Homeಚಳವಳಿಒಂದು ವಿವಾದಾತ್ಮಕ ಕೃಷಿ ಕಾನೂನು ಜಾರಿಗೆ ಸೂಚಿಸಿದ ಸ್ಥಾಯಿ ಸಮಿತಿ!

ಒಂದು ವಿವಾದಾತ್ಮಕ ಕೃಷಿ ಕಾನೂನು ಜಾರಿಗೆ ಸೂಚಿಸಿದ ಸ್ಥಾಯಿ ಸಮಿತಿ!

- Advertisement -
- Advertisement -

ಬಿಜೆಪಿ, ಕಾಂಗ್ರೆಸ್, ಟಿಎಂಸಿ, ಎಎಪಿ, ಎನ್‌ಸಿಪಿ ಮತ್ತು ಶಿವಸೇನೆ ಸೇರಿದಂತೆ 13 ಪಕ್ಷಗಳ ಸದಸ್ಯರನ್ನು ಹೊಂದಿರುವ ಆಹಾರ, ಗ್ರಾಹಕ ವ್ಯವಹಾರ ಮತ್ತು ಸಾರ್ವಜನಿಕ ವಿತರಣೆಯ ಸ್ಥಾಯಿ ಸಮಿತಿ -2020ರ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ ಜಾರಿಗೆ ತರಲು ಸರ್ಕಾರವನ್ನು ಕೋರಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೇಶದಾದ್ಯಂತ ರೈತರು ಪ್ರತಿಭಟಿಸುತತ್ತಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳಲ್ಲಿ ಈ ಕಾಯಿದೆಯು ಒಂದು. ಈ ಹೆಚ್ಚಿನ ಪಕ್ಷಗಳ ನಾಯಕರು ಈ ಎಲ್ಲಾ ಮೂರು ಕಾನೂನುಗಳಿಗೆ ವಿರುದ್ಧವಾಗಿವೆ, ಅವುಗಳನ್ನು ರದ್ದುಗೊಳಿಸಬೇಕೆಂದು ಬಯಸಿವೆ ಎಂಬುದನ್ನು ಇಲ್ಲಿ ಗಮನಿಸಬೇಕು.

ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಲಾದ ತನ್ನ ವರದಿಯಲ್ಲಿ, ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ ನೇತೃತ್ವದ ಸಮಿತಿಯು, ಇತ್ತೀಚೆಗೆ ಜಾರಿಗೆ ತಂದಿರುವ ’ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020’ ಅನ್ನು ಸರ್ಕಾರ ಜಾರಿಗೆ ತರುತ್ತದೆ “ಎಂದು ಆಶಿಸಿದ್ದೇವೆ ಎಂದಿದೆ. ಈ ಕಾಯಿದೆಯು  ವರ್ಧಿತ ಹೂಡಿಕೆಗಳಿಗೆ ವಾತಾವರಣವನ್ನು ಸೃಷ್ಟಿಸುವ ಮೂಲಕ ಕೃಷಿ ಕ್ಷೇತ್ರದಲ್ಲಿ ಬಳಕೆಯಾಗದ ಅಪಾರ ಸಂಪನ್ಮೂಲಗಳನ್ನು ಬಳಕೆ  ಮಾಡಲು ವೇಗವರ್ಧಕವಾಗಲಿದೆ. ಕೃಷಿ ವ್ಯಾಪಾರೋದ್ಯಮದಲ್ಲಿ ನ್ಯಾಯಯುತ ಮತ್ತು ಉತ್ಪಾದಕ ಸ್ಪರ್ಧೆ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ ಎಂದಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

ಸಮಿತಿಯು ಸರ್ಕಾರಕ್ಕೆ “ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ, 2020 ಅನ್ನು ಜಾರಿಗೆ ತರಲು ಮತ್ತು ಯಾವುದೇ ಅಡೆತಡೆಗಳಿಲ್ಲದೆ ಈ ದೇಶದ ಕೃಷಿ ಕ್ಷೇತ್ರದ ರೈತರು ಮತ್ತು ಇತರ ಮಧ್ಯಸ್ಥಗಾರರಿಗೆ ಉದ್ದೇಶಿಸಿರುವ ಪ್ರಯೋಜನಗಳನ್ನು ಪಡೆಯಲು ನೆರವಾಗಬೇಕು’ ಎಂದು ಹೇಳಿದೆ.

