Homeಚಳವಳಿಅಗತ್ಯ ಸರಕು ಕಾಯ್ದೆ ಪರ ಸ್ಥಾಯಿ ಸಮಿತಿ: ರೈತ ವಿರೋಧಿ ನಡೆ ಎಂದು ಕಿಸಾನ್‌ ಸಭಾ...

ಅಗತ್ಯ ಸರಕು ಕಾಯ್ದೆ ಪರ ಸ್ಥಾಯಿ ಸಮಿತಿ: ರೈತ ವಿರೋಧಿ ನಡೆ ಎಂದು ಕಿಸಾನ್‌ ಸಭಾ ಆಕ್ರೋಶ

- Advertisement -
- Advertisement -

ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 ಅನ್ನು ಜಾರಿಗೆ ತರಲು ಆಹಾರ, ಗ್ರಾಹಕ ವ್ಯವಹಾರ ಮತ್ತು ಪಿಡಿಎಸ್ ಕುರಿತ ಸ್ಥಾಯಿ ಸಮಿತಿಯ ಶಿಫಾರಸನ್ನು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ತೀವ್ರವಾಗಿ ಖಂಡಿಸಿದೆ.

ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಭಾರತ ಕಿಸಾನ ಸಭಾ, ಸ್ಥಾಯಿ ಸಮಿತಿಯ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದೆ. ಇದು ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರಿಗೆ  ಮತ್ತು  ಈ ಹೋರಾಟದ 300 ಹುತಾತ್ಮರಿಗೆ ಮಾಡಿದ ಅವಮಾನ ಎಂದು ಎಐಕೆಎಸ್ ಅಧ್ಯಕ್ಷ ಅಶೋಕ್ ಧವಾಲೆ, ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ತಿಳಿಸಿದ್ದಾರೆ.

2020 ರ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ ಜಾರಿಗೆ ತರಲು ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ನೇತೃತ್ವದ ಆಹಾರ, ಗ್ರಾಹಕ ವ್ಯವಹಾರ ಮತ್ತು ಪಿಡಿಎಸ್ ಸ್ಥಾಯಿ ಸಮಿತಿಯ ಶಿಫಾರಸನ್ನು ಎಐಕೆಎಸ್ ಖಂಡಿಸಿದೆ. ಈ ಸ್ಥಾಯಿ ಸಮಿತಿಯ ಈ ಶಿಫಾರಸು ರೈತರು ಮತ್ತು ಜನಸಾಮಾನ್ಯರ ವಿರುದ್ಧದ  ಮನೋಭಾವನೆ ಹೊಂದಿದೆ. ನಮ್ಮ ದೇಶ, ನಮ್ಮ ರೈತರು, ಐತಿಹಾಸಿಕ ಹೋರಾಟದ ಸುಮಾರು 300 ಹುತಾತ್ಮರಿಗೆ ಮಾಡಿದ ಅವಮಾನವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ಮೂರು ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸುವುದಾಗಿ ಹೇಳಿಕೊಳ್ಳುವ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ  ಅದೇ ರೀತಿಯ ನಿರ್ಣಯವನ್ನು ಅಂಗೀಕರಿಸಿದ ಟಿಎಂಸಿ ತನ್ನ ನಾಯಕನ ನೇತೃತ್ವದ ಸಮಿತಿಯು ರೈತರಿಗೆ ದ್ರೋಹ ಎಸಗುವ  ಶಿಫಾರಸನ್ನು ಹೇಗೆ ನೀಡಿದೆ ಎಂಬುದನ್ನು ವಿವರಿಸಬೇಕು ಎಂದಿದೆ.

“ಕೆಲವು ಅನಿವಾರ್ಯತೆ” ಯಿಂದಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಬಂಡೋಪಾಧ್ಯಾಯ 2021 ಮಾರ್ಚ್ 18 ರಂದು ನಡೆದ ಕೊನೆಯ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.  ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಅಜಯ್ ಮಿಶ್ರಾ ಟೆನಿ ಅವರ ಅಡಿಯಲ್ಲಿ ವರದಿಯನ್ನು ಅಂಗೀಕರಿಸಿದ್ದು ಜನದ್ರೋಹವಾಗಿದೆ ಎಂದು ಟಿಎಂಸಿ ಮತ್ತು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಮುಖ್ಯ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಸಮಿತಿಯ ಇತರ ಪಕ್ಷಗಳು ತಮ್ಮ ಸದಸ್ಯರು ಅಂತಹ ಶಿಫಾರಸನ್ನು ಹೇಗೆ ಅನುಮತಿಸಿದ್ದಾರೆ ಎಂಬುದಕ್ಕೆ ಉತ್ತರಿಸಬೇಕಾದ ಜರೂರು ಇದೆ ಕಿಸಾನ್ ಸಭಾ ಆಗ್ರಹಿಸಿದೆ.

