Homeಕರ್ನಾಟಕನಾಳೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟ

ನಾಳೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟ

- Advertisement -
- Advertisement -

2022–23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಸೋಮವಾರ ಮೇ, 8) ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಣೆ ಹೊರಡಿಸಿದ್ದು, ”ಮಾರ್ಚ್ 2023ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ: 31/03/2023 ರಿಂದ 15/04/2023ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 08/05/2023 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು http://karresults.nic.in ಜಾಲತಾಣದಲ್ಲಿ ದಿನಾಂಕ: 08/05/2023 ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ” ಎಂದು ತಿಳಿಸಲಾಗಿದೆ.

ಸೋಮವಾರ ಮಧ್ಯಾಹ್ನ ಆಯಾ ಶಾಲೆಗಳಲ್ಲಿಯೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ನಂಬರ್‌ಗಳಿಗೆ ಎಸ್‌ಎಂಎಸ್‌ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಮಾರ್ಚ್‌ 31ರಿಂದ ಏ.15ರವರೆಗೆ 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಲಾಗಿತ್ತು. 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ಸೋಮವಾರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...