Homeಕರ್ನಾಟಕಹಿಂದುಳಿದ ವರ್ಗಗಳ ಎಸ್.ಎಸ್.ಪಿ ವಿದ್ಯಾರ್ಥಿ ವೇತನ ನಿಲ್ಲಿಸಿದ ರಾಜ್ಯ ಸರ್ಕಾರ...

ಹಿಂದುಳಿದ ವರ್ಗಗಳ ಎಸ್.ಎಸ್.ಪಿ ವಿದ್ಯಾರ್ಥಿ ವೇತನ ನಿಲ್ಲಿಸಿದ ರಾಜ್ಯ ಸರ್ಕಾರ…

- Advertisement -
- Advertisement -

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿತ್ಯವೂ ಸೈಬರ್ ಸೆಂಟರ್ ಮತ್ತು ಶಾಲೆಗಳಿಗೆ ತಿರುಗುತ್ತಲೇ ಇದ್ದರು.. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಕೂಡ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸುವಂತೆ ಸಮಯವನ್ನೂ ನೀಡಿತ್ತು. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಪ್ರತಿದಿನ ಎರಡ್ಮೂರು ಬಾರಿಯಾದರೂ ಸೈಬರ್ ಸೆಂಟರ್ ಮತ್ತು ಶಾಲೆಗಳಲ್ಲಿ ವಿಚಾರಿಸುತ್ತಲೇ ಇದ್ದರು. ಕೊನೆ ಗಳಿಗೆಯಲ್ಲಿ ಮೆಟ್ರಿಕ್ ಪೂರ್ವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನೇ ಬಿಜೆಪಿ ಸರ್ಕಾರ ನಿಲ್ಲಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಪಿ.ವಸಂತಕುಮಾರ್ ವಿದ್ಯಾರ್ಥಿ ವೇತನ ರದ್ದುಗೊಳಿಸಲಾಗಿದೆ ಎಂಬ ಆದೇಶ ನೀಡಿರುವುದು ಪೋಷಕರನ್ನು ಕೆರಳುವಂತೆ ಮಾಡಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಎಡವಟ್ಟುಗಳ ಮೇಲೆ ಎಡವಟ್ಟು ಮಾಡುತ್ತಲೇ ಬರುತ್ತಿದೆ. ನೆರೆ ಪರಿಹಾರ ಹಣ ಬಿಡುಗಡೆ ಮಾಡಿ ನೆರವು ನೀಡಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡುತ್ತಿಲ್ಲ. ಈಗ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವೇತನಕ್ಕೂ ಕತ್ತರಿ ಹಾಕಿದೆ. ತಮ್ಮ ಮಗ/ಳ ಭವಿಷ್ಯಕ್ಕೆ ಸ್ವಲ್ಪ ಮಟ್ಟಿನ ದಾರಿಯಾಗಬಹುದು ಎಂಬ ಪೋಷಕರ ಕನಸಿಗೆ ರಾಜ್ಯ ಸರ್ಕಾರ ತಣ್ಣೀರು ಎರಚಿದೆ. ಆರಂಭದಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31ರವರೆಗೆ ಅವಧಿ ನೀಡಿ ಈಗ ದಿಢೀರ್ ರದ್ದುಪಡಿಸಿದ್ದೇಕೆ ಎಂಬ ಪ್ರಶ್ನೆ ಎದುರಾಗಿದೆ.

ವಿದ್ಯಾರ್ಥಿಗಳ ಪೋಷಕರು ಸೈಬರ್ ಸೆಂಟರ್‌ನಲ್ಲಿ ಅರ್ಜಿ ಭರ್ತಿ ಮಾಡಲು ಹೋದರೆ ಅಥವಾ ಭರ್ತಿ ಮಾಡಿಸಲು ಹೋದರೆ ಎಸ್.ಎಸ್.ಪಿ ಕರ್ನಾಟಕ ಡಾಟ್ ಕಾಮ್ ಪೋರ್ಟಲ್ ತೆರೆದುಕೊಳ್ಳುತ್ತಿತ್ತು. ವಿದ್ಯಾರ್ಥಿ ಲಾಗಿನ್ ಇಲ್ಲವೆ ಖಾತೆಯನ್ನು ಸೃಜಿಸಿ ಖಾತೆ ಓಪನ್ ಮಾಡಲು ಹೋದರೆ ವಿದ್ಯಾರ್ಥಿಗಳ ಮಾಹಿತಿಯೇ ಸ್ಕ್ರೀನ್ ಮೇಲೆ ಬರುತ್ತಿರಲಿಲ್ಲ. ಯಾಕೆಂದರೆ ಅರ್ಜಿಯನ್ನು ಬಿಟ್ಟಿದ್ದರೆ ತಾನೆ ಅದು ಸ್ಕ್ರೀನ್ ಮೇಲೆ ವಿದ್ಯಾರ್ಥಿಯ ಮಾಹಿತಿ ಬರುವುದು.. ಅದು ಮಾಹಿತಿ ಬರುತ್ತಿರಲಿಲ್ಲ. ಆದರೆ 2018-19ನೇ ಸಾಲಿನ ವಿದ್ಯಾರ್ಥಿ ವೇತನ ಪಡೆದಿರುವುದನ್ನು ಮಾತ್ರ ತೋರಿಸುತ್ತಿತ್ತು.

