Homeಮುಖಪುಟಶ್ರೀರಂಗಪಟ್ಟಣ: ಫೋಟೋಗೆ ಪೋಸ್ ನೀಡುತ್ತಿದ್ದಾಗಲೇ ಕಾವೇರಿ ನದಿಗೆ ಬಿದ್ದ ವ್ಯಕ್ತಿಗಾಗಿ ಹುಡುಕಾಟ

ಶ್ರೀರಂಗಪಟ್ಟಣ: ಫೋಟೋಗೆ ಪೋಸ್ ನೀಡುತ್ತಿದ್ದಾಗಲೇ ಕಾವೇರಿ ನದಿಗೆ ಬಿದ್ದ ವ್ಯಕ್ತಿಗಾಗಿ ಹುಡುಕಾಟ

- Advertisement -
- Advertisement -

ಫೋಟೋಗೆ ಪೋಸ್ ನೀಡಲು ಹೋದಾಗ 36 ವರ್ಷದ ವ್ಯಕ್ತಿಯೊಬ್ಬರು ನೀರು ಪಾಲಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಶ್ರೀರಂಗಪಟ್ಟಣದ ಸರ್ವ ಧರ್ಮ ಆಶ್ರಮದ ಬಳಿಯ ಕೃಷ್ಣ ರಾಜ ಸಾಗರ (ಕೆಆರ್‌ಎಸ್) ಪ್ರದೇಶದ ಬಳಿ ಸ್ನೇಹಿತರೊಂದಿಗೆ ಪಿಕ್ನಿಕ್‌ಗೆ ಬಂದಿದ್ದ ಆಟೋ ಚಾಲಕ ಮೈಸೂರಿನ ಮಹೇಶ್ ಎಂದು ಗುರುತಿಸಲಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಫೋಟೋಗೆ ಪೋಸ್ ನೀಡುತ್ತಿದ್ದಾಗ ಮಹೇಶ್ ಕಾಲುಜಾರಿ ನದಿಗೆ ಬಿದ್ದಿದ್ದಾರೆ. ನೀರಿನ ಮಟ್ಟ ಹೆಚ್ಚಾಗಿದ್ದು, ರಬಸ ಜೋರಾಗಿರುವುದರಿಂದ ಅವರು ವೇಗವಾಗಿ ಕೊಚ್ಚಿಕೊಂಡು ಹೋಗಿದ್ದಾರೆ.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸೇರಿದಂತೆ ರಕ್ಷಣಾ ತಂಡಗಳು ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿವೆ. ಘಟನೆಯನ್ನು ಕೆಆರ್‌ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಿಸಲಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ನಡೆದ ಮತ್ತೊಂದು ಘಟನೆಯಲ್ಲಿ, ಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಕಾಲುವೆಯ ಸೇತುವೆಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೋಟಾರ್ ಸೈಕಲ್ ಸವಾರಿ ಮಾಡುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

ಪೊಲೀಸರ ಪ್ರಕಾರ, ಮಧ್ಯಾಹ್ನ 2.30 ರ ಸುಮಾರಿಗೆ ಸೇತುವೆ ದಾಟುವಾಗ ಸವಾರನ ನಿಯಂತ್ರಣ ತಪ್ಪಿ ಡಿಬೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಇಬ್ಬರೂ ಕಾಲುವೆಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಮೃತರ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ; ಯುವಕನ ಬಟ್ಟೆ ಕಳಚಿ ರಾಡ್‌ನಿಂದ ಥಳಿಸಿದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು...

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು...

ದೆಹಲಿ ಗಾಳಿಯನ್ನು ‘ಗ್ಯಾಸ್ ಚೇಂಬರ್’ಗೆ ಹೋಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ದೆಹಲಿಯ ವಾಯು ಮಾಲಿನ್ಯವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ "ಗ್ಯಾಸ್ ಚೇಂಬರ್" ಗೆ ಹೋಲಿಸಿದ್ದಾರೆ. ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಮುಂದುವರಿದಿದ್ದು ಉತ್ತರ ಪ್ರದೇಶದ ಜನರು ಸ್ವಚ್ಛ ವಾತಾವರಣದಲ್ಲಿ ವಾಸಿಸುವ ಅದೃಷ್ಟಶಾಲಿಗಳಾಗಿದ್ದಾರೆ...

‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ

ಬಡ ಬನ್ ವ್ಯಾಪಾರಿಯೊಬ್ಬರಿಗೆ ಯೂಟ್ಯೂಬ್ ಚಾನೆಲ್ ತಂಡದ ಹೆಸರಿನಲ್ಲಿ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಪ್ರಮುಖ ಬುಡಕಟ್ಟು ಹಬ್ಬವಾದ ಸಮಕ್ಕ ಸಾರಲಮ್ಮ ಜಾತ್ರೆಯಲ್ಲಿ ಕೋವಾ...

‘ಫಾರ್ಮ್ 7’ ಮೂಲಕ ಮುಸ್ಲಿಂ ಮತಗಳನ್ನು ಸಾಮೂಹಿಕವಾಗಿ ತೆಗೆದುಹಾಕಲು ಬಿಜೆಪಿ-ಅಧಿಕಾರಿಗಳು ಸಂಚು ರೂಪಿಸಿದ್ದಾರೆ: ಮುಸ್ಲಿಂ ಲೀಗ್ ಆರೋಪ

ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಏಳು ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್ 7 ಅರ್ಜಿಗಳನ್ನು ನೀಡಿದ್ದು, "ಕಾಸರಗೋಡು ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಜೊತೆ ಸಹಕರಿಸಿದ ಅಧಿಕಾರಿಗಳು,...

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...

ಚುನಾವಣಾ ಟ್ರಸ್ಟ್‌ಗಳಿಂದ ರೂ. 3,157.6 ಕೋಟಿ ಪಡೆದ ಬಿಜೆಪಿ: ಎಡಿಆರ್‌

2024–25ರ ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳು ವಿತರಿಸಿದ ರೂ. 3,826.3 ಕೋಟಿಗಳಲ್ಲಿ ಭಾರತೀಯ ಜನತಾ ಪಕ್ಷವು ಶೇ. 82 ಕ್ಕಿಂತ ಹೆಚ್ಚು ಹಣವನ್ನು ಪಡೆದುಕೊಂಡಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...