕಾರಣಕ್ಕೆ ಈಕೆಯನ್ನು ಸುರೇಶ್ ಎಂಬುವವರು ಮದುವೆಯಾಗಿ ಶೃಂಗೇರಿಗೆ ಕರೆದುಕೊಂಡುಬಂದಿದ್ದರು. ಇಲ್ಲಿ ಈಕೆ ಮೊದಲಿನಿಂದಲೂ ಇಂತಹ ದಂಧೆಯಲ್ಲಿ ತೊಡಗಿದ್ದಳು. ನಂತರ ತನ್ನ ಅಕ್ಕನ ಮಗಳನ್ನು ಹಾವೇರಿಯಿಂದ ಕರೆದುಕಂಡು ಬಂದು ಆಕೆಯನ್ನೂ ಇದೇ ದಂಧೆಗೆ ಬಳಸಿಕೊಂಡು ಹಣ ಸಂಪಾದಿಸುತ್ತಿದ್ದಳು. ಇದನ್ನು ಸಹಿಸದ ಸುರೇಶ್ ವಿಚ್ಚೇದನ ಪಡೆಯಲು ನಿರ್ಧರಿಸಿದ. ಆದರೆ ಕಾನೂನು ಪ್ರಕಾರ ಗಂಡನೇ ವಿಚ್ಚೇದನ ನೀಡಿದರೆ ಜೀವನಾಂಶ ಕೊಡಬೆಕಾಗುತ್ತದೆ. ಆದರೆ ಆತನ ಬಳಿ ಅಷ್ಟು ಹಣ ಇಲ್ಲವಾದ್ದರಿಂದ ಗ್ರಾಮಸ್ಥರ ಸಹಕಾರದೊಟ್ಟಿಗೆ ಸೇರಿ, ಈ ದಂಧೆಯನ್ನ ಕಾರಣವಾಗಿಟ್ಟುಕೊಂಡು ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಈ ದೂರನ್ನು ತೆಗೆದುಕೊಂಡಿರಲಿಲ್ಲ . ನಂತರ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಂದ ಆದೇಶ ಬಂದ ನಂತರ ತನಿಖೆ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಗ್ರಾಮಸ್ಥರೊಬ್ಬರು ಹೇಳಿದರು.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಎಫ್‌ಐಆರ್ ದಾಖಲಾಗಿರುವ ಆರೋಪಿಗಳು ಮತ್ತು ಅವರ ಹಿನ್ನೆಲೆ:

ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಜೊತೆ ಆರೋಪಿ ವಿಕಾಸ್

ಇನ್ನೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಶೇಖಡ 90 ರಷ್ಟು ಆರೋಪಿಗಳು ಬಿಜೆಪಿ ಮತ್ತು ಸಂಘಪರಿವಾರದವರೆಂದು ಗ್ರಾಮಸ್ಥರು ಖಚಿತಪಡಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...