Homeಮುಖಪುಟದೇವನಹಳ್ಳಿ ರೈತರ ಬೆನ್ನಿಗೆ ನಿಲ್ಲಿ: ಚಿಂತಕರು, ವಿಜ್ಞಾನಿಗಳಿಂದ ಕೈಗಾರಿಕೋದ್ಯಮಿಗಳಿಗೆ ಬಹಿರಂಗ ಪತ್ರ

ದೇವನಹಳ್ಳಿ ರೈತರ ಬೆನ್ನಿಗೆ ನಿಲ್ಲಿ: ಚಿಂತಕರು, ವಿಜ್ಞಾನಿಗಳಿಂದ ಕೈಗಾರಿಕೋದ್ಯಮಿಗಳಿಗೆ ಬಹಿರಂಗ ಪತ್ರ

- Advertisement -
- Advertisement -

ದೇವನಹಳ್ಳಿ ರೈತರ ಭೂ ಸ್ವಾಧೀನ ವಿರೋಧಿ ಹೋರಾಟದ ಕುರಿತು ಕೈಗಾರಿಕೋದ್ಯಮಿಗಳಿಗೆ ಪ್ರಮುಖ ಚಿಂತಕರು, ವಿಜ್ಞಾನಿಗಳು ಮತ್ತು ಸಾರ್ವಜನಿಕ ನೀತಿ ತಜ್ಞರು ಬಹಿರಂಗ ಪತ್ರ ಬರೆದಿದ್ದಾರೆ. ರೈತರ ಬೆನ್ನಿಗೆ ನಿಲ್ಲುವಂತೆ ಮನವಿ ಮಾಡಿದ್ದಾರೆ.

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ಕಿತ್ತುಕೊಳ್ಳಲು ಸರ್ಕಾರ ಮುಂದಾಗಿರುವುದು,ಅದನ್ನು ವಿರೋಧಿಸಿ ನಡೆಯುತ್ತಿರುವ ಸುದೀರ್ಘ ಸಮಯದ ಹೋರಾಟ ಮತ್ತು ಭೂಮಿ ಕಳೆದುಕೊಂಡರೆ ಆಗುವ ಪರಿಣಾಮಗಳ ಕುರಿತು ಪತ್ರದಲ್ಲಿ ವಿವರಿಸಲಾಗಿದೆ.

ರೈತರು ಭೂಮಿಯನ್ನು ಕೊಟ್ಟರೆ ಅದಕ್ಕೆ ತಕ್ಕ ಪರಿಹಾರ ಸಿಗುವುದು ಮರೀಚಿಕೆ. ಈ ಹಿಂದಿನ ನಿದರ್ಶನಗಳು ಅದಕ್ಕೆ ಸಾಕ್ಷಿಯಾಗಿವೆ. ರೈತರು ಜೀವನೋಪಾಯದ ನಷ್ಟದ ಬಗ್ಗೆ ಮಾತ್ರ ಚಿಂತೆ ಮಾಡುತ್ತಿಲ್ಲ. ಸರ್ಕಾರ ಪರಿಹಾರದ ಕುರಿತು ಕೊಡುವ ಭರವಸೆಗಳ ಬಗ್ಗೆಯೂ ಅವರಿಗೆ ನಂಬಿಕೆ ಇಲ್ಲ. ಈ ಹಿಂದಿನ ಭರವಸೆಗಳನ್ನು ಸರ್ಕಾರ ಪೂರೈಸಿಲ್ಲ. ಭೂಮಿಯನ್ನು ಪಡೆದುಕೊಂಡ ನಂತರ ಸರ್ಕಾರ ರೈತರನ್ನು ಮರೆತು ಬಿಡುತ್ತದೆ. ಈ ಹಿಂದಿನ ಭರವಸೆಗಳು ಟೊಳ್ಳಾಗಿವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಸ್ಥಳೀಯ ಮತ್ತು ಸಾಂಕೇತಿಕ ಎರಡೂ ರೀತಿಯ ಈ ಪ್ರತಿಭಟನೆಗಳು ಕರ್ನಾಟಕದ ಅಭಿವೃದ್ಧಿ ಕಾರ್ಯತಂತ್ರದ ದಿಕ್ಕಿನ ಬಗ್ಗೆ ತುರ್ತು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಇದು ಕೈಗಾರಿಕಾ ವಿಸ್ತರಣೆ ಮತ್ತು ರಾಜ್ಯದ ಕೃಷಿ ನೆಲೆಯನ್ನು ಉಳಿಸಿಕೊಳ್ಳುವವರ ಜೀವನೋಪಾಯದ ನಡುವಿನ ವಿಸ್ತರಿಸುತ್ತಿರುವ ಸಂಘರ್ಷವನ್ನು ಬಹಿರಂಗಪಡಿಸುತ್ತದೆ ಎಂದು ತಿಳಿಸಲಾಗಿದೆ

