ಜನವರಿ 1 ರಿಂದ ವಿದ್ಯಾಗಮ ಪುನರಾರಂಭ- ಸಚಿವ ಸುರೇಶ್ ಕುಮಾರ್‌

ಆಗಸ್ಟ್ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇಂದು ಸಚಿವರು ಬೆಂಗಳೂರಿನ ಮಲ್ಲೇಶ್ವರದ ಸ್ಟೆಲ್ಲಾ ಮೇರಿಸ್ ಪ್ರೌಢಶಾಲೆ, ಎಂಎಲ್ಎ ಪ್ರೌಢಶಾಲೆ, ನಿರ್ಮಲಾರಾಣಿ ಪ್ರೌಢಶಾಲೆ, ರಾಜಾಜಿನಗರದ ಎಸ್ ಜೆ ಆರ್ ಸಿ ಕಾಲೇಜು, ಸೇಂಟ್ ಆನ್ಸ್ ಪ್ರೌಢಶಾಲೆಗಳ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆ ವೀಕ್ಷಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ. ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಯಲಿದೆ ಎಂದರು.

ಲಾಕ್ ಡೌನ್ ಹಿನ್ನೆಲೆಯಲ್ಲಿ ಮೌಲ್ಯಮಾಪನಕ್ಕೆ ಬೆಂಗಳೂರು ಮಹಾನಗರದ 28 ಕೇಂದ್ರಗಳಲ್ಲಿ ಶೇ. 45 ರಷ್ಟು ಶಿಕ್ಷಕರು ಹಾಜರಾಗಿದ್ದಾರೆ, ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಮೌಲ್ಯಮಾಪನ ನಡೆಯುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ರಾಜ್ಯದ ಎಲ್ಲ ಕೇಂದ್ರಗಳ ಮೌಲ್ಯಮಾಪನ ಪ್ರಕ್ರಿಯೆಯು ಮುಂದಿನ 10 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, 8.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವ ಆಲೋಚನೆ ಹೊಂದಲಾಗಿದೆ ಎಂದು ಅವರು ಹೇಳಿದ್ದಾರೆ.


ಓದಿ: ’ಚಂದನ’ ವಾಹಿನಿಯಲ್ಲಿ ’ಸೇತುಬಂಧ’ ತರಗತಿ ಪ್ರಾರಂಭ: ಸಚಿವ ಸುರೇಶ್ ಕುಮಾರ್‌‌


 

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here