Homeಕರ್ನಾಟಕSSLC Result | ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡುವುದು ಹೀಗೆ; ಇಲ್ಲಿ ಕ್ಲಿಕ್ ಮಾಡಿ

SSLC Result | ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡುವುದು ಹೀಗೆ; ಇಲ್ಲಿ ಕ್ಲಿಕ್ ಮಾಡಿ

- Advertisement -
- Advertisement -

ರಾಜ್ಯದ ಎಸ್‌ಎಸ್‌ಎಲ್‌ಸಿ ( SSLC | ಎಸ್ಸೆಸ್ಸೆಲ್ಸಿ ) ಫಲಿತಾಂಶ ಗುರುವಾರ ಮಧ್ಯಾಹ್ನ 12:30ಕ್ಕೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಬುಧವಾರ ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಅವರು, “ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ” ಎಂದು ಅವರು ಹೇಳಿದ್ದರು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಕೂಡಾ ಫಲಿತಾಂಶಗಳನ್ನು ಕಳುಹಿಸಲಾಗುತ್ತದೆ ಎಂದು ಅವರು ಹೇಳಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ವಿದ್ಯಾರ್ಥಿಗಳು ರೋಲ್‌ ನಂಬರ್‌‌ ಅಥವಾ ರಿಜಿಸ್ಟರ್‌‌ ನಂಬರ್‌ ಅನ್ನು ತಯಾರಾಗಿಟ್ಟುಕೊಳ್ಳಿ.
  • ನಂತರ ಇಲ್ಲಿ ಕ್ಲಿಕ್ ಮಾಡಿ.
  • ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್‌ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್‌ ನಂಬರ್‌ ತುಂಬಿಸಬೇಕು.
  • ನಂತರ ಅಲ್ಲಿ ವಿದ್ಯಾರ್ಥಿಗಳ ಜನ್ಮ ದಿನಾಂಕವನ್ನು ಕೊಟ್ಟಿರುವ ಬಾಕ್ಸ್‌ ಒಳಗೆ ತುಂಬಿಸಬೇಕು.
    (ಗಮನಿಸಿ: ಜನ್ಮ ದಿನಾಂಕವು ಅಡ್ಮಿಷನ್ ಟಿಕೆಟ್‌ನಲ್ಲಿ ಇರುವುದನ್ನೇ ತುಂಬಿಸಬೇಕು)
  • ಅದರ ನಂತರ ‘ಸಬ್‌ಮಿಟ್‌‌’ ಬಟನ್‌ಗೆ ಕ್ಲಿಕ್ ಮಾಡಬೇಕು.
  • ಸಬ್‌ಮಿಟ್‌ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.
  • ಅಲ್ಲಿಂದ ನೀವು ಅದನ್ನು ಡೌನ್‌ಲೋಡ್‌ ಮಾಡಿಟ್ಟುಕೊಳ್ಳಬಹುದಾಗಿದೆ.

ಫಲಿತಾಂಶದ ನೇರ ಲಿಂಕ್‌ಗಳನ್ನು ಬೋರ್ಡ್ ವೆಬ್‌ಸೈಟ್‌ಗಳಾದ sslc.karnataka.gov.in ಮೂಲಕ ಕೂಡಾ ಪಡೆಯಬಹುದಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

ಈ ವರ್ಷ ಸುಮಾರು 8.7 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ. ಹಿಜಾಬ್ ಬಗ್ಗೆ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ನಂತರ ಎಸ್ಸೆಸ್ಸೆಲ್ಸಿ ಪರೀಕ್ಷೆಯು ವಿವಾದಕ್ಕೆ ಒಳಗಾಗಿತ್ತು. ಪರೀಕ್ಷೆ ವೇಳೆ ವಿದ್ಯಾರ್ಥಿಗಳು ತಲೆಗೆ ಬಟ್ಟೆ ಧರಿಸುವುದನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿತ್ತು. ಹಿಜಾಬ್ ಧಾರಣೆಗೆ ಅನುಮತಿ ನೀಡಬೇಡಿ ಎಂದು ಶಿಕ್ಷಕರಿಗೆ ಕೂಡಾ ಸಲಹೆ ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...