Homeಚಳವಳಿ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ - ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

ಮೋದಿ ಮತ್ತು ಶಾ ಅವರ ಕೈಯಲ್ಲಿ ಫಾದರ್‌ ಸ್ಟಾನ್ ಸ್ವಾಮಿಯ ರಕ್ತವಿದೆ. ದೇಶ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಭೀಮಾಕೊರೆಗಾಂವ್‌ ಪ್ರಕರಣದಲ್ಲಿ ಬಂಧಿತರಾಗಿದ್ದ 84 ವರ್ಷದ ಹಿರಿಯ ಸಾಮಾಜಿಕ ಹೋರಾಟಗಾರ ಫಾದರ್‌ ಸ್ಟಾನ್‌ ಸ್ವಾಮಿಯವರು ಮೃಪಟ್ಟಿದ್ದಾರೆ. ಇಂದು ಮಧ್ಯಾಹ್ನ 1:30 ಗಂಟೆಗೆ ಸ್ಟ್ಯಾನ್‌ ಸ್ವಾಮಿ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಪರ ವಾದಿಸುತ್ತದ್ದ ನ್ಯಾಯವಾದಿ ಮಿನಿ ದೇಸಾಯಿ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದ್ದು, “ಇದು ಒಕ್ಕೂಟ ಸರ್ಕಾರ ಪ್ರಾಯೋಜಿತ ಕೊಲೆ” ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಯಾಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದರು. ಅವರು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ NIA ಕಳೆದ ವರ್ಷ ಬಂಧಿಸಿತ್ತು. ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಸ್ಟ್ಯಾನ್ ಸ್ವಾಮಿಯ ಮೇಲೆ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಕಠಿಣ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿತ್ತು.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಸ್ಟ್ಯಾನ್ ಸ್ವಾಮಿ ವಿಸ್ತಾಪನ್ ವಿರೋಧಿ ಜನವಿಕಾಸ್ ಆಂದೋಲನ್ (ವಿ.ವಿ.ಜೆ.ಎ) ಸಂಘಟನೆಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಅವರು ಜಾರ್ಖಂಡ್‌ನ ಅತ್ಯಂತ ಶ್ರೇಷ್ಠ ಮಾನವ ಹಕ್ಕುಗಳ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ. ಸ್ಟ್ಯಾನ್ ಸ್ವಾಮಿ ಅವರು ಪಾರ್ಕಿನ್ಸನ್‌ ಸೇರಿದಂತೆ ಹಲವು ರೀತಿಯ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯಾಗಿದ್ದರು.

