Homeಚಳವಳಿತೆರಿಗೆ ಕಟ್ಟುವ (TaxPayersWithJNU) ನಾವು ಕೂಡ ನಿಮ್ಮ ಜೊತೆಗಿದ್ದೇವೆ: JNU ವಿದ್ಯಾರ್ಥಿಗಳ ಹೋರಾಟಕ್ಕೆ ದೇಶಾದ್ಯಂತ ಭಾರೀ...

ತೆರಿಗೆ ಕಟ್ಟುವ (TaxPayersWithJNU) ನಾವು ಕೂಡ ನಿಮ್ಮ ಜೊತೆಗಿದ್ದೇವೆ: JNU ವಿದ್ಯಾರ್ಥಿಗಳ ಹೋರಾಟಕ್ಕೆ ದೇಶಾದ್ಯಂತ ಭಾರೀ ಬೆಂಬಲ

2013ರಿಂದ ಜೆಎನ್‌ಯುನಲ್ಲಿ ಶೇ. 50% ಕ್ಕಿಂತ ಹೆಚ್ಚಿನ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ರೀತಿ ಸಾವಿರ ಪಟ್ಟು ಶುಲ್ಕ ಹೆಚ್ಚಿಸಿದರೆ ಆ ಹೆಣ್ಣು ಮಕ್ಕಳ ಶಿಕ್ಷಣದ ಗತಿಯೇನು?

- Advertisement -
- Advertisement -

ಹಾಸ್ಟೆಲ್‌ ಫೀಸ್‌ ಮತ್ತು ದಾಖಲಾತಿ ಶುಲ್ಕ ಹೆಚ್ಚಳದ ವಿರುದ್ಧ ದೆಹಲಿಯ ಜವಾಹರ್‌ಲಾಲ್‌ ನೆಹರೂ ವಿವಿಯ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ರೀತಿಯ ಹೋರಾಟಗಳು ಹಿಂದೆ ನಡೆದಾಗ #IStandWithJNU ಎಂಬ ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿತ್ತು. ಆದರೆ ಈ ಬಾರಿ ಟ್ವಿಟ್ಟರ್‌ನಲ್ಲಿ #TaxPayersWithJNU ಎಂಬ ಹ್ಯಾಷ್‌ಟ್ಯಾಗ್‌ ಕೂಡ ಟ್ರೆಂಡ್‌ ಆಗುವ ಮೂಲಕ ಗಮನ ಸೆಳೆದಿದೆ.

ವಿದ್ಯಾರ್ಥಿಗಳು ನಿನ್ನೆ ಹಮ್ಮಿಕೊಂಡಿದ್ದ ಪಾರ್ಲಿಮೆಂಟ್‌ ಮಾರ್ಚ್‌ ಅನ್ನು ಕ್ರೂರವಾಗಿ ಪೊಲೀಸರು ದಮನ ಮಾಡಿದ್ದರು. ಅಲ್ಲದೇ ವಿದ್ಯಾಥಿ೯ಗಳ ಮೇಲೆ ಎಫ್‌ಐಆರ್‌ ಕೂಡ ದಾಖಲಿಸಿದ್ದರು. ಈ ರೀತಿಯ ದಬ್ಬಾಳಿಕೆ ಹೆಚ್ಚಾದಂತೆ ವಿದ್ಯಾರ್ಥಿಗಳ ಪರವಾಗಿನ ಬೆಂಬಲದ ಅಲೆಯೂ ಸಹ ಹೆಚ್ಚಾಗಿದೆ. ಸಾವಿರಾರು ಜನ ವಿದ್ಯಾರ್ಥಿಗಳ ಧೀರೋದಾತ್ತ ಹೋರಾಟಕ್ಕೆ ಐಕ್ಯಮತ್ಯ ಸೂಚಿಸಿದ್ದಾರೆ.