30 ಸದಸ್ಯರ ಸಮಿತಿಯು ಉಭಯ ಸದನಗಳಿಂದ 13 ಪಕ್ಷಗಳಿಂದ ಸದಸ್ಯರನ್ನು ಹೊಂದಿದೆ. ಅಂದರೆ, ಎಎಪಿ, ಬಿಜೆಪಿ, ಕಾಂಗ್ರೆಸ್, ಡಿಎಂಕೆ, ಜೆಡಿಯು, ನಾಗ ಪೀಪಲ್ಸ್ ಫ್ರಂಟ್, ನ್ಯಾಷನಲ್ ಕಾನ್ಫರೆನ್ಸ್, ಎನ್‌ಸಿಪಿ, ಪಿಎಂಕೆ, ಶಿವಸೇನೆ, ಎಸ್‌ಪಿ, ಟಿಎಂಸಿ, ವೈ.ಎಸ್.ಆರ್.ಸಿ.ಪಿ. ಪಕ್ಷಗಳಿಂದ ತಲಾ ಒಬ್ಬ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ಹೇರುವುದಿಲ್ಲ- ಸಿಎಂ ಯಡಿಯೂರಪ್ಪ

ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಜನವರಿ 12 ರಂದು ಸುಪ್ರೀಂ ಕೋರ್ಟ್ ಮೂರು ಕೃಷಿ ಕಾನೂನುಗಳ ಅನುಷ್ಠಾನವನ್ನು ತಡೆಹಿಡಿದ ನಂತರ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲು ಸಮಿತಿಯ ಶಿಫಾರಸು ಬಂದಿದೆ. ಇತರ ಎರಡು ಕಾನೂನುಗಳು: ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, 2020, ಮತ್ತು ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ, 2020 ರ ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದಗಳು.

ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಮುಂದಿನ ದಿನಗಳಲ್ಲಿ ತನ್ನ ಶಿಫಾರಸುಗಳನ್ನು ನೀಡುವ ನಿರೀಕ್ಷೆಯಿದೆ. ಸರ್ಕಾರ ಮತ್ತು ಆಂದೋಲನ ನಡೆಸುತ್ತಿರುವ ರೈತ ಸಂಘಗಳ ನಡುವೆ ಹಲವಾರು ಸುತ್ತಿನ ಮಾತುಕತೆಗಳು ಸಮಸ್ಯೆ ಕೊನೆಗೊಳಿಸಲು ವಿಫಲವಾಗಿವೆ.

ಸ್ಥಾಯಿ ಸಮಿತಿಯು “ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳ ಬಗ್ಗೆ ನಿರಂತರವಾಗಿ ಗಮನವಿರಲಿ” ಎಂದು ಸರ್ಕಾರವನ್ನು ಕೇಳಿದೆ.

ಮಾರ್ಚ್ 18 ರಂದು ನಡೆದ ಸಮಿತಿಯ ಕೊನೆಯ ಸಭೆಯಲ್ಲಿ ಅಧ್ಯಕ್ಷ ಬಂಡ್ಯೋಪಾಧ್ಯಾಯರಿಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಸಭೆಯು ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಅಜಯ್ ಮಿಶ್ರಾ ಟೆನಿ ಅವರ ಅಡಿಯಲ್ಲಿ ವರದಿಯನ್ನು ಅಂಗೀಕರಿಸಲಾಗಿದೆ.


ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಷ್ಟ್ರದ ಭದ್ರತೆಗೆ ಬೆದರಿಕೆಯಾಗಿರುವ ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು: ಸುಪ್ರೀಂ

0
ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಇಡೀ ರಾಷ್ಟ್ರದ ಎದುರು ಕ್ಷಮೆ ಕೇಳಬೇಕೆಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ತನ್ನ ಮೇಲೆ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳನ್ನು ಒಂದೇ ಎಫ್‌ಐಆರ್‌ಗೆ ವರ್ಗಾಹಿಸುವಂತೆ...