Homeಚಳವಳಿಜೆಎನ್‌ಯು ವಿದ್ಯಾರ್ಥಿಗಳ ಪರ ಹಂಪಿ ವಿ.ವಿ ವಿದ್ಯಾರ್ಥಿಗಳ ಪ್ರತಿಭಟನೆ

ಜೆಎನ್‌ಯು ವಿದ್ಯಾರ್ಥಿಗಳ ಪರ ಹಂಪಿ ವಿ.ವಿ ವಿದ್ಯಾರ್ಥಿಗಳ ಪ್ರತಿಭಟನೆ

- Advertisement -
- Advertisement -

ಜೆಎನ್‌ಯು ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಕರ್ಣಾಟಕದ ಹಂಪಿ ಕನ್ನಡ ವಿ.ವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಕೂಡಲೇ ಜೆಎನ್‌ಯುನಲ್ಲಿ ಫೀಸು ಹೆಚ್ಚಳದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿದರು.

ಅಲ್ಲದೇ ಅಮಾಯಕ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಲ್ಲದೇ ಎಫ್‌ಐಆರ್‌ ಕೂಡ ಹಾಕಿದ್ದಾರೆ. ಅದನ್ನು ಹಿಂಪಡೆಯಬೇಕೆಂದು ವಿದ್ಯಾರ್ಥಿಗಳು ಒಕ್ಕೊರಲಿನಿಂದ ಆಗ್ರಹಿಸಿದರು.

ಹಂಪಿ ವಿ.ವಿಯಲ್ಲಿಯೂ ಸಹ ಎರಡು ವರ್ಷದಿಂದ ದಲಿತ, ಹಿಂದುಳಿದ ವಿದ್ಯಾರ್ಥಿಗಳಿಗೆ ಫೆಲೊಶಿಪ್‌ ಬಂದಿಲ್ಲ ಅದನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಬಯಲು ಚಿಂತನಾ ಸಂಶೋಧನಾ ವಿದ್ಯಾರ್ಥಿಗಳ ಬಳಗದ ವತಿಯಿಂದ ನೀಡಲಾದ ಮನವಿ ಪತ್ರವನ್ನು ರಿಜಿಸ್ಟ್ರಾರ್‌ ಸುಬ್ಬಣ್ಣ ರೈರವರು ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಶೈಲಜ, ಉಪನ್ಯಾಸಕರಾದ ಪಾಂಡುರಂಗಬಾಬು, ಅಶೋಕ್‌ ಕುಮಾರ್‌ ವಿದ್ಯಾರ್ಥಿ ಮುಖಂಡರಾದ ಸಂತೋಷ್‌ ಎಚ್‌.ಎಂ, ಮುನಿರಾಜ್‌, ಸಂಗಮೇಶ್, ರಾಗಿಣಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...