ಇದನ್ನೂ ಓದಿ: ಅಸ್ಸಾಂ ವಿಧಾನಸಭಾ ಚುನಾವಣೆ – ಕಾಂಗ್ರೆಸ್ ಪ್ರಣಾಳಿಕೆ ಇಂದು ಬಿಡುಗಡೆ; ನೀಡಿದ ಭರವಸೆಗಳೇನು?

ಸ್ಥಾಯಿ ಸಮಿತಿ ವರದಿಯು ” ಈ ಕಾಯ್ದೆಯು ಕೃಷಿ ಕ್ಷೇತ್ರದಲ್ಲಿ ಅಪಾರ ಬಳಕೆಯಾಗದ ಸಂಪನ್ಮೂಲಗಳನ್ನು ಬಳಸುವ ಮೂಲಕ  ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ, ಇದು ವರ್ಧಿತ ಹೂಡಿಕೆಗಳಿಗೆ ವಾತಾವರಣವನ್ನು ಸೃಷ್ಟಿಸುತ್ತದೆ, ಕೃಷಿ ಮಾರುಕಟ್ಟೆಯಲ್ಲಿ ನ್ಯಾಯಯುತ ಮತ್ತು ಉತ್ಪಾದಕ ಸ್ಪರ್ಧೆ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ” ಎಂದು ಸ್ಥಾಯಿ ಸಮಿತಿ ನೀಡಿರುವ ಸಮರ್ಥನೆಯನ್ನು ಕಿಸಾನ್ ಸಭಾ ಪ್ರಶ್ನಿಸಿದೆ.

’ಇದು ಶುದ್ಧ ಸುಳ್ಳು. ರೈತರ ಸಂಘಟನೆಗಳು ಮತ್ತು ಸಂಯುಕ್ತಾ ಕಿಸಾನ್ ಮೋರ್ಚಾ ತೋರಿಸಿ ಕೊಟ್ಟಂತೆ ಇದು ಸಂಪೂರ್ಣವಾಗಿ ಸುಳ್ಳು ಮತ್ತು ವಾಸ್ತವದಿಂದ ದೂರವಿದೆ. ಇದು ಕಾರ್ಪೊರೇಟ್ ಹೂಡಿಕೆ  ಮತ್ತು ಕಾಳಸಂತೆ ಮಾರುಕಟ್ಟೆಗೆ ಅವಕಾಶ ನೀಡುತ್ತದೆ. ಇದರಿಂದಾಗಿ ಕೃತಕ ಕೊರತೆ ಸೃಷಿಯಾಗುತ್ತದೆ ಮತ್ತು ರೈತರಿಗೆ ಯಾವುದೇ ಪ್ರಯೋಜನವಿಲ್ಲದೆ ಜನಸಾಮಾನ್ಯರಿಗೆ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಇದು ಅಂತಿಮವಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ತೆಗೆದುಹಾಕುತ್ತದೆ’ ಎಂದು ಕಿಸಾನ್ ಸಭಾ ಆರೋಪಿಸಿದೆ.

ಈ ಶಿಫಾರಸು ಸ್ವೀಕಾರಾರ್ಹವಲ್ಲ ಮತ್ತು ಮೂರು ರೈತ ವಿರೋಧಿ ಕಾಯ್ದೆಗಳನ್ನು ಸಾರ್ವಜನಿಕವಾಗಿ ವಿರೋಧಿಸುವುದಾಗಿ ಹೇಳಿಕೊಳ್ಳುವ ಆದರೆ ಅಂತಹ ಶಿಫಾರಸಿಗೆ ಕಾರಣವಾಗಿರುವ  ಪಕ್ಷಗಳ ಬೂಟಾಟಿಕೆಗಳನ್ನು ಬಹಿರಂಗಪಡಿಸುವಂತೆ ನಾವು ರೈತರಿಗೆ ಕರೆ ನೀಡುತ್ತೇವೆ ಎಂದಿದೆ.

ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ ರೈತ ವಿರೋಧಿ, ಕಾರ್ಪೊರೇಟ್ ಪರ ನೀತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಸ್ಥಾಯಿ ಸಮಿತಿಯ ಶಿಫಾರಸನ್ನು ವಿರೋಧಿಸಲು ದೇಶದ ರೈತರು ಮತ್ತು ಜನಸಾಮಾನ್ಯರಿಗೆ ಎಐಕೆಎಸ್ ಕರೆ ನೀಡಿದೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...