Homeಕರ್ನಾಟಕಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಸೋಮವಾರ ಪ್ರಕಟ: ಸಚಿವ ಸುರೇಶ್‌ ಕುಮಾರ್

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಸೋಮವಾರ ಪ್ರಕಟ: ಸಚಿವ ಸುರೇಶ್‌ ಕುಮಾರ್

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾಗಿ ಮುಂದೂಡಲ್ಪಟ್ಟ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಶಾಲಾ ಕಾಲೇಜುಗಳಿಗೆ ಕೂಡಾ ರಜೆ ನೀಡಲಾಗಿತ್ತು. ಅಲ್ಲದೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೂ ಮುಂದೂಡಲಾಗಿತ್ತು. ಆದರೆ, ಈ ಕುರಿತು ಶಿಕ್ಷಣ ಇಲಾಖೆಯಲ್ಲಿ ಸೋಮವಾರ ಚರ್ಚೆ ನಡೆಯಲಿದೆ. ಈ ಚರ್ಚೆಯ ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಇಂಗ್ಲೀಷ್‌ ಪತ್ರಿಕೆ ಪರೀಕ್ಷೆ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ ಬೆನ್ನಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಾಹಿತಿ ನೀಡಿರುವ ಸಚಿವ ಸುರೇಶ್‌ ಕುಮಾರ್‌, “10ನೇ ತರಗತಿ ಪರೀಕ್ಷೆಗಳನ್ನು ಶೀಘ್ರದಲ್ಲಿ ನಡೆಸುವ ಸಲುವಾಗಿ ಶಿಕ್ಷಣ ಇಲಾಖೆಯಲ್ಲಿ ಚರ್ಚೆಗಳು ನಡೆಯುತ್ತಿವೆ. ಸೋಮವಾರ ಈ ಕುರಿತು ಮಹತ್ವದ ಚರ್ಚೆ ನಡೆಯಲಿದ್ದು, ಆನಂತರ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ” ಎಂದಿದ್ದಾರೆ.

“ಪರೀಕ್ಷೆ ನಡೆಸುವ ವೇಳೆ ಮಕ್ಕಳ ಹಿತವನ್ನೂ ಸಹ ಕಾಪಾಡಬೇಕಾಗುತ್ತದೆ. ಹೀಗಾಗಿ ಮಕ್ಕಳಿಗೆ ತಮ್ಮ ಮನೆ ಪಕ್ಕದಲ್ಲೇ ಇರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಶಾಲೆಗಳ ಆರಂಭದ ಬಗ್ಗೆಯೂ ಮಾತನಾಡಿರುವ ಅವರು, “ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬಹುದು, ಎಷ್ಟು ಶೈಕ್ಷಣಿಕ ದಿನಗಳು ಕಡಿಮೆ ಆಗುತ್ತದೆ ಎಂಬ ಬಗ್ಗೆ ಶಿಕ್ಷಣ ಇಲಾಖೆ ಅಧ್ಯಯನ ಮಾಡುತ್ತಿದೆ.” ಎಂದರು.

‘ಅಲ್ಲದೆ, ತರಗತಿಗಳನ್ನು ಶಿಫ್ಟ್ ನಲ್ಲಿ‌ ನಡೆಸಬೇಕಾ ಅಥವಾ ಪರ್ಯಾಯ ವ್ಯವಸ್ಥೆ ‌ಮಾಡಬೇಕಾ? ಎಂಬ ಚರ್ಚೆಯೂ ನಡೆಯುತ್ತಿದೆ. ಸೋಮವಾರದ ವೇಳೆಗೆ ಈ ಬಗ್ಗೆ ಒಂದು ಸ್ಪಷ್ಟ ಚಿತ್ರಣ ಸಿಗಲಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಕೂಡಾ ಬಂದಿರುತ್ತದೆ.” ಎಂದು ಸಚಿವರು ಹೇಳಿದರು.

ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಗಳನ್ನು ಯಾವಾಗ ಆರಂಭ ಮಾಡಬೇಕು ಎಂಬ ಚರ್ಚೆಯೂ ನಡೆಯುತ್ತಿದೆ. ಆದರೆ, ಈ ಹಿಂದೆ ಇದ್ದ ರೀತಿ ಜೂನ್ 1 ಕ್ಕೆ ಶಾಲೆ ಪುನಾರಂಭ ಸಾಧ್ಯತೆ ಕಡಿಮೆ ಎಂದಿರುವ ಸಚಿವರು, ಈ ವರ್ಷ ಯಾವುದೇ ಶಾಲೆಗಳು ಶುಲ್ಕದಲ್ಲಿ ಹೆಚ್ಚಳ ಮಾಡದಂತೆ ಸೂಚಿಸಿದ್ದೇವೆ, ಸಾಧ್ಯವಾದರೆ ಕಡಿಮೆ ಮಾಡಿ ಎಂದೂ ಹೇಳಿದ್ದೇವೆ ಎಂದಿದ್ದಾರೆ.

“ಎಲ್ ಕೆಜಿ, ಯುಕೆಜಿ ಮಕ್ಕಳಿಗೂ ಆನ್ ಲೈನ್ ಟೀಚಿಂಗ್ ಹಾಸ್ಯಾಸ್ಪದ ಸಂಗತಿ” ಎಂದು ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.


ಓದಿ: ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿರುವ ಜಿಲ್ಲೆಯಲ್ಲೆ ಪರೀಕ್ಷೆ ಬರೆಯಲು ಅವಕಾಶ


ಓದಿ: ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷಾ ದಿನಾಂಕ ಘೋಷಿಸಿದ ಸಚಿವ ಸುರೇಶ್ ಕುಮಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...