Homeಕರ್ನಾಟಕSSLC Result | ಎಸ್‌ಎಸ್‌ಎಲ್‌ಸಿ ರಿಸಲ್ಟ್‌‌ ಪ್ರಕಟ; ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

SSLC Result | ಎಸ್‌ಎಸ್‌ಎಲ್‌ಸಿ ರಿಸಲ್ಟ್‌‌ ಪ್ರಕಟ; ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

- Advertisement -
- Advertisement -

ಕೊರೊನಾ ನಡುವೆಯು ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಫಲಿತಾಂಶ ಮಧ್ಯಾಹ್ನ 03:30 ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೇಳಿತ್ತು. ಕೊರೊನಾ ಸಾಂಕ್ರಾಮಿಕದ ಹೊರತಾಗಿಯೂ ಈ ವರ್ಷ 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ನಡೆಸಿದ ಕೆಲವೇ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ವಿದ್ಯಾರ್ಥಿಗಳ ರೋಲ್‌ ಅಥವಾ ರಿಜಿಸ್ಟರ್‌‌ ನಂಬರ್‌ ಅನ್ನು ತಯಾರಾಗಿಟ್ಟುಕೊಳ್ಳಿ.
  • ನಂತರ ಇಲ್ಲಿ ಕ್ಲಿಕ್ ಮಾಡಿ.
  • ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್‌ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್‌ ನಂಬರ್‌ ತುಂಬಿಸಬೇಕು.
  • ನಂತರ ಅಲ್ಲಿ ವಿದ್ಯಾರ್ಥಿಗಳ ಜನ್ಮ ದಿನಾಂಕವನ್ನು ಕೊಟ್ಟಿರುವ ಬಾಕ್ಸ್‌ ಒಳಗೆ ತುಂಬಿಸಬೇಕು.
  • ಅದರ ನಂತರ ‘ಸಬ್‌ಮಿಟ್‌‌’ ಬಟನ್‌ಗೆ ಕ್ಲಿಕ್ ಮಾಡಬೇಕು.
  • ಸಬ್‌ಮಿಟ್‌ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.
  • ಅಲ್ಲಿಂದ ನೀವು ಅದನ್ನು ಡೌನ್‌ಲೋಡ್‌ ಮಾಡಿಟ್ಟುಕೊಳ್ಳಬಹುದಾಗಿದೆ.

ಫಲಿತಾಂಶದ ನೇರ ಲಿಂಕ್‌ಗಳನ್ನು ಬೋರ್ಡ್ ವೆಬ್‌ಸೈಟ್‌ಗಳಾದ sslc.karnataka.gov.in ಮತ್ತು karresults.nic.in ನಲ್ಲಿ ಕೂಡಾ ಪಡೆಯಬಹುದಾಗಿದೆ.

ಎರಡು ದಿನಗಳ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು (ಎಂಸಿಕ್ಯೂ) ನೀಡಲಾಗಿತ್ತು. SSLC ಪರೀಕ್ಷೆಯ ಮಾದರಿ ಉತ್ತರಗಳನ್ನು ಬಿಡುಗಡೆ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಅದನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದಾಗಿದೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿಯಾಗಿ ಬರೆದ ಒಬ್ಬ ಅಭ್ಯರ್ಥಿಯನ್ನು ಮಾತ್ರ ಡಿಬಾರ್‌ ಮಾಡಲಾಗಿದೆ. ಫಲಿತಾಂಶ ಮಧ್ಯಾಹ್ನ 03:30 ಕ್ಕೆ ಪ್ರಕಟವಾಗಲಿದೆ ಎಂದು ಮಂಡಳಿ ಹೇಳಿತ್ತಾದರೂ, ಈ ಸಮಯದಲ್ಲಿ ಮಂಡಳಿಯ ವೆಬ್‌ಸೈಟ್‌ ಕ್ಯ್ರಾಶ್‌‌ ಆಗಿ ಫಲಿತಾಂಶ ವೀಕ್ಷಣೆಗೂ ತಡೆಯಾಗಿತ್ತು.

ನೋಂದಾಯಿತ ಒಟ್ಟು ವಿದ್ಯಾರ್ಥಿಗಳಲ್ಲಿ, 99.6% ದಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಕರ್ನಾಟಕದ ಶಾಲಾ ಶಿಕ್ಷಣ ಸಚಿವರು ಇತ್ತೀಚೆಗೆ ಹೇಳಿದ್ದರು.

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿದ್ದ ಸರ್ಕಾರವು ಟೀಕೆಗಳ ಹೊರತಾಗಿಯೂ, ಆಫ್‌ಲೈನ್ ಆಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಿತ್ತು. ದ್ವಿತೀಯ ಪಿಯುಸಿಯ ಫಲಿತಾಂಶಗಳು ಇತ್ತೀಚೆಗಷ್ಟೇ ಪ್ರಕಟವಾಗಿತ್ತು. ಇದೀಗ ಎಸ್‌ಎಸ್‌ಎಲ್‌ಸಿಗೆ ನಡೆದ ಪರೀಕ್ಷೆಯ ಫಲಿತಾಂಶಗಳು ಹೊರ ಬಿದ್ದಿದೆ.

ಇದನ್ನೂ ಓದಿ: ಆನ್‌ಲೈನ್ ಶಿಕ್ಷಣಕ್ಕೆ ಮಾದರಿ ಸೃಷ್ಟಿಸದೆ, ಮೂಲಸೌಕರ್ಯಗಳಿಗೆ ಕ್ರಮ ತೆಗೆದುಕೊಳ್ಳದೆ ಪೋಷಕರನ್ನು ಆತಂಕಕ್ಕೆ ತಳ್ಳಿರುವ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

19 COMMENTS

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...