Homeಕರ್ನಾಟಕರಾಜ್ಯ ವಿಧಾನಸಭೆ ಚುನಾವಣೆ: ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

ರಾಜ್ಯ ವಿಧಾನಸಭೆ ಚುನಾವಣೆ: ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಈಗಾಗಲೇ ಘೋಷಣೆಯಾಗಿದ್ದು, ಆಡಳಿತಾರೂಢ ಬಿಜೆಪಿ ಸೋಮವಾರ, 10 ಏಪ್ರಿಲ್ 2023 ರಂದು ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ರವಿವಾರ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ (CEC) ಮೂರು ಗಂಟೆಗಳ ಕಾಲ ಸಭೆ ನಡೆಸಿತು.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಸಿಇಸಿಯ ಇತರ ಸದಸ್ಯರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಿದರು.

ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ”ಪ್ರಧಾನಿ ಮೋದಿ ಅವರು ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ ಮತ್ತು ಸೋಮವಾರ ಅಥವಾ ಮಂಗಳವಾರ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು ಎಂದು ಹೇಳಿದರು. ಈ ವೇಳೆ ಅವರು ಶಿಗ್ಗಾಂವ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದರು.

ಇದನ್ನೂ ಓದಿ: ಚುನಾವಣೆ ಎದುರಿಸಲು ಬಿಜೆಪಿ ರೌಡಿಗಳ ಮೊರೆ ಹೋಗುತ್ತಿದೆ: ಕಾಂಗ್ರೆಸ್ ಆರೋಪ

”ದಕ್ಷಿಣ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಗುರಿ ಹೊಂದಿರುವ ಬಿಜೆಪಿ 224 ಸ್ಥಾನಗಳಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 80 ಮತ್ತು ಜೆಡಿಎಸ್ 37 ಸ್ಥಾನಗಳನ್ನು ಗೆದ್ದುಕೊಂಡಿತು.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ವಿಧಾನಸಭೆಯ ಮತ ಎಣಿಕೆ ನಡೆಯಲಿದೆ.

ಕರ್ನಾಟಕ ಚುನಾವಣೆಗೆ ಕಾಂಗ್ರೆಸ್ ಮತ್ತು ಜನತಾದಳ ಕ್ರಮವಾಗಿ 166 ಮತ್ತು 93 ಅಭ್ಯರ್ಥಿಗಳನ್ನು ಇಲ್ಲಿಯವರೆಗೆ ಘೋಷಿಸಿವೆ. ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳನ್ನು ಮತ್ತು ಎರಡನೇ ಪಟ್ಟಿಯಲ್ಲಿ 42 ಅಭ್ಯರ್ಥಿಗಳನ್ನು ಘೋಷಿಸಿತ್ತು.

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ, ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಐದನೇ ಕಾರ್ಯಾಧ್ಯಕ್ಷರಾಗಿ ಮಾಜಿ ಲೋಕಸಭೆ ಬಿಎನ್ ಚಂದ್ರಪ್ಪ ಅವರನ್ನು ನೇಮಕ ಮಾಡಿದರು.

ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರೆ, ಪಕ್ಷವು ಈಗಾಗಲೇ ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸಲೀಂ ಅಹಮದ್ ಮತ್ತು ಸತೀಶ್ ಜಾರಕಿಹೊಳಿ ಕಾರ್ಯಾಧ್ಯಕ್ಷರನ್ನು ಹೊಂದಿದೆ. ನೂತನ ಕಾರ್ಯಾಧ್ಯಕ್ಷ ಚಂದ್ರಪ್ಪ ಅವರು 2014-19ರಲ್ಲಿ ಚಿತ್ರದುರ್ಗದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...