Homeಕರ್ನಾಟಕಚುನಾವಣಾ ಅಖಾಡದಲ್ಲಿ ಸ್ಟಾರ್ ಪ್ರಚಾರಕರ ದಂಡು; ಕೈ-ದಳ-ಕಮಲದ ತಾರಾಗಣ ಪಟ್ಟಿ ಬಿಡುಗಡೆ

ಚುನಾವಣಾ ಅಖಾಡದಲ್ಲಿ ಸ್ಟಾರ್ ಪ್ರಚಾರಕರ ದಂಡು; ಕೈ-ದಳ-ಕಮಲದ ತಾರಾಗಣ ಪಟ್ಟಿ ಬಿಡುಗಡೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡಕ್ಕೆ ಇಳಿಯಲು ಸ್ಟಾರ್ ಪ್ರಚಾರಕರು ಸಿದ್ಧರಾಗಿದ್ದಾರೆ. ರಾಜ್ಯದ ಪ್ರಮುಖ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳಗಳ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿವೆ. ಕಾಂಗ್ರೆಸ್‌ ಮತ್ತು ಬಿಜೆಪಿ ತಲಾ 40 ನಾಯಕರನ್ನೊಳಗೊಂಡ ಪಟ್ಟಿ ಬಿಡುಗಡೆ ಮಾಡಿದ್ದರೆ, ಜೆಡಿಎಸ್‌ 27 ನಾಯಕರ ಪಟ್ಟಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರಲ್ಲಿ ಸೋನಿಯಾ, ರಾಹುಲ್, ಖರ್ಗೆ, ಶೆಟ್ಟರ್‌, ರಮ್ಯಾ..

ಕರ್ನಾಟಕ ವಿಧಾನಸಭಾ ಚುನಾವಣೆಗೆ 40 ತಾರಾ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್‌ ಬುಧವಾರ ಬಿಡುಗಡೆ ಮಾಡಿದೆ.

ಇತ್ತೀಚೆಗೆ ಬಿಜೆಪಿಯಿಂದ ಹೊರಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಹಿರಿಯ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಸ್ಥಾನ ಸಿಕ್ಕಿದೆ. ಕೆಪಿಸಿಸಿಯ ಐವರು ಕಾರ್ಯಾಧ್ಯಕ್ಷರಲ್ಲಿ ರಾಮಲಿಂಗಾ ರೆಡ್ಡಿ ಹಾಗೂ ಸತೀಶ ಜಾರಕಿಹೊಳಿ ಹೆಸರು ಮಾತ್ರ ಪಟ್ಟಿಯಲ್ಲಿ ಸೇರಿಸಲಾಗಿದೆ.

ಇನ್ನು ತೇರದಾಳ ಕ್ಷೇತ್ರದ ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದ ಉಮಾಶ್ರೀ ಹಾಗೂ ಮಾಗಡಿ ಅಥವಾ ಹರಿಹರ ಕ್ಷೇತ್ರದ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಎಚ್‌.ಎಂ. ರೇವಣ್ಣ ಅವರಿಗೆ ತಾರಾ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಿ ಸಮಾಧಾನಪಡಿಸಲಾಗಿದೆ. ನಟಿ ರಮ್ಯಾ ಹಾಗೂ ಹಾಸ್ಯನಟ ಸಾಧುಕೋಕಿಲಾ ಸಹ ಪಕ್ಷದ ತಾರಾ ಪ್ರಚಾರಕರಾಗಿದ್ದಾರೆ. ಕ್ರಿಕೆಟಿಗ ಮೊಹಮ್ಮದ್‌ ಅಜರುದ್ದೀನ್‌, ಮೂವರು ಮುಖ್ಯಮಂತ್ರಿಗಳಾದ ಅಶೋಕ್‌ ಗೆಹಲೋಟ್, ಭೂಪೇಶ್‌ ಬಘೇಲ್‌, ಸುಖ್ವಿಂದರ್‌ ಸಿಂಗ್‌ ಸುಖು ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್‌, ಜೈರಾಮ್‌ ರಮೇಶ್‌, ರಣದೀಪ್‌ ಸಿಂಗ್ ಸುರ್ಜೆವಾಲಾ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಮುಖ ತಾರಾ ಪ್ರಚಾರಕರಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ; 224 ಕ್ಷೇತ್ರಗಳ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ..