ಉನ್ನತ ಶಿಕ್ಷಣಕ್ಕಾಗಿ ಸರ್ಕಾರವು ನಮ್ಮಿಂದ 94,000 ಕೋಟಿ ರೂಗಳನ್ನು ತೆರಿಗೆಯಾಗಿ ಸಂಗ್ರಹಿಸಿದೆ, ಆದರೆ ಇದು ಸಿಎಜಿ ವರದಿ ಪ್ರಕಾರ ಬಳಕೆಯಾಗದೆ ಉಳಿದಿದೆ. ಕನ್ಹಯ್ಯ ಕುಮಾರ್ ಅವರಂತಹ ಜನರು ಅಲ್ಲಿ ಅಧ್ಯಯನ ಮಾಡುವುದನ್ನು ತಡೆಯಲು ಜೆಎನ್‌ಯು ಶುಲ್ಕದಲ್ಲಿ ಹಲವಾರು ಪಟ್ಟು ಹೆಚ್ಚಳ ಮಾಡಲಾಗಿದೆ. ಇದು ಶಿಕ್ಷಣ ಮತ್ತು ಚಿಂತನೆಯ ಮೇಲಿನ ಯುದ್ಧ ಎಂದು ಹಿರಿಯ ವಕೀಲರಾದ ಪ್ರಶಾಂತ್‌ ಭೂಷಣ್‌ ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಶುಲ್ಕ ಹೆಚ್ಚಳವಲ್ಲ. ಇದು ಶಿಕ್ಷಣದ ವ್ಯಾಪಾರೀಕರಣವಾಗಿದೆ. 2013ರಿಂದ ಜೆಎನ್‌ಯುನಲ್ಲಿ ಶೇ. 50% ಕ್ಕಿಂತ ಹೆಚ್ಚಿನ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ರೀತಿ ಸಾವಿರ ಪಟ್ಟು ಶುಲ್ಕ ಹೆಚ್ಚಿಸಿದರೆ ಆ ಹೆಣ್ಣು ಮಕ್ಕಳ ಶಿಕ್ಷಣದ ಗತಿಯೇನು? ಭೇಟಿ ಪಡಾವೋ ಎಂದು ಕೇವಲ ಜಾಹಿರಾತು ಕೊಟ್ಟರೆ ಸಾಲದು. ಜೆಎನ್‌ಯು ಮೇಲಿನ ದಾಳಿ ಸಾಮಾನ್ಯ ಯುವ ಭಾರತೀಯರ ಉನ್ನತ ಶಿಕ್ಷಣದ ಮೇಲಿನ ಆಕ್ರಮಣವಾಗಿದೆ ಎಂದು ಹೋರಾಟಗಾರ್ತಿ ಕವಿತಾ ಕೃಷ್ಣನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿ ಬಾರಿಯೂ ಜೆಎನ್‌ಯುಗೆ ಹಣ ನೀಡಬೇಕೆಂದರೆ ನಮ್ಮ ತೆರಿಗೆ ಹಣ ಪೋಲು ಮಾಡುತ್ತಿದ್ದೀರಿ ಎಂದು ಬಿಜೆಪಿ ಬೆಂಬಲಿಗರು ಹರಿಹಾಯುತ್ತಿದ್ದರು. ಆದರೀಗ ದೇಶಾದ್ಯಂತ ಪ್ರತಿಮೆಗಳನ್ನು ಕಟ್ಟಲು, ಕುಂಭಮೇಳಗಳನ್ನು ನಡೆಸಲು ಹಣವಿದೆ, ಬಡಮಕ್ಕಳು ಕಲಿಯಲು ಹಣವಿಲ್ಲವೇ? ನಮ್ಮ ತೆರಿಗೆ ಹಣವನ್ನು ಏನು ಮಾಡಿದ್ದೀರಿ? ನಾವೆಲ್ಲಾ ಜೆಎನ್‌ಯು ವಿದ್ಯಾರ್ಥಿಗಳ ಪರವಿದ್ದೀವಿ ಎಂದು ನೆಟ್ಟಿಗರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೋಟ್ಯಾಧಿಪತಿ ಎಂಪಿಗಳಿಗೆ ಪಾರ್ಲಿಮೆಂಟ್‌ನಲ್ಲಿ ಸಬ್ಸಿಡಿ ದರಕ್ಕೆ ಊಟ ವಸತಿ ಒದಗಿಸುವ ಸರ್ಕಾರ ಮಕ್ಕಳ ಹಾಸ್ಟೆಲ್‌ ಫೀಸು ಹೆಚ್ಚಿಸುವುದೇಕೆ ಎಂದು ಕಿಡಿಕಾರಿದ್ದಾರೆ.