ದೇವನಹಳ್ಳಿಯ ಸುತ್ತಮುತ್ತಲಿನ ಫಲವತ್ತಾದ ಭೂಮಿ ಬೆಂಗಳೂರಿನ ಆಹಾರ ಮತ್ತು ಪೌಷ್ಟಿಕಾಂಶ ಭದ್ರತೆಗೆ ಜೀವಸೆಲೆ ಎಂಬುದನ್ನು ನೆನಪಿಟ್ಟುಕೊಳ್ಳುವುದು ಮುಖ್ಯ. ಕೋವಿಡ್-19 ಲಾಕ್‌ಡೌನ್‌ನ ಕಠಿಣ ಹಂತಗಳಲ್ಲಿಯೂ ಸಹ, ಈ ರೈತರು ನಗರಕ್ಕೆ ಹಣ್ಣುಗಳು, ತರಕಾರಿಗಳು, ಹಾಲು ಮತ್ತು ಇತರ ಅಗತ್ಯ ವಸ್ತುಗಳ ನಿರಂತರವಾಗಿ ಒದಗಿಸಿದ್ದಾರೆ. ಸುತ್ತಮುತ್ತಲಿನ ಜಿಲ್ಲೆಗಳು ಒಟ್ಟಾಗಿ ವಾರ್ಷಿಕವಾಗಿ ಅಂದಾಜು 7–8 ಮಿಲಿಯನ್ ಟನ್ ತೋಟಗಾರಿಕಾ ಬೆಳೆಗಳನ್ನು ಉತ್ಪಾದಿಸುತ್ತವೆ. ಸ್ಥಳೀಯ ಡೈರಿಗಳು ಪ್ರತಿದಿನ 10 ಮಿಲಿಯನ್ ಲೀಟರ್‌ಗಳಿಗಿಂತ ಹೆಚ್ಚು ಹಾಲನ್ನು ಬೆಂಗಳೂರಿನ ನಂದಿನಿ/ಮದರ್ ಡೈರಿ ಸಮೂಹಕ್ಕೆ ತಲುಪಿಸುತ್ತವೆ. ಪ್ರತಿ ವ್ಯಕ್ತಿಗೆ ಸರಿಸುಮಾರು ಒಂದು ಕೆಜಿ ತಾಜಾ ಉತ್ಪನ್ನಗಳು ಮತ್ತು ಸುಮಾರು ಒಂದು ಲೀಟರ್ ಹಾಲು ನೀಡುತ್ತಾರೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಕರ್ನಾಟಕದ ಆರ್ಥಿಕ ಪ್ರಗತಿಗೆ ಕೈಗಾರಿಕಾ ಬೆಳವಣಿಗೆ ಮತ್ತು ಕೃಷಿ ಜೀವನೋಪಾಯ ಎರಡನ್ನೂ ಪರಿಗಣನೆಗೆ ತೆಗೆದುಕೊಂಡ ಸಮತೋಲಿತ ವಿಧಾನದ ಅಗತ್ಯವಿದೆ. ಅಭಿವೃದ್ಧಿಯ ಹೆಸರಿನಲ್ಲಿ ಗ್ರಾಮೀಣ ಮತ್ತು ಕೃಷಿ ನೆಲೆಯನ್ನು ದುರ್ಬಲಗೊಳಿಸುವುದು ಆಹಾರ ನೀಡುವ ಕೈಗೆ ಕಚ್ಚಿದಂತೆ. ನೀವು ಖಾಲಿ ಹೊಟ್ಟೆಯಲ್ಲಿ ಗೋಪುರಗಳನ್ನು ನಿರ್ಮಿಸಲು ಸಾಧ್ಯವಿಲ್ಲ. ಆಹಾರ ನೀಡುವವರನ್ನು ಬಲಿಕೊಟ್ಟು ಮಾಡುವ ಯಾವುದೇ ಪ್ರಗತಿಯ ದೃಷ್ಟಿಕೋನವು ಉಳಿಯುವುದಿಲ್ಲ ಎಂದು ಹೇಳಲಾಗಿದೆ.