ಅವರ ಸಾವಿಗೆ ದೇಶದ ಹಲವಾರು ಚಿಂತಕರು, ಹೋರಾಟಗಾರರು, ಗಣ್ಯವ್ಯಕ್ತಿಗಳು, ಸಾಮಾಜಿಕ ಕಾರ್ಯಕರ್ತರು ಸಂತಾಪ ವ್ಯಕ್ತಪಡಿಸಿದ್ದು, ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸ ಅವರು, “ಸ್ಟಾನ್ಸ್‌ಸ್ವಾಮಿಯವರ ನಿಧನ ಮೋದಿ ಮತ್ತು ಷಾ ಸರ್ಕಾರದ ಸರ್ಕಾರಿ ಪ್ರಾಯೋಜಿತ ರಾಜಕೀಯ ಕೊಲೆಯಾಗಿದೆ. ಅದನ್ನು ಬೇರೇನೂ ಕರೆಯಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂಕೋರ್ಟ್‌ ತುರ್ತು ವಿಚಾರಣೆ ನಡೆಸಿ, ‘ವ್ಯಕ್ತಿ ಸ್ವಾತಂತ್ಯ್ರ’ ಎಂದು ಹೇಳಿ ಅರ್ನಾಬ್ ಗೋಸ್ವಾಮಿಗೆ 7 ದಿನಗಳಲ್ಲಿ ಜಾಮೀನು ನೀಡಿತು. 84 ಸ್ಟಾನ್ ಸ್ವಾಮಿ ಬಂಧನವಾಗಿ 7 ತಿಂಗಳಾದರೂ ಜಾಮೀನು ನಿರಾಕರಿಸಲಾಯಿತು. ಪಾರ್ಕಿನ್ಸನ್ ಕಾಯಿಲೆಯಿಂದ  ಅವರು ಬಳಲುತ್ತಿದ್ದ ಅವರು ವ್ಯಕ್ತಿ ಸ್ವಾತಂತ್ಯ್ರ ಇಲ್ಲದ ರಾಜಕೀಯ ಕೈದಿಯಾಗಿ ಕೊರೊನಾ ಪಡೆದರು! ಒಂದು ರಾಷ್ಟ್ರ, ಒಂದು ಕಾನೂನು ಆದರೆ ನ್ಯಾಯವಿಲ್ಲ” ಎಂದು ಶ್ರೀವತ್ಸ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, “ಫಾದರ್‌‌ ಸ್ಟಾನ್ ಸ್ವಾಮಿ ಅವರ ನಿಧನದ ಸುದ್ದಿಯನ್ನು ತಿಳಿದು ದುಃಖವಾಯಿತು. ನಮ್ಮ ಸರ್ಕಾರವು ಮಾನವೀಯತೆಯೊಂದಿಗೆ ನಡೆಸಿಕೊಳ್ಳಲು ಸಾಧ್ಯವಾಗದ ಮಾನವೀಯ ಮತ್ತು ದೇವತಾ ಮನುಷ್ಯ” ಎಂದು ಹೇಳಿದ್ದಾರೆ.

ಡಿಎಂಕೆ ನಾಯಕಿ ಕನಿಮೋಳಿ ಅವರು, “ಪಾರ್ಕಿನ್ಸನ್‌ನಿಂದ ಬಳಲುತ್ತಿದ್ದ ಸ್ಟಾನ್ ಸ್ವಾಮಿ (84) ಅವರನ್ನು ಬಿಜೆಪಿ ಸರ್ಕಾರ ದೇಶ ವಿರೋಧಿ ಎಂದು ಬಂಧಿಸಿದೆ. ಅವರ ಆರೋಗ್ಯ ಪರಿಸ್ಥಿತಿಗಳನ್ನು ಎಂದಿಗೂ ಪರಿಗಣಿಸಲಾಗಲಿಲ್ಲ. ಅವರು ಕೋಮಾಕ್ಕೆ ಜಾರಿ ನಿಧನರಾದರು.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಹಲವು ತಿಂಗಳು ಕಾಯಬೇಕು!

ರೈತ ಹೋರಾಟಗಾರ ಯೋಗೇಂದ್ರ ಯಾದವ್ ಅವರು, “ಫಾದರ್ ಸ್ಟಾನ್ ಸ್ವಾಮಿಯವರ ಸಾವಿನ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ಎನ್ಐಎ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಬಿಜೆಪಿ ಮತ್ತು ನ್ಯಾಯಾಂಗದಿಂದ ಆದ ತಣ್ಣನೆಯ ಕ್ರೌರ್ಯ‌ ಇದು. ಈ ದೇಶದ ಅತ್ಯಂತ ತುಳಿತಕ್ಕೊಳಗಾದ ಜನರ ಪರವಾಗಿ ಹೋರಾಡಿದ ಮಾನವೀಯ ವ್ಯಕ್ತಿಯನ್ನು ಈ ರೀತಿ ಹತ್ಯೆ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋರಾಟಗಾರ್ತಿ ಮೀನಾ ಕಂದಸಾಮಿ ಅವರು, “ನ್ಯಾಯಾಂಗದ ಕೈಯಲ್ಲಿ ರಕ್ತ. ಆರ್‌ಎಸ್‌ಎಸ್-ಬಿಜೆಪಿಯ ಕೈಯಲ್ಲಿ ರಕ್ತ. ಎನ್ಐಎ ಕೈಯಲ್ಲಿ ರಕ್ತ. ರಾಜ್ಯದ ಪರವಾಗಿ ಪ್ರೊಪಗಾಂಡ ನಡೆಸಿದ ಮಾಧ್ಯಮಗಳ ಕೈಯಲ್ಲಿ ರಕ್ತ. ಇದರಿಂದ ಪಾರಾಗಲು ಮೋದಿ-ಷಾಗೆ ಅವಕಾಶ ನೀಡುವ ಪ್ರತಿಪಕ್ಷದ ಕೈಯಲ್ಲಿ ರಕ್ತ. ನಮ್ಮೆಲ್ಲರ ಕೈಯಲ್ಲಿ ರಕ್ತ.” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಗುಜರಾತ್‌ ಶಾಸಕ, ಯುವ ಹೋರಾಟಗಾರ ಜಿಗ್ನೇಶ್ ಮೇವಾನಿ ಅವರು, ‘‘ಫಾದರ್‌ ಸ್ಟಾನ್ ಸ್ವಾಮಿ ಎಂದಿಗೂ ಸಾಯುವುದಿಲ್ಲ. ಅವರು ವೀರರಾಗಿ ನಮ್ಮ ಹೃದಯದಲ್ಲಿ ಜೀವಿಸುವರು. ಫ್ಯಾಸಿಸ್ಟ್ ಮೋದಿ ಸರ್ಕಾರದ ವಿರುದ್ಧ ನಿಂತು ಜೀವನವನ್ನೇ ವ್ಯಯಿಸಿದ ಧೈರ್ಯಶಾಲಿ ಅವರು. ಮೋದಿ ಮತ್ತು ಶಾ ಅವರ ಕೈಯಲ್ಲಿ ಫಾದರ್‌ ಸ್ಟಾನ್ ಸ್ವಾಮಿಯ ರಕ್ತವಿದೆ. ದೇಶ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಜನತಾಕಾ ರಿಪೋರ್ಟ್‌ ಸಂಸ್ಥಾಪಕ ರಿಫಾತ್‌‌ ಜಾವೇದ್, “ಫಾದರ್ ಸ್ಟಾನ್ ಸ್ವಾಮಿಯ ಸಾವಿನ ಬಗ್ಗೆ ಬಾಂಬೆ ಹೈಕೋರ್ಟ್ ‘ನಮಗೆ ವ್ಯಕ್ತಪಡಿಸಲು ಪದಗಳಿಲ್ಲ’ ಎಂದು ಹೇಳಿದೆ. ಭಾರತೀಯ ನ್ಯಾಯಾಂಗದ ಬಗ್ಗೆ ಇತಿಹಾಸದಲ್ಲಿ ಹೇಳಲು ಈ ಮಾತುಗಳು ಸಾಕಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಜೆಎನ್‌ಯು ನಾಯಕಿ ಐಶೆ ಘೋಷ್, “ಇದು ಕಸ್ಟೋಡಿಯಲ್ ಕೊಲೆ. ಪಾದರ್‌ ಸ್ವಾಮಿ ಹಿಂದುಳಿದ ಸಮುದಾಯಗಳಿಗಾಗಿ ಜೀವನದುದ್ದಕ್ಕೂ ಕೆಲಸ ಮಾಡಿದ್ದರು. ಅವರಿಗೆ ಮೂಲಭೂತ ಅವಶ್ಯಕತೆಗಳು ಮತ್ತು ಆರೋಗ್ಯ ರಕ್ಷಣೆ ನಿರಾಕರಿಸಲಾಯಿತು. ಯುಎಪಿಎ ಹಿಂತೆಗೆದುಕೊಳ್ಳಿ, ಎಲ್ಲಾ ರಾಜಕೀಯ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್‌ ಖೈದಿಗಳ ಬಿಡುಗಡೆ ಮಾಡಿ-ಮೋದಿಗೆ ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಯುರೋಪಿಯನ್‌ ಸಂಸದರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...