Homeಮುಖಪುಟನ.1ರಿಂದ ಪದವಿ ಕಾಲೇಜು ಆರಂಭ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್

ನ.1ರಿಂದ ಪದವಿ ಕಾಲೇಜು ಆರಂಭ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್

ಈ ವೇಳಾಪಟ್ಟಿಯ ಪ್ರಕಾರ ನವೆಂಬರ್ 1 ರಿಂದ ಪದವಿ ತರಗತಿಗಳು ಆರಂಭವಾಗಲಿದ್ದು, 2021ರ ಆಗಸ್ಟ್‌ 30ಕ್ಕೆ ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳಲಿದೆ. 

- Advertisement -
- Advertisement -

ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷದ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಬಿಡುಗಡೆ ಮಾಡಿದೆ. ನವೆಂಬರ್ 1ರಿಂದ ಪದವಿ ಕಾಲೇಜುಗಳು ಆರಂಭವಾಗಲಿವೆ. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಲ್ ನಿಶಾಂಕ್ ಟ್ವೀಟ್ ಮಾಡಿದ್ದು, ವೇಳಾಪಟ್ಟಿಯನ್ನು ಹಂಚಿಕೊಂಡಿದ್ದಾರೆ.

ಈ ವೇಳಾಪಟ್ಟಿಯ ಪ್ರಕಾರ ನವೆಂಬರ್ 1 ರಿಂದ ಪದವಿ ತರಗತಿಗಳು ಆರಂಭವಾಗಲಿದ್ದು, 2021ರ ಆಗಸ್ಟ್‌ 30ಕ್ಕೆ ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳಲಿದೆ. ಮೊದಲ ಸೆಮಿಸ್ಟರ್ ಪರೀಕ್ಷೆಗಳು 2021ರ ಮಾರ್ಚ್ 8 ರಿಂದ 26ರ ನಡುವೆ ನಡೆಯಲಿದೆ. ಎರಡನೇ ಸೆಮಿಸ್ಟರ್ ಏಪ್ರಿಲ್ 5ರಿಂದ ಆರಂಭವಾಗಲಿದ್ದು, ಆಗಸ್ಟ್‌ನಲ್ಲಿ ಪರೀಕ್ಷೆಗಳು ನಡೆಯಲಿವೆ.

ಪರಿಷ್ಕೃತ ವೇಳಾಪಟ್ಟಿಯನ್ನು ಹಂಚಿಕೊಂಡಿರುವ ಶಿಕ್ಷಣ ಸಚಿವರು ಜೊತೆಗೆ ಇನ್ನೊಂದು ಟ್ವೀಟ್ ಮಾಡಿದ್ದಾರೆ. ’ಲಾಕ್ ಡೌನ್ ಮತ್ತು ಅದಕ್ಕೆ ಸಂಬಂಧಿತ ಅಂಶಗಳಿಂದಾಗಿ ಪೋಷಕರು ಎದುರಿಸುತ್ತಿರುವ ಹಣಕಾಸಿನ ಹೊರೆ ತಪ್ಪಿಸಲು, ನವೆಂಬರ್ 30 ರವರೆಗೆ ವಿದ್ಯಾರ್ಥಿಗಳ ಪ್ರವೇಶ ರದ್ದತಿ / ವಲಸೆ ಮುಂತಾದವುಗಳ ಸಂದರ್ಭದಲ್ಲಿ ವಿದ್ಯಾರ್ಥಿ ಕಟ್ಟಿದ ಶುಲ್ಕವನ್ನು ಪೂರ್ಣ ಮರುಪಾವತಿ ಮಾಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ: ಸೆ. 21ರಿಂದ ಶಾಲಾ-ಕಾಲೇಜು ತೆರೆಯುವುದಿಲ್ಲ!

ಯುಜಿಸಿ ಏಪ್ರಿಲ್ 29ರಂದು ಬಿಡುಗಡೆ ಮಾಡಿದ್ದ ವೇಳಾಪಟ್ಟಿಯ ಪ್ರಕಾರ ಸೆಪ್ಟೆಂಬರ್‌ 1ರಿಂದ ಪದವಿ ಕಾಲೇಜುಗಳು ಆರಂಭವಾಗಬೇಕಿತ್ತು. ಜುಲೈನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಚ್‌ಆರ್‌ಡಿ) ಕಾಲೇಜುಗಳ ವೇಳಾಪಟ್ಟಿಯ ದಿನಾಂಕ ಪರಿಷ್ಕರಿಸಿ, ವಿಶ್ವವಿದ್ಯಾನಿಲಯಗಳಲ್ಲಿ ಸೆಮಿಸ್ಟರ್ / ಅಂತಿಮ ವರ್ಷದ ಪರೀಕ್ಷೆಗಳನ್ನು ಸೆಪ್ಟೆಂಬರ್ ಅಂತ್ಯದ ವೇಳೆಗೆ ನಡೆಸಲಾಗುವುದು ಎಂದು ತಿಳಿಸಿತ್ತು.

“ಕೊನೆಯ ಸೆಮಿಸ್ಟರ್ ಅನ್ನು 2020 ರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಆಫ್‌ಲೈನ್ (ಪೆನ್ ಮತ್ತು ಪೇಪರ್) ಅಥವಾ ಆನ್‌ಲೈನ್ ಅಥವಾ ‌ಎರಡು (ಆನ್‌ಲೈನ್ + ಆಫ್‌ಲೈನ್) ವಿಧಾನದಲ್ಲಾದರೂ ನಡೆಸಲಾಗುವುದು” ಎಂದು ಯುಜಿಸಿ ಪತ್ರವೊಂದರಲ್ಲಿ ತಿಳಿಸಿದೆ. ಸದ್ಯ ಸೆಪ್ಟಂಬರ್‌ 1ಕ್ಕೆ ಆರಂಭವಾಗಬೇಕಿದ್ದ ಪದವಿ ತರಗತಿಗಳನ್ನು ನವೆಂಬರ್‌ 1ಕ್ಕೆ ಮುಂದೂಡಿದೆ.

ರಾಜ್ಯದಲ್ಲೂ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸೆಪ್ಟೆಂಬರ್ 21ರಿಂದ ಹಿನ್ನೆಲೆ ಶಾಲೆ ಮತ್ತು ಪಿಯು ಕಾಲೇಜುಗಳನ್ನು ರೀಓಪನ್ ಮಾಡುವ ನಿರ್ಧಾರವನ್ನು ವಾಪಾಸ್ ತೆಗೆದುಕೊಳ್ಳಲಾಗಿದೆ.


ಇದನ್ನೂ ಓದಿ: ಶಾಲಾ ಶುಲ್ಕ ಮನ್ನಾ ಮಾಡುವ ಪಿಐಎಲ್ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...