Homeಕರ್ನಾಟಕಸ್ಟಾರ್ ಪ್ರಚಾರಕರು ಘನತೆಯಿಂದ ಮಾತನಾಡಬೇಕು: ಚುನಾವಣಾ ಆಯೋಗದಿಂದ ಪಕ್ಷಗಳಿಗೆ ಖಡಕ್ ಸೂಚನೆ

ಸ್ಟಾರ್ ಪ್ರಚಾರಕರು ಘನತೆಯಿಂದ ಮಾತನಾಡಬೇಕು: ಚುನಾವಣಾ ಆಯೋಗದಿಂದ ಪಕ್ಷಗಳಿಗೆ ಖಡಕ್ ಸೂಚನೆ

- Advertisement -
- Advertisement -

ಚುನಾವಣಾ ಆಯೋಗವು ಮಂಗಳವಾರ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ನಾಯಕರು ಭಾಷೆಯ ಘನತೆಯನ್ನು ಮರೆಯುತ್ತಿರುವುದು ಹಲವು ಬಾರಿ ಕಂಡು ಬಂದಿದೆ. ನಾಯಕರ ಅವಹೇಳನಕಾರಿ ಹೇಳಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಚುನಾವಣಾ ಆಯೋಗ ಇದೀಗ ಸ್ಟಾರ್ ಪ್ರಚಾರಕರು ಮತ್ತು ಪಕ್ಷಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಚುನಾವಣಾ ಸಮಿತಿಯು ಪಕ್ಷಗಳ ಸ್ಟಾರ್ ಪ್ರಚಾರಕರನ್ನು ಸಂಯಮದಿಂದ ಮತ್ತು “ನಿರೀಕ್ಷಿತ ಮಟ್ಟದ ಘನತೆಯನ್ನು” ಕಾಪಾಡಿಕೊಳ್ಳುವಂತೆ ಹೇಳಿದೆ.

ರಾಜಕೀಯ ಪಕ್ಷಗಳು ಮತ್ತು ನಿರ್ದಿಷ್ಟವಾಗಿ ಅವರ ಸ್ಟಾರ್ ಪ್ರಚಾರಕರು ಪ್ರಚಾರದ ಸಂದರ್ಭದಲ್ಲಿ ಅನುಚಿತ ಭಾಷೆ ಬಳಸಿದ ನಿದರ್ಶನಗಳ ಬಗ್ಗೆ ಗಮನಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

”ಇಂತಹ ನಿದರ್ಶನಗಳಿಗೆ ಸಂಬಂಧಿಸಿದಂತೆ ವಿವಿಧ ದೂರುಗಳು, ಪ್ರತಿ ದೂರುಗಳು ಬಂದಿವೆ” ಎಂದು ಹೇಳಿದೆ. ಏಪ್ರಿಲ್ 28 ರಂದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಯನ್ನು “ವಿಷಪೂರಿತ ಹಾವು” ಗೆ ಹೋಲಿಸಿದ ನಂತರ ಭಾರತೀಯ ಜನತಾ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ತನ್ನನ್ನು ನಿಂದಿಸುತ್ತಿದ್ದಾರೆಂದು ಅಳುವ ಪ್ರಧಾನಿಯನ್ನು ನೋಡುತ್ತಿದ್ದೇವೆ: ಮೋದಿಯನ್ನು ಗೇಲಿ ಮಾಡಿದ ಪ್ರಿಯಾಂಕಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಕೋಮು ಸೌಹಾರ್ದತೆಯ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಅವರ ಪ್ರಚಾರವನ್ನು ನಿಷೇಧಿಸುವಂತೆ ಕಾಂಗ್ರೆಸ್ ಸಹ ಕೋರಿತ್ತು.

ಕಳೆದ ವಾರ, ಉತ್ತರ ಕರ್ನಾಟಕದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿಯವರು ತಮ್ಮ ಭಾಷಣದ ಸಾಕಷ್ಟು ಸಮಯವನ್ನು “ವಿಷಪೂರಿತ ಹಾವು” ವಿಚಾರಕ್ಕೆ ಸಂಬಂಧಿಸಿದಂತೆ ಸಮಯ ಮೀಸಲಿಟ್ಟರು ಮತ್ತು ಕಾಂಗ್ರೆಸ್ ತನ್ನನ್ನು 91 ಬಾರಿ ವಿವಿಧ ರೀತಿಯಲ್ಲಿ ನಿಂದಿಸಿದೆ ಎಂದು ಹೇಳಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಅವರು ತಮ್ಮ ಬಗ್ಗೆ ಮಾತನಾಡುವುದಕ್ಕಿಂತ ಕರ್ನಾಟಕದ ಭವಿಷ್ಯದ ಬಗ್ಗೆ ಬಿಜೆಪಿಯ ಯೋಜನೆಗಳ ಬಗ್ಗೆ ಮಾತನಾಡಬೇಕೆಂದು ಒತ್ತಾಯಿಸಿದ್ದಾರೆ.

”ಕಳೆದ ಮೂರು ವರ್ಷಗಳಿಂದ ಕರ್ನಾಟಕದಲ್ಲಿ ನೀವು ಏನು ಮಾಡಿದ್ದೀರಿ ಎಂಬುದನ್ನು ನೀವೇ ಹೇಳಬೇಕು. ಮುಂದಿನ ಐದು ವರ್ಷಗಳಲ್ಲಿ ನೀವು ಏನು ಮಾಡುತ್ತೀರಿ, ಯುವಕರು, ಶಿಕ್ಷಣ, ಆರೋಗ್ಯ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಏನು ಮಾಡುತ್ತೀರಿ ಎಂಬುದರ ಕುರಿತು ನಿಮ್ಮ ಭಾಷಣಗಳಲ್ಲಿ ನೀವು ಮಾತನಾಡಬೇಕು” ಎಂದು ಅವರು ಹೇಳಿದರು.

ಅವಹೇಳನಕಾರಿ ಹೇಳಿಕೆಗಳು ಹೆಚ್ಚುತ್ತಿರುವ ಕಾರಣ ಈ ಸೂಚನೆ ನೀಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಮಾದರಿ ನೀತಿ ಸಂಹಿತೆ ಮತ್ತು ಇತರ ನಿಬಂಧನೆಗಳನ್ನು ನೆನಪಿಸಿರುವ ಆಯೋಗವು ಎಚ್ಚರಿಕೆ ಮತ್ತು ಸಂಯಮದಿಂದ ವರ್ತಿಸುವಂತೆ ಸಲಹೆ ನೀಡಿದೆ. ಅಲ್ಲದೆ, ಉಲ್ಲಂಘಿಸುವವರ ವಿರುದ್ಧ ನಿಯಮಗಳು ಮತ್ತು ಕಾನೂನು ಚೌಕಟ್ಟಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಆಯೋಗವು ಮುಖ್ಯ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ಮತದಾನ ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...