Homeಕರೋನಾ ತಲ್ಲಣSSLC ಪರೀಕ್ಷೆ: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಒಪ್ಪಿಗೆ

SSLC ಪರೀಕ್ಷೆ: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಒಪ್ಪಿಗೆ

- Advertisement -
- Advertisement -

ಕೊರೊನಾ ಕಾರಣಗಳಿಂದ  ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಪಡಿಸಿದಂತೆ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳನ್ನು ರದ್ದುಪಡಿಸಬೇಕು ಎಂಬ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಪರೀಕ್ಷೆ ನಡೆಸಬೇಕೆಂಬ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

2020-21ರ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ ಜುಲೈ 19 ಮತ್ತು 22ಕ್ಕೆ ನಡೆಯಲಿದೆ. ಜುಲೈ 19 ರಂದು ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ.

ಕೊರೊನಾ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಎಸ್‌ವಿ ಸಿಂಗ್ರೇ ಗೌಡ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಹಂಚಾಟೆ ಸಂಜೀವ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ.

ಇದನ್ನೂ ಓದಿ: SSLC ಪರೀಕ್ಷೆಗಳು: ವೇಳಾಪಟ್ಟಿಯಲ್ಲಿ ಬದಲಾವಣೆಯಿಲ್ಲ ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಜುಲೈ 19 ಮತ್ತು 22ಕ್ಕೆ ಪರೀಕ್ಷೆಗಳು ನಡೆಯಲಿದ್ದು, ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಜ್ಯದ ಪರ ಹಾಜರಾದ ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ.

’ವಿದ್ಯಾರ್ಥಿಗಳು, ಶಿಕ್ಷಕರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಆರೋಗ್ಯ ಇಲಾಖೆ SOP ಯನ್ನು ಸುತ್ತೋಲೆ ರೂಪದಲ್ಲಿ ನೀಡಿ, ಪರೀಕ್ಷೆಯನ್ನು ನಡೆಸಲು ಸರ್ಕಾರ ಕಾಳಜಿ ವಹಿಸಿದೆ. ಅರ್ಜಿಯಲ್ಲಿ ನಮಗೆ ಯಾವ ಗಮನಾರ್ಹ ಅಂಶಗಳು ಕಂಡುಬಂದಿಲ್ಲ’ ಎಂದು ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಆಶಾ ಕಾರ್ಯಕರ್ತೆಯರು ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನು ನೇಮಿಸಲಾಗುವುದು. ಒಂದು ಕೊಠಡಿಯಲ್ಲಿ ಕೇವಲ 12 ಬೆಂಚುಗಳಿಗೆ ಮಾತ್ರ ಅವಕಾಶವನ್ನು ನೀಡಲಾಗಿದ್ದು ಪ್ರತಿ ಬೆಂಚ್‌ಗೆ ಒಬ್ಬ ವಿದ್ಯಾರ್ಥಿಗೆ ಮಾತ್ರ ಅವಕಾಶ ನೀಡಲಾಗುವುದು. ಕೊರೊನಾ ಸೋಂಕಿತ ವಿದ್ಯಾರ್ಥಿಗಳು ಬಯಸಿದರೆ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಈ ಹಿಂದೆ ತಿಳಿಸಿದ್ದರು.
8,76,581 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯನ್ನು ಬರೆಯಲಿದ್ದು 73,066 ಸೆಂಟರ್‌ಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಆರೋಗ್ಯ ಇಲಾಖೆ SOP ಬಿಡುಗಡೆ ಮಾಡಿದ್ದು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳ ಅನುಸಾರವೇ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ದ್ವಿತೀಯ ಪಿಯುಸಿ ‘ಪುನರಾವರ್ತಿತ’ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...