Homeಕರ್ನಾಟಕSSLC Result | ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟನೆಗೆ ದಿನಾಂಕ ನಿಗದಿ

SSLC Result | ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟನೆಗೆ ದಿನಾಂಕ ನಿಗದಿ

- Advertisement -
- Advertisement -

ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ (SSLC Result) ಪ್ರಕಟಿಸಲು ರಾಜ್ಯದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ದವಾಗಿದೆ. ಕಳೆದ ಮಂಗಳವಾರದಂದು ಕೀ ಉತ್ತರಗಳನ್ನು ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿತ್ತು. ಮಂಡಳಿಯು ಫಲಿತಾಂಶವನ್ನು ಮೇ ತಿಂಗಳ ಎರಡನೇ ವಾರದಲ್ಲಿ ಪ್ರಕಟಿಸಲಿದೆ ಎಂದು ವರದಿಯಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಮೇ ಎರಡನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸೋಮವಾರವಷ್ಟೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮುಕ್ತಾಯಗೊಂಡಿದ್ದವು.

ಕೀ ಉತ್ತರಗಳನ್ನು ಪ್ರಕಟಿಸಿದ ನಂತರ ಪರೀಕ್ಷಾ ಮಂಡಳಿಯು ಅದೇ ದಿನದಿಂದ ಆಕ್ಷೇಪಣೆಗಳನ್ನು ಕೂಡಾ ಕೇಳಿತ್ತು. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಆರಂಭವಾಗಲಿದ್ದು, ಮೇ ತಿಂಗಳ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಜೂನ್ ನಾಲ್ಕನೇ ವಾರದಲ್ಲಿ ಪೂರಕ ಪರೀಕ್ಷೆಗಳು ನಡೆಯಲಿದೆ.

ಈ ಬಾರಿ ಸುಮಾರು 25 ಸಾವಿರ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ದುಷ್ಕೃತ್ಯಕ್ಕಾಗಿ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಮೊದಲ ಬಾರಿಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಹಾಜರಾತಿ 98% ಕ್ಕಿಂತ ಹೆಚ್ಚಿದೆ ಎಂದು ಸಚಿವ ನಾಗೇಶ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ವಿದ್ಯಾರ್ಥಿಗಳು ರೋಲ್‌ ನಂಬರ್‌‌ ಅಥವಾ ರಿಜಿಸ್ಟರ್‌‌ ನಂಬರ್‌ ಅನ್ನು ತಯಾರಾಗಿಟ್ಟುಕೊಳ್ಳಿ.
  • ನಂತರ ಇಲ್ಲಿ ಕ್ಲಿಕ್ ಮಾಡಿ.
  • ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್‌ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್‌ ನಂಬರ್‌ ತುಂಬಿಸಬೇಕು.
  • ನಂತರ ಅಲ್ಲಿ ವಿದ್ಯಾರ್ಥಿಗಳ ಜನ್ಮ ದಿನಾಂಕವನ್ನು ಕೊಟ್ಟಿರುವ ಬಾಕ್ಸ್‌ ಒಳಗೆ ತುಂಬಿಸಬೇಕು.
    (ಗಮನಿಸಿ: ಜನ್ಮ ದಿನಾಂಕವು ಅಡ್ಮಿಷನ್ ಟಿಕೆಟ್‌ನಲ್ಲಿ ಇರುವುದನ್ನೇ ತುಂಬಿಸಬೇಕು)
  • ಅದರ ನಂತರ ‘ಸಬ್‌ಮಿಟ್‌‌’ ಬಟನ್‌ಗೆ ಕ್ಲಿಕ್ ಮಾಡಬೇಕು.
  • ಸಬ್‌ಮಿಟ್‌ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.
  • ಅಲ್ಲಿಂದ ನೀವು ಅದನ್ನು ಡೌನ್‌ಲೋಡ್‌ ಮಾಡಿಟ್ಟುಕೊಳ್ಳಬಹುದಾಗಿದೆ.

ಫಲಿತಾಂಶದ ನೇರ ಲಿಂಕ್‌ಗಳನ್ನು ಬೋರ್ಡ್ ವೆಬ್‌ಸೈಟ್‌ಗಳಾದ sslc.karnataka.gov.in ಮೂಲಕ ಕೂಡಾ ಪಡೆಯಬಹುದಾಗಿದೆ.

ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯನ್ನು ಧಾರ್ಮಿಕತೆಯಿಂದ ಹೊರಗಿಡಲು ಸಾಧ್ಯವೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

3 COMMENTS

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ...

0
"ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ"...