ರಾಜ್ಯ ನಾಯಕರಲ್ಲಿ ಬಿ.ಕೆ. ಹರಿಪ್ರಸಾದ್‌, ಜಿ.ಪರಮೇಶ್ವರ, ಕೆ.ಎಚ್‌.ಮುನಿಯಪ್ಪ, ಎಂ.ಬಿ.‍ಪಾಟೀಲ, ಎಂ. ವೀರಪ್ಪ ಮೊಯಿಲಿ, ಶಾಸಕ ಜಮೀರ್ ಅಹ್ಮದ್‌ ಖಾನ್‌, ಸಂಸದರಾದ ಡಿ.ಕೆ. ಸುರೇಶ್‌, ಜಿ.ಸಿ.ಚಂದ್ರಶೇಖರ್‌, ಸಯ್ಯದ್‌ ನಾಸಿರ್‌ ಹುಸೇನ್‌, ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌, ಶಾಸಕಿ ರೂಪಾ ಶಶಿಧರ್‌ ಅವರಿಗೆ ಸ್ಥಾನ ಸಿಕ್ಕಿದೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳಾದ ಪ್ರಥ್ವಿರಾಜ್‌ ಚವಾಣ್‌, ಅಶೋಕ್‌ ಚವಾಣ್ ಹಾಗೂ ತೆಲಂಗಾಣ ಕಾಂಗ್ರೆಸ್‌ ಘಟಕದ ಅಧ್ಯಕ್ಷ ರೇವಂತ್ ರೆಡ್ಡಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಕಾಂಗ್ರೆಸ್ ಹಿರಿಯ ಮುಖಂಡರಾದ ಶಶಿ ತರೂರ್, ಪಿ.ಚಿದಂಬರಂ, ರಮೇಶ್‌ ಚೆನ್ನಿತಾಲ, ರಾಜ್‌ ಬಬ್ಬರ್‌ ಹಾಗೂ ಯುವ ನಾಯಕರಾದ ಕನ್ನಯ್ಯ ಕುಮಾರ್‌, ಇಮ್ರಾನ್‌ ಪ್ರತಾಪ್‌ಗರಿ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

20 ದಿನಗಳಲ್ಲಿ 20 ಕಡೆ ರಾಹುಲ್‌ ರ‍್ಯಾಲಿ

ಮುಂದಿನ 20 ದಿನಗಳಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು 20 ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಮುಂದಿನ 3 ವಾರಗಳಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಹಲವು ಪ್ರಚಾರ ಸಭೆ, ರೋಡ್‌ ಶೋಗಳಲ್ಲಿ ಭಾಗಿಯಾಗಲಿದ್ದಾರೆ. ಮೇ ಮೊದಲ ವಾರದಲ್ಲಿ ಸೋನಿಯಾ ಗಾಂಧಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿ ಸ್ಟಾರ್ ಪ್ರಚಾರಕರಲ್ಲಿ ಮೋದಿ, ಶಾ, ಯೋಗಿಯದ್ದೇ ಸದ್ದು

