Homeಕರ್ನಾಟಕಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

- Advertisement -
- Advertisement -

ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ಆಗಮಿಸಿದ್ದ ವೇಳೆ ಕಾಲ್ತುಳಿತ ಸಂಭವಿಸಿ ಸಾವಿಗೀಡಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಇಂದು (ಬುಧವಾರ) ಸಂಜೆ ದುರಂತ ಸಂಭವಿಸಿದೆ.

ಐಪಿಎಲ್ ಪಂದ್ಯಾಟದಲ್ಲಿ 18 ವರ್ಷಗಳ ಬಳಿಕ ಚೊಚ್ಚಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಗೆದ್ದಿರುವ ಹಿನ್ನೆಲೆ ರಾಜ್ಯ ಸರ್ಕಾರದಿಂದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿತ್ತು.

ವಿಧಾನಸೌಧದದ ಕಾರ್ಯಕ್ರಮದ ಬಳಿಕ, ಸಂಜೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಇದರಲ್ಲಿ ಪಾಲ್ಗೊಳ್ಳಲು ಭಾರೀ ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ಸ್ಟೇಡಿಯಂ ಗೇಟ್ ಬಳಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.

ವಿಧಾನಸೌಧದ ಮೆಟ್ಟಿಲ ಬಳಿ ಆಯೋಜಿಸಿದ್ದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆದಿಯಾಗಿ ಗಣ್ಯರು ಆರ್‌ಸಿಬಿ ಆಟಗಾರರನ್ನು ಅಭಿನಂದಿಸಿದ್ದಾರೆ.

ಇತ್ತೀಚಿನ ವರದಿ ಪ್ರಕಾರ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

ಕಾಲ್ತುಳಿತದ ಗಾಯಾಳುಗಳನ್ನು ಶಿವಾಜಿನಗರದ ಬೌರಿಂಗ್-ಲೇಡಿ ಕರ್ಜನ್ ಆಸ್ಪತ್ರೆ ಮತ್ತು ವಿಠಲಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಎರಡೂ ಆಸ್ಪತ್ರೆಗಳಲ್ಲಿ ಸಾವು ಸಂಭವಿಸಿದೆ.

ಪುಟ್ಟ ಮಗುವಿನ ಬಿರಿಯಾನಿ ಕೋರಿಕೆಗೆ ಸ್ಪಂದಿಸಿದ ಕೇರಳ ಸರ್ಕಾರ: ಅಂಗನವಾಡಿಗಳ ಆಹಾರದ ಮೆನು ಪರಿಷ್ಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...

DELHI SIR : ಕರಡು ಪಟ್ಟಿಯಲ್ಲಿ 2024ರಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಹೆಸರು!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಬೆಳಕಿಗೆ ಬರುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, 2024ರಲ್ಲಿ ನಿಧನರಾದ ಪದ್ಮ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಬಿಬೆಕ್ ದೆಬ್ರಾಯ್ ಅವರ...

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...