ನಾನೊಬ್ಬ ತೆರಿಗೆದಾರ. ನಾನು ಜೆಎನ್‌ಯೂ ಹೋರಾಟವನ್ನು ಸಂಪೂರ್ಣ ಬೆಂಬಲಿಸುತ್ತೇವೆ. ಏಕೆಂದರೆ ಭವಿಷ್ಯದ ಭಾರತ ಅವರೆ ಆಗಿದ್ದಾರೆ ಎಂದು ಮೀನಾ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಪುಟ್ಟ ಶಾಲಾಮಕ್ಕಳು ಜೆಎನ್‌ಯು ವಿದ್ಯಾರ್ಥಿಗಳ ಹೋರಾಟದ ಪರವಾಗಿ ವಿ ವಾಂಟ್‌ ಜಸ್ಟೀಸ್‌ ಎಂದು ಶಾಲಾ ಬಸ್‌ನೊಳಗಿಂದಲೇ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸುವ ವಿಡಿಯೋ ವೈರಲ್‌ ಆಗಿದೆ. ವಿಡಿಯೋ ನೋಡಿ

ಕೇವಲ ಟ್ವಿಟ್ಟರ್‌ನಲ್ಲಿ ಮಾತ್ರವಲ್ಲದೇ ಬೀದಿಗಳಲ್ಲಿಯು ಜನ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ. ಜೆ.ಎನ್.ಯು ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ, ಅವರ ಹೋರಾಟವನ್ನು ಬೆಂಬಲಿಸಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ SFI ನಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ SFI ಮೈಸೂರು ವಿವಿ ಘಟಕದ ಕಾರ್ಯದರ್ಶಿ ವಿಷ್ಣು ವಿಜಯನ್, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಂದೇಶ, ಸಂಶೋಧಕರ ಸಂಘದ ಮಹೇಶ ಸೋಸಲೆ, ಗೋಪಾಲ್ ಮತ್ತು AIDSO ನ ಮಂಜು ಹಂಪಾಪುರ ಭಾಗವಹಿಸಿದ್ದರು.

ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಖಂಡಿಸಿದೆ. “ಶಿಕ್ಷಣವನ್ನು ಖಾಸಗೀಕರಣ ಮತ್ತು ವ್ಯಾಪಾರೀಕರಣಗೊಳಿಸುತ್ತಿರುವ ಸರ್ಕಾರ ವ್ಯಾಪಾರ ನೀತಿಯ ವಿರುದ್ಧ ಮತ್ತು ಗುಣಮಟ್ಟದ ಉನ್ನತ ಶಿಕ್ಷಣ ಉಚಿತವಾಗಿ ಸಿಗಬೇಕೆಂದು ಹೋರಾಟ ನಡೆಸುತ್ತಿರುತ್ತಿವ ಜೆಎನ್‌ಯು ವಿದ್ಯಾರ್ಥಿಗಳ ಜೊತೆ ಕೆವಿಎಸ್ ನಿಲ್ಲುತ್ತದೆ” ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜೆ.ಎನ್.ಯು. ವಿದ್ಯಾರ್ಥಿಗಳ ಹೋರಾಟವನ್ನು ಈ ದೇಶದ ಬಡವರೆಲ್ಲರೂ ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...