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೇರಿ ಒಟ್ಟು 40 ಮಂದಿಯ ತಾರಾ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಆದರೆ, ಉಪಚುನಾವಣೆಗಳಲ್ಲಿ ತಾರಾ ಪ್ರಚಾರಕರಾಗಿ ಗಮನಸೆಳೆದಿದ್ದ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೆಸರನ್ನು ಈ ಬಾರಿ ಕೈಬಿಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್‌, ಪ್ರಲ್ಹಾದ ಜೋಶಿ, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವೀಯಾ, ಶೋಭಾ ಕರಂದ್ಲಾಜೆ, ಎ.ನಾರಾಯಣ ಸ್ವಾಮಿ, ಭಗವಂತ್‌ ಖೂಬಾ ಸ್ಟಾರ್ ಪ್ರಚಾರಕರಾಗಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ,  ಬಿ.ಎಸ್‌. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ನಳಿನ್‌ ಕುಮಾರ್‌ ಕಟೀಲ್, ಡಿ.ವಿ. ಸದಾನಂದಗೌಡ, ಕೆ.ಎಸ್‌. ಈಶ್ವರಪ್ಪ, ಗೋವಿಂದ ಕಾರಜೋಳ, ಆರ್‌. ಅಶೋಕ, ಕೆ. ಅಣ್ಣಾಮಲೈ, ಅರುಣ್ ಸಿಂಗ್‌, ಡಿ.ಕೆ. ಅರುಣಾ, ಸಿ.ಟಿ. ರವಿ, ಅರವಿಂದ ಲಿಂಬಾವಳಿ, ಬಿ. ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಬಸನಗೌಡ ಪಾಟೀಲ ಯತ್ನಾಳ್, ಡಾ. ಉಮೇಶ್‌ ಜಾಧವ್‌, ಛಲವಾದಿ ನಾರಾಯಣಸ್ವಾಮಿ, ಎನ್. ರವಿಕುಮಾರ್‌, ಜಗ್ಗೇಶ್, ಶೃತಿ, ತಾರಾ ಅನೂರಾಧ ತಾರಾ ಪ್ರಚಾರಕರ ಪಟ್ಟಿಯಲ್ಲಿ ಇದ್ದಾರೆ.

ಜೆಡಿಎಸ್ ಸ್ಟಾರ್ ಪ್ರಚಾರಕರಲ್ಲಿ ದೇವೇಗೌಡರ ಕುಟುಂಬದವರೇ ಹೆಚ್ಚು

ಜೆಡಿಎಸ್ ಪಕ್ಷವು ಚುನಾವಣಾ ಆಯೋಗದಿಂದ 27 ಸ್ಟಾರ್ ಪ್ರಚಾರಕರ ಪಟ್ಟಿಗೆ ಅನುಮೋದನೆ ಪಡೆದಿದ್ದು, ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ ಸೇರಿದಂತೆ ಅವರ ಕುಟುಂಬದ ಎಂಟು ಜನರ ಹೆಸರು ಅದರಲ್ಲಿದೆ.

ಜೆಡಿಎಸ್ ಸ್ಟಾರ್ ಪ್ರಚಾರಕರು:- ಎಚ್‌.ಡಿ. ಕುಮಾರಸ್ವಾಮಿ, ಅವರ ಪತ್ನಿ ಅನಿತಾ, ಮಗ ನಿಖಿಲ್‌ ಕುಮಾರಸ್ವಾಮಿ, ಶಾಸಕ ಎಚ್‌.ಡಿ. ರೇವಣ್ಣ, ಅವರ ಪತ್ನಿ ಭವಾನಿ, ಮಗ ಹಾಗೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ತಾರಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಇನ್ನು ಕುಟುಂಬ ಹೊತುಪಡಿಸಿ ಯಾರೆಲ್ಲಾ ಸ್ಟಾರ್ ಪ್ರಚಾರಕರು?

ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ರಾಜ್ಯಸಭೆ ಮಾಜಿ ಸದಸ್ಯ ಡಿ. ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್‌ ಸದಸ್ಯರಾದ ಟಿ.ಎ. ಶರವಣ, ಕೆ.ಎ. ತಿಪ್ಪೇಸ್ವಾಮಿ, ಎಸ್‌.ಎಲ್‌. ಭೋಜೇಗೌಡ, ಬಿ.ಎಂ. ಫಾರೂಕ್‌, ಪಕ್ಷದ ಮಹಿಳಾ ಘಟಕದ ಕಾರ್ಯಾ ಧ್ಯಕ್ಷೆ ನಜ್ಮಾ ನಝೀರ್‌ ಚಿಕ್ಕನೇರಳೆ ಪಟ್ಟಿಯಲ್ಲಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ...

0
ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ...