Homeಕರ್ನಾಟಕSSLC Result | ಎಸ್ಸೆಸ್ಸೆಲ್ಸಿ ರಿಸಲ್ಟ್‌ ಗುರುವಾರ ಮಧ್ಯಾಹ್ನ ಪ್ರಕಟ | ಫಲಿತಾಂಶ ವೀಕ್ಷಿಸುವ ಸರಳ...

SSLC Result | ಎಸ್ಸೆಸ್ಸೆಲ್ಸಿ ರಿಸಲ್ಟ್‌ ಗುರುವಾರ ಮಧ್ಯಾಹ್ನ ಪ್ರಕಟ | ಫಲಿತಾಂಶ ವೀಕ್ಷಿಸುವ ಸರಳ ದಾರಿ ಇಲ್ಲಿದೆ

- Advertisement -
- Advertisement -

ರಾಜ್ಯದ ಎಸ್‌ಎಸ್‌ಎಲ್‌ಸಿ ( SSLC | ಎಸ್ಸೆಸ್ಸೆಲ್ಸಿ ) ಫಲಿತಾಂಶ ಪ್ರಕಟವಾಗುವ ಸಮಯವನ್ನು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಬುಧವಾರ ಪ್ರಕಟಿಸಿದ್ದಾರೆ. ಗುರುವಾರ ಮಧ್ಯಾಹ್ನ 12:30ಕ್ಕೆ ಪ್ರಕಟಿಸಲಾಗುವುದು ಎಂದು ಅವರು ಟ್ವಿಟರ್‌ನಲ್ಲಿ ಘೋಷಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಬಿ.ಸಿ. ನಾಗೇಶ್‌, “ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಕೂಡಾ ಫಲಿತಾಂಶಗಳನ್ನು ಕಳುಹಿಸಲಾಗುತ್ತದೆ ಎಂದು ಅವರು ಹೇಳಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ವಿದ್ಯಾರ್ಥಿಗಳು ರೋಲ್‌ ನಂಬರ್‌‌ ಅಥವಾ ರಿಜಿಸ್ಟರ್‌‌ ನಂಬರ್‌ ಅನ್ನು ತಯಾರಾಗಿಟ್ಟುಕೊಳ್ಳಿ.
  • ನಂತರ ಇಲ್ಲಿ ಕ್ಲಿಕ್ ಮಾಡಿ.
  • ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್‌ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್‌ ನಂಬರ್‌ ತುಂಬಿಸಬೇಕು.
  • ನಂತರ ಅಲ್ಲಿ ವಿದ್ಯಾರ್ಥಿಗಳ ಜನ್ಮ ದಿನಾಂಕವನ್ನು ಕೊಟ್ಟಿರುವ ಬಾಕ್ಸ್‌ ಒಳಗೆ ತುಂಬಿಸಬೇಕು.
    (ಗಮನಿಸಿ: ಜನ್ಮ ದಿನಾಂಕವು ಅಡ್ಮಿಷನ್ ಟಿಕೆಟ್‌ನಲ್ಲಿ ಇರುವುದನ್ನೇ ತುಂಬಿಸಬೇಕು)
  • ಅದರ ನಂತರ ‘ಸಬ್‌ಮಿಟ್‌‌’ ಬಟನ್‌ಗೆ ಕ್ಲಿಕ್ ಮಾಡಬೇಕು.
  • ಸಬ್‌ಮಿಟ್‌ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.
  • ಅಲ್ಲಿಂದ ನೀವು ಅದನ್ನು ಡೌನ್‌ಲೋಡ್‌ ಮಾಡಿಟ್ಟುಕೊಳ್ಳಬಹುದಾಗಿದೆ.

ಫಲಿತಾಂಶದ ನೇರ ಲಿಂಕ್‌ಗಳನ್ನು ಬೋರ್ಡ್ ವೆಬ್‌ಸೈಟ್‌ಗಳಾದ sslc.karnataka.gov.in ಮೂಲಕ ಕೂಡಾ ಪಡೆಯಬಹುದಾಗಿದೆ.

ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(KSEEB)ಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಆನ್‌ಲೈನ್‌ ಮೂಲಕ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಫಲಿತಾಂಶಗಳನ್ನು ವೀಕ್ಷಿಸಲು ಅವರ ಹಾಲ್ ಟಿಕೆಟ್ ಅಥವಾ ರೋಲ್ ಸಂಖ್ಯೆಯ ಅಗತ್ಯವಿದೆ. ದಯವಿಟ್ಟು ಗಮನಿಸಿ, ಫಲಿತಾಂಶಗಳನ್ನು ಮಧ್ಯಾಹ್ನ 12:30 ಕ್ಕೆ ಪ್ರಕಟಿಸಲಾಗುವುದು ಆದರೆ ಆನ್‌ಲೈನ್‌ನಲ್ಲಿ ಮಧ್ಯಾಹ್ನ 1 ಗಂಟೆಗೆ ಮಾತ್ರ ಲಭ್ಯವಿರುತ್ತದೆ.

ಇದನ್ನೂ ಓದಿ: ವಿಶೇಷ ವರದಿ: ಪಿಎಸ್‌ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!

ನಾಳೆ ಮಧ್ಯಾಹ್ನ ನಾನುಗೌರಿ.ಕಾಂ ಕೂಡಾ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ವೀಕ್ಷಿಸುವ ಸರಳ ಮಾದರಿಯನ್ನು ಲೈವ್‌ ಆಗಿ ಪ್ರಕಟಿಸುತ್ತದೆ. ಎಸ್ಸೆಸ್ಸೆಲ್ಸಿ ಕ್ಷಣಕ್ಷಣದ ಮಾಹಿತಿಗಾಗಿ ನಾನುಗೌರಿ.ಕಾಂನ ಈ ವಾಟ್ಸಪ್‌ ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈ ವರ್ಷ ಸುಮಾರು 8.7 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ. ಹಿಜಾಬ್ ಬಗ್ಗೆ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ನಂತರ ಎಸ್ಸೆಸ್ಸೆಲ್ಸಿ ಪರೀಕ್ಷೆಯು ವಿವಾದಕ್ಕೆ ಒಳಗಾಗಿತ್ತು. ಪರೀಕ್ಷೆ ವೇಳೆ ವಿದ್ಯಾರ್ಥಿಗಳು ತಲೆಗೆ ಬಟ್ಟೆ ಧರಿಸುವುದನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿತ್ತು. ಹಿಜಾಬ್ ಧಾರಣೆಗೆ ಅನುಮತಿ ನೀಡಬೇಡಿ ಎಂದು ಶಿಕ್ಷಕರಿಗೆ ಕೂಡಾ ಸಲಹೆ ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...