Homeಕರ್ನಾಟಕಇಂದು ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟ; ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ

ಇಂದು ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟ; ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಇಂದು (ಮಾರ್ಚ್‌ 29) ಬೆಳಿಗ್ಗೆ 11:30ಕ್ಕೆ ಪ್ರಕಟವಾಗಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಂಭವವಿದೆ.

ಭಾರತೀಯ ಚುನಾವಣಾ ಆಯೋಗವು ದೆಹಲಿಯಲ್ಲಿ ಸುದ್ದಿಗೋಷ್ಠಿ ಕರೆದಿದೆ. 224 ಸದಸ್ಯ ಬಲದ ಕರ್ನಾಟಕ ವಿಧಾನಸಭಾ ಚುನಾವಣಾ ಮತದಾನದ ವೇಳಾಪಟ್ಟಿ ಬಿಡುಗಡೆ ಮಾಡಲಿದೆ. ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಏಪ್ರಿಲ್‌ ಮೊದಲ ವಾರದಲ್ಲಿ ದಿನಾಂಕ ಪ್ರಕಟವಾಗಬಹುದು ಎಂದು ಹೇಳಲಾಗಿತ್ತು. ಆದರೆ, ಚುನಾವಣಾ ಆಯೋಗ ಇಂದೇ ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಗೆ ಸಿದ್ಧವಾಗಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ವೇಳಾಪಟ್ಟಿ ನಿಗದಿ ಮಾಡಲಿದ್ದಾರೆ.

ಇಂದು (ಬುಧವಾರ) ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಯಲಿದ್ದು, ದೆಹಲಿಯ ವಿಜ್ಞಾನ ಭವನದಲ್ಲಿ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ದಿನಾಂಕ ಪ್ರಕಟಿಸಲಿದ್ದಾರೆ.

ಒಂದೇ ಹಂತದಲ್ಲಿ ಮತದಾನ ಸಾಧ್ಯತೆ

2018ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಹಂತದಲ್ಲಿ ಮತದಾನ ಮಾಡಲಾಗಿತ್ತು. ಈ ಬಾರಿಯೂ ಒಂದೇ ಹಂತದಲ್ಲಿ ನಡೆಯುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗ ಮಾ.9ರಂದು ನಡೆಸಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಎಲ್ಲಾ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಬೇಕು ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆಗ್ರಹಿಸಿದ್ದರೆ, ಒಂದಕ್ಕಿಂತ ಹೆಚ್ಚು ಹಂತಗಳಲ್ಲಿ ಚುನಾವಣೆ ನಡೆಸುವಂತೆ ಬಿಜೆಪಿ ಬೇಡಿಕೆ ಇಟ್ಟಿತ್ತು ಎಂದು ಹೇಳಲಾಗಿತ್ತು. ಒಂದೇ ಹಂತದಲ್ಲಿ ನಡೆಯುವ ಎಲ್ಲ ಸಾಧ್ಯತೆಗಳು ಇವೆ.

ಈ ಬಗ್ಗೆ ರಾಜಕೀಯ ಪಕ್ಷಗಳ ಅಭಿಪ್ರಾಯ ಕೇಳುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ ಹಾಗಾಗಿ ರಾಜ್ಯದ ಪ್ರಮುಖ ಪಕ್ಷಗಲ ಅಭಿಪ್ರಾಯ ಕೇಳಲಾಗಿತ್ತು. ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕು ಎಂದೂ ಅಭಿಪ್ರಾಯಗಳು ಬಂದಿವೆ. ಈ ಎಲ್ಲಾ ಅಂಶಗಳನ್ನು ಗಮನಿಸಿ ಆಯೋಗ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಈ ಹಿಂದೆ ಹೇಳಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...