Homeಕರ್ನಾಟಕದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ

ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ

ಆಡಳಿತ ವಿರೋಧಿ ಅಲೆ ಸೃಷ್ಟಿಯಾಗುತ್ತಿದೆ; ಬಿಜೆಪಿಯಲ್ಲಿ ನನ್ನನ್ನು ನಿರ್ಲಕ್ಷಿಸಲಾಗಿದೆ - ಶ್ರೀನಿವಾಸ್ ಪ್ರಸಾದ್

- Advertisement -
- Advertisement -

“ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗುತ್ತಿದೆ” ಎಂದು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, “ಪಕ್ಷಕ್ಕಾಗಿ ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ? ತಮ್ಮ ಮನೆ ಬೆಳೆಸಿಕೊಳ್ಳೋದೇ ಆಯ್ತು. ತಮ್ಮ ಅವಧಿ ಮುಗಿಯಿತು ಎಂದು ತಪ್ಪು ಮಾಡಬಾರದು” ಎಂದು ಯಡಿಯೂರಪ್ಪ ಹೆಸರು ಪ್ರಸ್ತಾಪಿಸದೇ ಕಿಡಿಕಾರಿದ್ದಾರೆ.

“ಆಡಳಿತದ ಬಗ್ಗೆ ನಮಗೆ ತೃಪ್ತಿ ಇರಬಹುದು. ಆದರೆ, ಜನರಲ್ಲಿ ಅತೃಪ್ತಿ ಇದೆ. ಅವರಲ್ಲಿ ಹತಾಶೆ, ನಿರಾಸೆ ಮೂಡಿದೆ. ಇದು ನನ್ನ ಅನುಭವಕ್ಕೂ ಬರುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಇದು ಜನರಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಲು ಕಾರಣವಾಗುತ್ತಿದೆ ಎಂಬ ವಿವೇಚನೆ ನಮ್ಮ ರಾಜ್ಯದ ಯಾವೊಬ್ಬ ನಾಯಕರಿಗೂ ಇಲ್ಲವಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

ಚುನಾವಣೆಗೆ ಇನ್ನೂ ಸಮಯವಿದೆ ಎಂದುಕೊಂಡು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಕಣ್ಮುಚ್ಚಿ ಕುಳಿತಿದ್ದರೆ, ಅಧಿಕಾರದ ಅಮಲನ್ನು ತಲೆಗೇರಿಸಿಕೊಂಡರೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಶ್ರೀನಿವಾಸ ಪ್ರಸಾದ್‌ ಎಚ್ಚರಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್‌ ವಿರುದ್ಧ ವೇದಿಕೆಯಲ್ಲೇ ಹರಿಹಾಯ್ದ ಶ್ರೀನಿವಾಸ್ ಪ್ರಸಾದ್, “ನಾನು ಬಿಜೆಪಿಯ ಸಕ್ರಿಯ ಕಾರ್ಯಕರ್ತ. ಕಾಂಗ್ರೆಸ್‌ನಲ್ಲಿದ್ದಾಗ ಕೆಪಿಸಿಸಿ ಅಧ್ಯಕ್ಷ ಆಗಲಿಲ್ಲ ಎಂಬುದೊಂದನ್ನು ಹೊರತುಪಡಿಸಿದರೆ ಇನ್ನುಳಿದ ಎಲ್ಲ ಜವಾಬ್ದಾರಿ ನಿಭಾಯಿಸಿ ಪಕ್ಷ ಸಂಘಟಿಸಿದವನು. ಇದುವರೆಗೆ, ನನ್ನನ್ನು ಒಂದೇ ಒಂದು ರಾಜ್ಯ ಕಾರ್ಯಕಾರಿಣಿಗೆ ಆಹ್ವಾನಿಸಿದ್ದೀರಾ? ನನ್ನ ಸಲಹೆ ಪಡೆದಿದ್ದೀರಾ?” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬಿಜೆಪಿ ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದಿರುವುದನ್ನು ಒಪ್ಪಿಕೊಳ್ಳಬೇಕು. ಮತದಾರರು ಪ್ರಜ್ಞಾವಂತರಿದ್ದಾರೆ. ತಿದ್ದಿಕೊಳ್ಳದಿದ್ದರೆ ಜನರು ತಕ್ಕ ಪಾಠ ಕಲಿಸುತ್ತಾರೆ” ವಿ.ಶ್ರೀನಿವಾಸ ಪ್ರಸಾದ್‌ ಹೇಳಿದ್ದಾರೆ.

ನಂತರ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, “ಶ್ರೀನಿವಾಸ ಪ್ರಸಾದ್‌ ಬಿಜೆಪಿಯ ಸೌಭಾಗ್ಯ. ಅವರ ಭಾವನೆಗಳನ್ನು ವರಿಷ್ಠರ ಗಮನಕ್ಕೆ ತರುವೆ” ಎಂದು ಸಮಾಧಾನಪಡಿಸಿದರು.


ಇದನ್ನೂ ಓದಿ: ತಮಿಳುನಾಡು: ದಿ. ಕರುಣಾನಿಧಿ ಮೊಮ್ಮಗ ಉದಯನಿಧಿ ವಿರುದ್ಧ ಸ್ಪರ್ಧಿಸಲಿದ್ದಾರಾ ನಟಿ ಖುಷ್ಬೂ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...