ಕೊರೊನಾ ಕಾರಣಗಳಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಪಡಿಸಿದಂತೆ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳನ್ನು ರದ್ದುಪಡಿಸಬೇಕು ಎಂಬ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಪರೀಕ್ಷೆ ನಡೆಸಬೇಕೆಂಬ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.
2020-21ರ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ ಜುಲೈ 19 ಮತ್ತು 22ಕ್ಕೆ ನಡೆಯಲಿದೆ. ಜುಲೈ 19 ರಂದು ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ.
ಕೊರೊನಾ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಎಸ್‌ವಿ ಸಿಂಗ್ರೇ ಗೌಡ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಹಂಚಾಟೆ ಸಂಜೀವ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ.
ಇದನ್ನೂ ಓದಿ: SSLC ಪರೀಕ್ಷೆಗಳು: ವೇಳಾಪಟ್ಟಿಯಲ್ಲಿ ಬದಲಾವಣೆಯಿಲ್ಲ ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್
ಜುಲೈ 19 ಮತ್ತು 22ಕ್ಕೆ ಪರೀಕ್ಷೆಗಳು ನಡೆಯಲಿದ್ದು, ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಜ್ಯದ ಪರ ಹಾಜರಾದ ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ.
’ವಿದ್ಯಾರ್ಥಿಗಳು, ಶಿಕ್ಷಕರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಆರೋಗ್ಯ ಇಲಾಖೆ SOP ಯನ್ನು ಸುತ್ತೋಲೆ ರೂಪದಲ್ಲಿ ನೀಡಿ, ಪರೀಕ್ಷೆಯನ್ನು ನಡೆಸಲು ಸರ್ಕಾರ ಕಾಳಜಿ ವಹಿಸಿದೆ. ಅರ್ಜಿಯಲ್ಲಿ ನಮಗೆ ಯಾವ ಗಮನಾರ್ಹ ಅಂಶಗಳು ಕಂಡುಬಂದಿಲ್ಲ’ ಎಂದು ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ‘ಪುನರಾವರ್ತಿತ’ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್!



W5ucruxtuyrujd7gggggd