ಈ ಭೂಸ್ವಾಧೀನದ ನ್ಯಾಯಸಮ್ಮತತೆಯು ಪ್ರಶ್ನಾರ್ಹವಾಗಿದೆ. ಭೂಸ್ವಾಧೀನ, ಪುನರ್ವಸತಿ, ಪುನರ್ವಸತಿಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು ಕಾಯ್ದೆ, 2013ರ ಅಡಿಯಲ್ಲಿ, ಖಾಸಗಿ ಅಥವಾ ಸಾರ್ವಜನಿಕ-ಖಾಸಗಿ ಯೋಜನೆಗಳಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಮೊದಲು ಕನಿಷ್ಠ 80% ಬಾಧಿತ ಭೂಮಾಲೀಕರ ತಿಳುವಳಿಕೆಯುಳ್ಳ ಒಪ್ಪಿಗೆಯನ್ನು ಪಡೆಯುವುದು ಕಡ್ಡಾಯವಾಗಿದೆ. ಆದರೂ ಕೆಐಎಡಿಬಿಯ 2022 ರ ಸ್ವಯಂ ಸಮೀಕ್ಷೆಯು 80% ಕ್ಕಿಂತ ಹೆಚ್ಚು ರೈತರು ತಮ್ಮ ಭೂಮಿಯನ್ನು ಬಿಟ್ಟುಕೊಡಲು ಒಪ್ಪಿಲ್ಲ ಎಂದು ತೋರಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದಲ್ಲದೆ, ಬಾಧಿತ ರೈತರಲ್ಲಿ 163 ಜನರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದವರು. ಈ ಭೂಮಿಯ ಬಹುಪಾಲು ಮೂಲತಃ ಭೂ-ಸುಧಾರಣಾ ಯೋಜನೆಗಳ ಅಡಿಯಲ್ಲಿ ನೀಡಲಾಗಿತ್ತು. ಇವುಗಳನ್ನು ವಿಶೇಷ ಅನುಮತಿ ಮತ್ತು ಸುರಕ್ಷತಾ ಕ್ರಮಗಳಿಲ್ಲದೆ ಸ್ವಾಧೀನಪಡಿಸಿಕೊಳ್ಳಲು ಅಥವಾ ವರ್ಗಾಯಿಸಲು ಸಾಧ್ಯವಿಲ್ಲ. ಈ ರಕ್ಷಣೆಗಳನ್ನು ನಿರ್ಲಕ್ಷಿಸುವುದರಿಂದ ಸಾಂವಿಧಾನಿಕ ಹಕ್ಕುಗಳು ಮತ್ತು ಸಾಮಾಜಿಕ-ನ್ಯಾಯ ಕಾನೂನುಗಳೆರಡರ ಉಲ್ಲಂಘನೆಯಾಗುವ ಅಪಾಯವಿದೆ ಎಂದು ಹೇಳಲಾಗಿದೆ.

