ಕೊರೊನಾ ಸಾಂಕ್ರಾಮಿಕ ಕಾರಣಕ್ಕೆ ತಡವಾಗಿ ನಡೆದಿದ್ದ SSLC ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ 10 ರ ಸೋಮವಾರ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸೋಮವಾರ ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು kseeb.kar.nic.in ಅಥವಾ karresults.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ಅಲ್ಲದೆ, examresults.net ಮತ್ತು indiaresults.com ವೆಬ್ಸೈಟ್ನಲ್ಲಿಯೂ ಸಹ ಫಲಿತಾಂಶ ವೀಕ್ಷಿಸಬಹುದಾಗಿದೆ.
ಕೊರೊನಾ ಸಾಂಕ್ರಾಮಿಕದ ಭೀತಿಯ ಕಾರಣಕ್ಕಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಬೇಕೊ ಬೇಡವೋ ಎಂಬ ಬಗ್ಗೆ ಹಲವು ಚರ್ಚೆಗಳು ನಡೆದಿದ್ದು, ಅಂತಿಮವಾಗಿ ಸುರಕ್ಷ ನಿಯಮಗಳೊಂದಿಗೆ ಕರ್ನಾಟಕ ರಾಜ್ಯ ಸರ್ಕಾರವು ಜೂನ್ 24 ರಿಂದ ಜುಲೈ 3ರವರೆಗೆ ಪರೀಕ್ಷೆಗಳನ್ನು ನಡೆಸಿತ್ತು. ಸುಮಾರು 8.4 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ.
ಫಲಿತಾಂಶದ ದಿನ ನಾನುಗೌರಿ.ಕಾಂ ನಲ್ಲಿಯೂ ಫಲಿತಾಂಶ ವೀಕ್ಷಿಸಬಹುದಾಗಿದೆ.
ಇದನ್ನೂ ಓದಿ: ಕೂಸು ಹುಟ್ಟೋ ಮುಂಚೆ ಕುಲಾವಿ : ಈ ಕಾಲೇಜುಗಳಲ್ಲಿ SSLC ಪರೀಕ್ಷೆ ಮುನ್ನವೇ PUCಗೆ ದಾಖಲಾತಿ!