ಎಸ್.ಎಸ್.ಪಿಯಡಿಯಲ್ಲಿ ಮೆಟ್ರಿಕ್ ಪೂರ್ವ ಅಂದರೆ 1 ರಿಂದ 10ನೇ ತರಗತಿ ಒಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು. ಈಗ ಅದಕ್ಕೂ ಕುತ್ತು ಬಂದಿದೆ.

ಅಷ್ಟೇ ಅಲ್ಲ ವಿದ್ಯಾರ್ಥಿ ಮುಂದಿನ ತರಗತಿಗೆ ಹೋಗಿರುವ ವಿಷಯವನ್ನೇ ಅಪ್ ಡೇಟ್ ಮಾಡಿರಲಿಲ್ಲ. ಯಾವುದೇ ವಿದ್ಯಾರ್ಥಿಯ ಮಾಹಿತಿ ಹುಡುಕಿದರೆ ವಿದ್ಯಾರ್ಥಿಯ ಹಿಂದಿನ ವರ್ಷದ ಮಾಹಿತಿ ಮತ್ತು ಪಡೆದಿರುವ ಹಣ ಮಾತ್ರ ತೋರಿಸುತ್ತಿತ್ತು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕಾಗಿ ವಿದ್ಯಾರ್ಥಿಗಳ ಮಾಹಿತಿ ಅಪ್ ಡೇಟ್ ಮಾಡಬೇಕಾಗಿದ್ದ ಇಲಾಖೆ ಮೌನವಹಿಸಿತ್ತು. ಇಲಾಖೆಗೆ ಮೊದಲೇ ಈ ಬಾರಿ ವಿದ್ಯಾರ್ಥಿ ವೇತನ ಬಿಡುಗಡೆಯಾಗುವುದಿಲ್ಲ ಎಂಬುದು ಗೊತ್ತಿತ್ತು. ಹೀಗಾಗಿ ವಿಷಯವನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಮುಚ್ಚಿಟ್ಟು ಅರ್ಜಿ ಮಾತ್ರ ಆಹ್ವಾನಿಸುವ ನಾಟಕ ಮಾಡಿತು ಇಲಾಖೆ. ಇಲಾಖೆಯ ನಾಟಕದ ಪಾತ್ರಧಾರಿಗಳು ಕೊನೆಯವರೆಗೂ ರಂಗಕ್ಕೆ ಬರಲೇ ಇಲ್ಲ. ಆದರೆ ನಾಟಕ ಮಾತ್ರ ಮುಕ್ತಾಯವಾಗಿತ್ತು. ಹಣ ಬರುತ್ತದೆ. ವಿದ್ಯಾರ್ಥಿಗೆ ಯಾವುದಾದರೂ ಉಪಯೋಗಕ್ಕೆ ಬರುತ್ತದೆ ಎಂದು ಕಾಯುತ್ತಿದ್ದವರಿಗೆ ನಿರಾಸೆ ಉಂಟು ಮಾಡಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರನ್ನು ವಾರದ ಹಿಂದೆಯೇ ಸಂಪರ್ಕಿಸಲಾಗಿತ್ತು. ವಿದ್ಯಾರ್ಥಿಯ ಮಾಹಿತಿ ಅಪ್ ಡೇಟ್ ಆಗಿಲ್ಲ, ವಿದ್ಯಾರ್ಥಿಯ ಹೊಸ ಖಾತೆಯೂ ಸೃಜನೆಯಾಗುತ್ತಿಲ್ಲ. ವಿದ್ಯಾರ್ಥಿಯ ಲಾಗಿನ್ ಕೂಡ ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರೆ ಅವರಿಂದ ಬಂದ ಉತ್ತರ ‘ಇನ್ನು ಎರಡು ಮೂರು ದಿನ ಕಾಯಿರಿ. ಅರ್ಜಿಯನ್ನು ಅಪ್ ಲೋಡ್ ಮಾಡಿಲ್ಲ’ ಎಂದು ಭರವಸೆಯನ್ನೂ ನೀಡಿದ್ದರು. ಆದರೆ ಆ ಅಧಿಕಾರಿ ಸುಳ್ಳು ಹೇಳಿದ್ದಾರೆ ಎಂಬುದು ಎರಡು ವಾರದ ನಂತರ ಈಗ ಗೊತ್ತಾಗಿದೆ. ಅಧಿಕಾರಿಗಳು ಹೀಗೆ ಮಾಹಿತಿ ಮುಚ್ಚಿಡುವ ಮೂಲಕ ವಿದ್ಯಾರ್ಥಿ ಮತ್ತು ಪೋಷಕರಿಗೆ ವಂಚನೆ ಮಾಡಿದ್ದಾರೆ. ಮೊದಲೇ ಮಾಹಿತಿ ನೀಡಿದ್ದರೆ ವಿದ್ಯಾರ್ಥಿ ಪೋಷಕರು ಶಾಲೆ, ಸೈಬರ್ ಸೆಂಟರ್ ಅಲೆಯುವುದು ತಪ್ಪುತ್ತಿತ್ತು. ಹೀಗೆ ದಿಢೀರ್ ವಿದ್ಯಾರ್ಥಿ ವೇತನ ರದ್ದುಪಡಿಸಲಾಗಿದೆ ಎಂದರೆ ಹೇಗೆ ಎಂದು ಪೋಷಕರು ಪ್ರಶ್ನಿಸಿದ್ದಾರೆ.