ಕರ್ನಾಟಕದಾದ್ಯಂತ ಕೆಐಎಡಿಬಿ ಈಗಾಗಲೇ ಗಣನೀಯ ಪ್ರಮಾಣದ ಹೆಚ್ಚುವರಿ, ಬಳಕೆಯಾಗದ ಭೂಮಿಯನ್ನು ಹೊಂದಿದೆ. ಅವುಗಳು ಕೈಗಾರಿಕಾ ಉದ್ಯಮಗಳಿಗೆ ಅವಕಾಶ ಕಲ್ಪಿಸುತ್ತದೆ. ಈ ಪರ್ಯಾಯಗಳ ಹೊರತಾಗಿಯೂ ದೇವನಹಳ್ಳಿಯಲ್ಲಿ ಫಲವತ್ತಾದ ಕೃಷಿಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ನಿರಂತರ ಪ್ರಯತ್ನವು, ಪಾರದರ್ಶಕ ರಹಿತ ಭೂ ವ್ಯವಹಾರಗಳು, ಆಡಳಿತ ವ್ಯವಸ್ಥೆಯೊಳಗಿನ ಊಹಾತ್ಮಕ ಹಿತಾಸಕ್ತಿಗಳು ಮತ್ತು ಅಂಶಗಳ ನಡುವಿನ ಸಂಭಾವ್ಯ ಒಪ್ಪಂದದ ಬಗ್ಗೆ ಗಂಭೀರ ಕಳವಳಗಳನ್ನು ಹುಟ್ಟುಹಾಕುತ್ತದೆ ಎಂದು ತಿಳಿಸಲಾಗಿದೆ.

ಈ ಹಿಂದಿನ ಸಿಎಜಿ ಕಾರ್ಯಕ್ಷಮತೆ ಲೆಕ್ಕಪರಿಶೋಧನಾ ವರದಿ (No. 8 of 2017) ವಾರ್ಷಿಕ ಯೋಜನೆಗಳನ್ನು ಕಳೆದುಕೊಳ್ಳುವುದು ಮತ್ತು ಪರಿಸರ ಸುರಕ್ಷತೆಗಳನ್ನು ನಿರ್ಲಕ್ಷಿಸುವುದರಿಂದ ಹಿಡಿದು ಆಯ್ದ ಹಂಚಿಕೆದಾರರಿಗೆ ಅನಗತ್ಯ ಪ್ರಯೋಜನಗಳವರೆಗೆ ಕೆಐಎಡಿಬಿಯ ಭೂಸ್ವಾಧೀನ ಮತ್ತು ಹಂಚಿಕೆ ಪ್ರಕ್ರಿಯೆಗಳಲ್ಲಿನ ಗಂಭೀರ ಅಕ್ರಮಗಳನ್ನು ಬಹಿರಂಗಪಡಿಸಿತ್ತು. ಅಂತಹ ದಾಖಲೆಯೊಂದಿಗೆ, ಪ್ರಸ್ತುತ ಸ್ವಾಧೀನವು ನ್ಯಾಯಯುತ, ಪಾರದರ್ಶಕ ಅಥವಾ ನಿಜವಾಗಿಯೂ ಸಾರ್ವಜನಿಕ ಹಿತಾಸಕ್ತಿಯಲ್ಲಿದೆ ಎಂಬುದಕ್ಕೆ ಯಾವುದೇ ಭರವಸೆ ಇಲ್ಲ.

“ನೀವು ಕರ್ನಾಟಕದ ಬೆಳವಣಿಗೆಯಲ್ಲಿ ಪ್ರಮುಖ ಪಾಲುದಾರರು ಮಾತ್ರವಲ್ಲದೆ, ಸಾರ್ವಜನಿಕ ನಂಬಿಕೆ ಮತ್ತು ಸಾಮಾಜಿಕ ಪ್ರಭಾವ ಬೀರುವವರು ಎಂದು ನಾವು ದೃಢವಾಗಿ ನಂಬುತ್ತೇವೆ. ರಾಜ್ಯದ ಕೈಗಾರಿಕಾ ಭವಿಷ್ಯದ ಶಿಲ್ಪಿಗಳಾಗಿ, ನಿಮ್ಮ ನಾಯಕತ್ವವು ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ, ನಮ್ಮ ಸಮಾಜಕ್ಕೂ ಮುಖ್ಯ” ಎಂದು ಕೈಗಾರಿಕೋದ್ಯಮಿಗಳು, ತಂತ್ರಜ್ಞಾನ ಮುಖಂಡರುಗಳನ್ನು ಉದ್ದೇಶಿಸಿ ಪತ್ರದಲ್ಲಿ ಬರೆಯಲಾಗಿದೆ.

