Homeಮುಖಪುಟಮುಂಬೈನ ಬಾಂದ್ರಾ ಟರ್ಮಿನಸ್ ನಿಲ್ದಾಣದಲ್ಲಿ ಕಾಲ್ತುಳಿತ; ಒಂಬತ್ತು ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

ಮುಂಬೈನ ಬಾಂದ್ರಾ ಟರ್ಮಿನಸ್ ನಿಲ್ದಾಣದಲ್ಲಿ ಕಾಲ್ತುಳಿತ; ಒಂಬತ್ತು ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

- Advertisement -
- Advertisement -

ಮುಂಬೈನ ಬಾಂದ್ರಾ ಟರ್ಮಿನಸ್ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಾಹಿತಿಯ ಪ್ರಕಾರ, ಭಾನುವಾರ ಮುಂಜಾನೆ ಮುಂಬೈನಿಂದ ಗೋರಖ್‌ಪುರಕ್ಕೆ ಹೋಗುತ್ತಿದ್ದ ರೈಲು ಪ್ಲಾಟ್‌ಫಾರ್ಮ್ ತಲುಪಿದಾಗ ಈ ಘಟನೆ ಸಂಭವಿಸಿದೆ. ಆದರೆ, ಪ್ರಯಾಣಿಕರು ರೈಲು ಹತ್ತಲು ಆತುರಪಡುತ್ತಿದ್ದಂತೆ ಕಾಲ್ತುಳಿತ ಉಂಟಾಗಿ ಸುಮಾರು ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಮುಂಬೈನ ಭಾಭಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದ್ರಜಿತ್ ಸಹಾನಿ ಮತ್ತು ನೂರ್ ಮೊಹಮ್ಮದ್ ಶೇಖ್ ಎಂದು ಗುರುತಿಸಲಾದ ಇಬ್ಬರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ನಾಗರಿಕ ಅಧಿಕಾರಿಗಳ ಪ್ರಕಾರ, ಭಾನುವಾರದಂದು ಘಟನೆ ವರದಿಯಾಗಿದೆ, ಹಬ್ಬದ ಋತುವಿನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಬಾಂದ್ರಾ-ಗೋರಖ್‌ಪುರ ಅಂತ್ಯೋದಯ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಣಿಸಲು ಜನರಲ್ ಕೋಚ್‌ಗಳಿಗೆ ಹತ್ತಲು ಪ್ಲಾಟ್‌ಫಾರ್ಮ್ ನಂ. 1 ಕ್ಕೆ ಧಾವಿಸಿದ್ದರು.

ಪ್ರಯಾಣಿಕರು ಅಂತ್ಯೋದಯ ಎಕ್ಸ್‌ಪ್ರೆಸ್ ಅನ್ನು ಹತ್ತಲು ಪ್ರಯತ್ನಿಸಿದಾಗ (ಎಲ್ಲಾ 22 ಸಾಮಾನ್ಯ ದರ್ಜೆಯ ಬೋಗಿಗಳನ್ನು ಹೊಂದಿರುವ) ಒಳಗಿನಿಂದ ಕೋಚ್‌ಗಳ ಬಾಗಿಲುಗಳನ್ನು ಲಾಕ್ ಮಾಡಿದಾಗ ಪರಿಸ್ಥಿತಿ ಹದಗೆಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲಿನಲ್ಲಿ ಆಸನವನ್ನು ಹಿಡಿಯುವ ಪ್ರಯತ್ನದಲ್ಲಿ, ಕೆಲವರು ಪ್ಲಾಟ್‌ಫಾರ್ಮ್‌ನಲ್ಲಿ ಇನ್ನೂ ನಿಲ್ಲದಿರುವಾಗ ರೈಲು ಹತ್ತಲು ಪ್ರಯತ್ನಿಸಿದರು. ಇದರಿಂದ ಎರಡು ಬೋಗಿಗಳ ನಡುವಿನ ಜಾಗದಲ್ಲಿ ಜನರು ಪ್ಲಾಟ್‌ಫಾರ್ಮ್ ಮೇಲೆ ಬೀಳಲು ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.

“ಸಾಮಾನ್ಯವಾಗಿ, ಪ್ಲಾಟ್‌ಫಾರ್ಮ್‌ನಲ್ಲಿ ರೈಲು ನಿಂತ ನಂತರ ಕೋಚ್‌ಗಳ ಬಾಗಿಲು ತೆರೆಯಲಾಗುತ್ತದೆ ಮತ್ತು ಪ್ರಯಾಣಿಕರು ನಂತರ ಸರದಿಯಲ್ಲಿ ಹತ್ತುತ್ತಾರೆ” ಎಂದು ಡಬ್ಲ್ಯುಆರ್ ಮೂಲಗಳು ತಿಳಿಸಿವೆ.

ಘಟನೆಯ ನಂತರ, ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಮತ್ತು ಸ್ಥಳೀಯ ಜನರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ವರ್ಗಾಯಿಸಿದರು. ಅಲ್ಲಿ ಅವರು ಪ್ರಸ್ತುತ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ.

ಘಟನೆಯ ಕುರಿತು ಮಾತನಾಡಿದ ಥಾಣೆ ಸೆಂಟ್ರಲ್ ರೈಲ್ವೆ ಡೆಪ್ಯುಟಿ ಕಮಿಷನರ್ ಮನೋಜ್ ನಾನಾ ಪಾಟೀಲ್, ಪೊಲೀಸರು ಸತ್ಯಾಸತ್ಯತೆಗಾಗಿ ವಿಚಾರಣೆ ನಡೆಸುತ್ತಿದ್ದಾರೆ. “ಇದು ಪ್ರತಿ ಭಾನುವಾರ ಓಡುವ ಸಾಪ್ತಾಹಿಕ ರೈಲು. ರೈಲು ಕಾಯ್ದಿರಿಸಲಾಗಿಲ್ಲ.. ಸಾಮಾನ್ಯ ಸಾರ್ವಜನಿಕರು ಈ ರೈಲಿನ ಟಿಕೆಟ್ ಸುಲಭವಾಗಿ ಖರೀದಿಸಬಹುದು. ಆದ್ದರಿಂದ, ಈ ರೈಲಿಗೆ ಸಾಮಾನ್ಯವಾಗಿ ವಿಪರೀತ ರಶ್ ಇರುತ್ತದೆ.. ನಮ್ಮ ತಂಡವು ಇಲ್ಲಿ ಹಾಜರಿದ್ದರು, ಆದರೆ ಜನರು ಹಠಾತ್ತನೆ ಆಸನಗಳಿಗಾಗಿ ಧಾವಿಸಿದರು.. ಘಟನೆಯಲ್ಲಿ ಯಾರೂ ಗಂಭೀರವಾಗಿ ಗಾಯಗೊಂಡಿಲ್ಲ.. ನಾವು ವಿಚಾರಣೆ ನಡೆಸುತ್ತಿದ್ದೇವೆ” ಎಂದು ಅಧಿಕಾರಿ ಹೇಳಿದರು.

ಇದನ್ನೂ ಓದಿ; ದೆಹಲಿ: ಪಾಲಿಕಾ ಬಜಾರ್‌ನಲ್ಲಿ ಅನುಮಾನಾಸ್ಪದ ಚೈನೀಸ್ ಜಾಮರ್‌ಗಳು ಪತ್ತೆ, ತನಿಖೆ ಕೈಗೆತ್ತಿಕೊಂಡ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...