ನೂರು ದಿನಗಳನ್ನು ಪೂರೈಸಿರುವ ಬಿ.ಎಸ್.ಯಡಿಯೂರಪ್ಪ ಸರ್ಕಾರ ಹಿಂದುಳಿದ ವಿದ್ಯಾರ್ಥಿಗಳಿಗೆ  ದ್ರೋಹ ಎಸಗಿದೆ. ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸಿದೆ. ವಿದ್ಯಾರ್ಥಿಗಳಿಗೆ ಮೊದಲೇ ಮಾಹಿತಿ ನೀಡಿದರೆ ಪ್ರತಿಭಟನೆ ನಡೆಸಬಹುದು ಎಂಬ ಕಾರಣಕ್ಕೆ ಈ ರೀತಿ ಮಾಡಲಾಗಿದೆ. 1 ರಿಂದ 10 ತರಗತಿಯವರೆಗಿನ ಲಕ್ಷಾಂತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುವುದರಿಂದ ವಂಚಿತರಾಗುತ್ತಾರೆ. ಬಹುಸಂಖ್ಯಾತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತು ಇಲಾಖೆ ದ್ರೋಹ ಬಗೆದಿದೆ. ಇದು ವಿದ್ಯಾರ್ಥಿಗಳ ವಿರೋಧಿ ನೀತಿಯಾಗಿದೆ. ವಿದ್ಯಾರ್ಥಿ ವೇತನ ನಿಲ್ಲಿಸುವ ಮೂಲಕ ಸರ್ಕಾರ ಅವರ ಭವಿಷ್ಯಕ್ಕೆ ಕೊಡಲಿ ಪೆಟ್ಟು ನೀಡಿದಂತಾಗಿದೆ. ವಿದ್ಯಾರ್ಥಿ ವೇತನ ನೀಡದಿದ್ದರೆ ಹೋರಾಟ ಸಂಘಟಿಸುತ್ತೇವೆ. ಸೋಮವಾರ ಇಲ್ಲವೇ ಮಂಗಳವಾರ ರಾಜ್ಯಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿ ಹೋರಾಡುತ್ತೇವೆ ಎನ್ನುತ್ತಾರೆ ಭಾರತ ವಿದ್ಯಾರ್ಥಿ ಫೆಡರೇಷನ್ ರಾಜ್ಯಾಧ್ಯಕ್ಷ ಗುರುರಾಜ್ ದೇಸಾಯಿ.

ಹಿಂದುಳಿದ ವರ್ಗಗಳ ಅದೆಷ್ಟೋ ಬಡ ಕುಟುಂಬಗಳು ತಮ್ಮ ಮಕ್ಕಳಿಗೆ ವಿದ್ಯಾರ್ಥಿ ವೇತನದ ಹಣದಿಂದ ಪುಸ್ತಕ, ಬಟ್ಟೆ ಮೊದಲಾದ ಸಾಮಗ್ರಿ ಗಳನ್ನು ಕೊಡಿಸುತ್ತಿದ್ದವು. ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿ ವೇತನ ಅನುಕೂಲವಾಗುತ್ತಿತ್ತು. ಆದರೆ ಈಗ ಸರ್ಕಾರ ಕುಂಟು ನೆಪ ಹೇಳಿಕೊಂಡು ವಿದ್ಯಾರ್ಥಿ ವೇತನ ನಿಲ್ಲಿಸಿರುವುದು ನಾಚಿಕೆಗೇಡಿನ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...