“ಇಂದು ನಿಮ್ಮ ಜವಾಬ್ದಾರಿ ಆರ್ಥಿಕ ಯಶಸ್ಸನ್ನು ಮೀರಿ ನೈತಿಕ ನಾಯಕತ್ವ ಮತ್ತು ಅಂತರ್ಗತ ಅಭಿವೃದ್ಧಿಯೆಡೆ ಸಾಗಬೇಕಿದೆ. ಈ ಕ್ಷಣದಲ್ಲಿ, ಮೌನವು ನೀವು ತಟಸ್ಥರಾಗಿದ್ದೀರಿ ಎಂಬ ಅಭಿಪ್ರಾಯ ಮೂಡಿಸದು, ಇದೂ ಪ್ರಭಾವವಾಗಿದೆ. ಕಾನೂನು, ಪಾರದರ್ಶಕತೆಗಾಗಿ ಮಾತ್ರವಲ್ಲ ನ್ಯಾಯಯುತ, ಅಂತರ್ಗತ ಮತ್ತು ಸುಸ್ಥಿರ ಅಭಿವೃದ್ಧಿಯ ನಿಟ್ಟಿನಲ್ಲಿ ಮಾತನಾಡುವ ಸಮಯ ಇದಾಗಿದೆ” ಎಂದು ಹೇಳಲಾಗಿದೆ.

“ಆದ್ದರಿಂದ ಕರ್ನಾಟಕದ ಆರ್ಥಿಕತೆಯ ಆಧಾರಸ್ತಂಭಗಳಾದ ನೀವು ಈ ಕ್ಷಣವನ್ನು ಗುರುತಿಸಿ ದೇವನಹಳ್ಳಿಯ ರೈತರೊಂದಿಗೆ ನಿಲ್ಲಬೇಕೆಂದು ಒತ್ತಾಯಿಸುತ್ತೇವೆ. ನ್ಯಾಯಯುತ, ಹೆಚ್ಚು ಸಮತೋಲಿತ ಅಭಿವೃದ್ಧಿ ಮಾದರಿಗಾಗಿ ನೀವು ಎತ್ತುವ ಧ್ವನಿಯು ಚಳುವಳಿಯನ್ನು ಬಲ ನೀಡಲಿ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಬೆಳವಣಿಗೆಯು ಎಂದಿಗೂ ಬೆಳವಣಿಗೆಯನ್ನು ಉಳಿಸಿಕೊಳ್ಳುವವರನ್ನು ಅಳಿಸಬಾರದು. ನಿಮ್ಮ ನಾಯಕತ್ವವು ಆತ್ಮಸಾಕ್ಷಿ, ಸಮಾನತೆ ಮತ್ತು ನ್ಯಾಯಯುತ ಭವಿಷ್ಯಕ್ಕಾಗಿ ನಿಲ್ಲುವುದು ಮುಖ್ಯ. ಫಲವತ್ತಾದ ಕೃಷಿಯೋಗ್ಯ ಭೂಮಿಯನ್ನು ಕೈಗಾರಿಕಾ ಬಳಕೆಗೆ ನೀಡುವುದನ್ನು ವಿರೋಧಿಸುವ ಮೂಲಕ ಮತ್ತು ಕೈಗಾರಿಕಾ ಕಾರಿಡಾರ್‌ಗಳನ್ನು ಕೃಷಿಗೆ ಯೋಗ್ಯವಲ್ಲದ ಭೂಮಿಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಒತ್ತಾಯಿಸುವ ಮೂಲಕ ನೀವು ಆಹಾರ ಭದ್ರತೆಯನ್ನು ರಕ್ಷಿಸಬೇಕು” ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟ:  ಜು.2ಕ್ಕೆ ಸಂತ್ರಸ್ತ ರೈತರಿಂದ  ಉಪವಾಸ ಸತ್ಯಾಗ್ರಹ-ವೀಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...